ಶ್ರೀಹರಿಕೋಟಾ: ಭೂವೀಕ್ಷಣಾ ಕಿರು ಉಪಗ್ರಹ ಇಒಎಸ್-08 ಉಡ್ಡಯನ ಯಶಸ್ವಿಯಾಗಿದೆ. ಬೆಂಗಳೂರಿನ ಬಾಹ್ಯಾಕಾಶ ಕೇಂದ್ರದಿಂದ ನಿರ್ವಹಿಸಲಾಗುತ್ತಿರುವ ಮೂರನೇ ಮಿಷನ್ ಇದಾಗಿರುವುದು ವಿಶೇಷ.
ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಇಂದು ಬೆಳಿಗ್ಗೆ 9.17ಕ್ಕೆ ಸರಿಯಾಗಿ ಶ್ರೀಹರಿಕೋಟಾದ ಸತೀಶ್ ಧವನ್ ಉಡ್ಡಯನ ಕೇಂದ್ರದಿಂದ ನ್ಯೂಸ್ಪೇಸ್ ಇಂಡಿಯಾ ಲಿಮಿಟೆಡ್ ನಿರ್ಮಿಸಿರುವ ಎಸ್‌ಎಲ್‌ಎಲ್‌ವಿ -ಡಿ3 ಕಿರು ಉಪಗ್ರಹ ಹೊತ್ತ ರಾಕೇಟ್‌ನ್ನು ಯಶಸ್ವಿಯಾಗಿ ಉಡ್ಡಯನ ಮಾಡಲಾಯಿತು.
ಈ ಇಒಎಸ್-08 ಮೈಕ್ರೋಸ್ಯಾಟಲೈಟ್ ವಿನ್ಯಾಸ, ಅಭಿವೃದ್ಧಿ ಹಾಗೂ ಉಪಗ್ರಹಗಳ ಕಾರ್ಯಾಚರಣೆಗಳನ್ನು ಗಮನದಲ್ಲಿಟ್ಟುಕೊಂಡು ಅಭಿವೃದ್ಧಿಪಡಿಸಲಾಗಿದೆ.
175.5 ಕೆಜಿ ತೂಕದ ಕಿರು ಪುಗ್ರಹ ಮೂರು ಪೆಲೋಡ್‌ಗಳನ್ನು ಒಳಗೊಂಡಿದೆ. ಇಒಐಆರ್, ಜಿಎನ್‌ಎಸ್‌ಎಸ್-ಆರ್ ಮತ್ತು ಎಸ್‌ಐಸಿ ಯುವಿ ಡೊಸೀಮೀಟರ್‌ನ್ನು ಹೊಂದಿದೆ.
SSLV-D3/EOS-08 ಮಿಷನ್: ಎಸ್‌ಎಸ್‌ಎಲ್‌ವಿಯ ಮೂರನೇ ಅಭಿವೃದ್ಧಿ ಹಾರಾಟ ಯಶಸ್ವಿಯಾಗಿದೆ. SSLV-D3 EOS-08 ಅನ್ನು ನಿಖರವಾಗಿ ಕಕ್ಷೆಗೆ ಸೇರಿಸಿತು.
ಇದು ISRO/DOS ನ SSLV ಡೆವಲಪ್‌ಮೆಂಟ್ ಪ್ರಾಜೆಕ್ಟ್ ಅನ್ನು ಯಶಸ್ವಿಯಾಗಿ ಪೂರ್ಣಗೊಳಿಸಿರುವುದನ್ನು ಸೂಚಿಸುತ್ತದೆ.
ತಂತ್ರಜ್ಞಾನ ವರ್ಗಾವಣೆಯೊಂದಿಗೆ, ಭಾರತೀಯ ಉದ್ಯಮ ಮತ್ತು ಎನ್‌ಎಸ್‌ಐಎಲ್ ಈಗ ವಾಣಿಜ್ಯ ಕಾರ್ಯಾಚರಣೆಗಳಿಗಾಗಿ SSLV ಅನ್ನು ಉತ್ಪಾದಿಸುತ್ತದೆ.
ನವೀನ್ ಡಿಸೋಜ ೧,೯೪೬ ಲಸಿಕೆದಾರರು, ೮೫ ಮೇಲ್ವಿಚಾರಕರು ೯೭೩ ಮನೆ ಭೇಟಿ ನೀಡುವ ತಂಡ ರಚನೆ ಪ್ರವಾಸಿಗರು, ವಲಸೆ ಕಾರ್ಮಿಕರ…
ಸೂರ್ಯಪುತ್ರ ಯಾರಾದ್ರೂ ಮತ್ತೆ ಮತ್ತೆ ಸಿಗ್ತಾನೆ ಇದ್ರೆ ‘ಭೂಮಿ ದುಂಡಗಿದೆ, ಅದ್ಕೆ ಮತ್ತೆ ಮತ್ತೆ ಎದುರುಬದುರಾಗೋದು’ ಅನ್ನೋ ಮಾತು ಕೇಳಿರ್ತೇವೆ.…
ತೀರಿಹೋದ ಕನ್ನಡದ ಹಿರಿಯ ಸಾಹಿತಿ ಡಾ.ಎಸ್.ಎಲ್.ಭೈರಪ್ಪನವರಿಗೆ ಮೈಸೂರಿನಲ್ಲಿ ಸ್ಮಾರಕ ನಿರ್ಮಿಸಲಾಗುವುದು ಎಂದು ರಾಜ್ಯದ ಮುಖ್ಯಮಂತ್ರಿಗಳು ಘೋಷಿಸಿದ್ದಾರೆ. ಈ ಉದ್ದೇಶಿತ ಸ್ಮಾರಕದ…
ಮೈಸೂರು : ಆಧುನಿಕ ಕಾಲಕ್ಕೆ ತಕ್ಕಂತೆ ಮನ್ರೇಗಾ ಹೆಸರನ್ನು ಕೇಂದ್ರ ಸರ್ಕಾರ ಬದಲಾಯಿಸಿದೆ. ಆದರೆ, ಕಾಂಗ್ರೆಸ್ ಮಾಡುತ್ತಿರುವ ಆರೋಪಕ್ಕೆ ಯಾವ…
ಬೆಳಗಾವಿ : ರಾಜ್ಯ ಸರ್ಕಾರ ರೈತ ಪರ ಸರಕಾರವಾಗಿದ್ದು, ಕಬ್ಬು ಬೆಳೆಯುವ ಪ್ರದೇಶದಲ್ಲಿ ಮಣ್ಣಿನ ಆರೋಗ್ಯ ಮತ್ತು ನೀರಿನ ಸಮಗ್ರ…