ದೇಶ- ವಿದೇಶ

ದೇಶಾದ್ಯಂತ ಎಸ್ಮಾ ಜಾರಿ : ಗ್ಯಾಸ್‌ ಪೂರೈಕೆಯಲ್ಲಿ ವ್ಯತ್ಯಯವಾದ್ರೆ ಜೈಲು!

ಹೊಸದಿಲ್ಲಿ : ಜಾಗತಿಕ ರಾಜಕೀಯ ವಿದ್ಯಮಾನಗಳು ಮತ್ತು ಮಧ್ಯಪ್ರಾಚ್ಯದಲ್ಲಿ ಹೆಚ್ಚುತ್ತಿರುವ ಯುದ್ಧದ ಭೀತಿಯ ಹಿನ್ನೆಲೆಯಲ್ಲಿ, ಭಾರತ ಸರ್ಕಾರವು ದೇಶದ ಇಂಧನ ಭದ್ರತೆಯನ್ನು ಕಾಪಾಡಲು ಅತ್ಯಂತ ಕಠಿಣ ನಿರ್ಧಾರವನ್ನು ಕೈಗೊಂಡಿದೆ. ದೇಶಾದ್ಯಂತ ಅಡುಗೆ ಅನಿಲ (LPG) ಮತ್ತು ಇಂಧನ ಪೂರೈಕೆಯಲ್ಲಿ ಯಾವುದೇ ಅಡೆತಡೆ ಉಂಟಾಗದಂತೆ ತಡೆಯಲು ಕೇಂದ್ರ ಸರ್ಕಾರವು ಅಗತ್ಯ ಸೇವೆಗಳ ನಿರ್ವಹಣಾ ಕಾಯ್ದೆ-1968 (ESMA-ಎಸ್ಮಾ) ಅನ್ನು ಇಡೀ ದೇಶದಲ್ಲಿ ಅಧಿಕೃತವಾಗಿ ಜಾರಿಗೊಳಿಸಿದೆ.

ಈ ಆದೇಶದ ಅನ್ವಯ, ತೈಲ ಸಂಸ್ಕರಣಾಗಾರ ಮತ್ತು ಪೆಟ್ರೋಕೆಮಿಕಲ್ ಕಂಪನಿಗಳು ತಮ್ಮ ಉತ್ಪಾದನಾ ಸಾಮರ್ಥ್ಯವನ್ನು ಗರಿಷ್ಠ ಮಟ್ಟದ ಎಲ್‌ಪಿಜಿ ಉತ್ಪಾದನೆಗೆ ಬಳಸಿಕೊಳ್ಳಬೇಕು ಎಂದು ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ. ಅಷ್ಟೇ ಅಲ್ಲದೆ, ಹೈಡ್ರೋಕಾರ್ಬನ್ ಘಟಕಗಳನ್ನು ಎಲ್‌ಪಿಜಿ ಉತ್ಪಾದನೆಯತ್ತ ತಿರುಗಿಸುವಂತೆ ನಿರ್ದೇಶನ ನೀಡಲಾಗಿದ್ದು, ಇದರೊಂದಿಗೆ ಅಗತ್ಯ ವಸ್ತುಗಳ ಕಾಯ್ದೆ-1955 ಅನ್ನು ಸಹ ಜಾರಿಗೆ ತರಲಾಗಿದೆ.

ಏನಿದು ಎಸ್ಮಾ (ESMA) ಕಾನೂನು?
ಎಸ್ಮಾ ಎಂದರೆ ‘ಎಸೆನ್ಷಿಯಲ್ ಸರ್ವಿಸಸ್ ಮೇಂಟೆನೆನ್ಸ್ ಆಕ್ಟ್’ (Essential Services Maintenance Act). 1968 ರಲ್ಲಿ ಸಂಸತ್ತು ಅಂಗೀಕರಿಸಿದ ಈ ಕಾಯ್ದೆಯು ಸಾರ್ವಜನಿಕ ಹಿತದೃಷ್ಟಿಯಿಂದ ಅತ್ಯಗತ್ಯವಾದ ಸೇವೆಗಳನ್ನು ಯಾವುದೇ ಅಡೆತಡೆಯಿಲ್ಲದೆ ಸುಗಮವಾಗಿ ನಡೆಸಲು ಸರ್ಕಾರಕ್ಕೆ ಅಸಾಧಾರಣ ಅಧಿಕಾರವನ್ನು ನೀಡುತ್ತದೆ. ಜನಸಾಮಾನ್ಯರ ದೈನಂದಿನ ಜೀವನಕ್ಕೆ ತೊಂದರೆಯಾಗುವಂತಹ ಮುಷ್ಕರ ಅಥವಾ ಕೆಲಸ ಸ್ಥಗಿತದ ಸಂದರ್ಭಗಳಲ್ಲಿ ಈ ಕಾನೂನನ್ನು ಅಸ್ತ್ರವಾಗಿ ಬಳಸಲಾಗುತ್ತದೆ.

ಎಸ್ಮಾ ಅಡಿಯಲ್ಲಿ ಬರುವ ಪ್ರಮುಖ 5 ಸೇವೆಗಳು:

ಈ ಕಾಯ್ದೆಯು ಜಾರಿಯಲ್ಲಿದ್ದಾಗ ಕೆಳಕಂಡ ಸೇವೆಗಳಲ್ಲಿ ಯಾವುದೇ ವ್ಯತ್ಯಯವಾಗುವಂತಿಲ್ಲ:

ಸಾರ್ವಜನಿಕ ಸಾರಿಗೆ : ಬಸ್, ರೈಲು ಹಾಗೂ ವಿಮಾನ ಯಾನ ಸೇವೆಗಳು

ಆರೋಗ್ಯ ಸೇವೆಗಳು : ವೈದ್ಯರು, ದಾದಿಯರು ಮತ್ತು ಆಸ್ಪತ್ರೆಗಳ ತುರ್ತು ಸೇವೆಗಳು

ಮೂಲಸೌಕರ್ಯ : ನೀರು ಸರಬರಾಜು, ನೈರ್ಮಲ್ಯ ಮತ್ತು ವಿದ್ಯುತ್ ಶಕ್ತಿ ವಿತರಣೆ

ಉತ್ಪಾದನಾ ಘಟಕಗಳು : ಪೆಟ್ರೋಲಿಯಂ, ಕಲ್ಲಿದ್ದಲು, ಉಕ್ಕು ಮತ್ತು ರಸಗೊಬ್ಬರ ಉತ್ಪಾದನೆ ಹಾಗೂ ವಿತರಣೆ

ಹಣಕಾಸು ಮತ್ತು ಆಹಾರ: ಬ್ಯಾಂಕಿಂಗ್ ಸೇವೆಗಳು ಮತ್ತು ಸಾರ್ವಜನಿಕ ಆಹಾರ ಧಾನ್ಯಗಳ ವಿತರಣಾ ವ್ಯವಸ್ಥೆ.

ನಿಯಮ ಉಲ್ಲಂಘಿಸಿದರೆ ಕಠಿಣ ಶಿಕ್ಷೆ!
ಎಸ್‌ಮಾ ಜಾರಿಯಾದ ನಂತರ ಯಾವುದೇ ಸರ್ಕಾರಿ ಅಥವಾ ಖಾಸಗಿ ಸಂಸ್ಥೆಯ ನೌಕರರು ಅಥವಾ ಸಂಘಟನೆಗಳು ಮುಷ್ಕರ ನಡೆಸುವಂತಿಲ್ಲ. ಒಂದು ವೇಳೆ ನಿಯಮ ಉಲ್ಲಂಘಿಸಿದರೆ ಈ ಕೆಳಗಿನ ಕ್ರಮಗಳನ್ನು ಎದುರಿಸಬೇಕಾಗುತ್ತದೆ:

ವಾರೆಂಟ್ ಇಲ್ಲದೆ ಬಂಧನ : ಈ ಕಾಯ್ದೆಯಡಿ ಯಾವುದೇ ಪೊಲೀಸ್ ಅಧಿಕಾರಿಗೆ ಮುಷ್ಕರ ನಿರತರನ್ನು ಅಥವಾ ಪ್ರಚೋದನೆ ನೀಡುವವರನ್ನು ವಾರೆಂಟ್ ಇಲ್ಲದೆ ಬಂಧಿಸುವ ಅಧಿಕಾರವಿರುತ್ತದೆ

ಜೈಲು ಮತ್ತು ದಂಡ : ನಿಯಮ ಮೀರಿದವರಿಗೆ 1 ವರ್ಷದವರೆಗೆ ಜೈಲು ಶಿಕ್ಷೆ ಅಥವಾ ಭಾರಿ ಮೊತ್ತದ ದಂಡ ಅಥವಾ ಎರಡನ್ನೂ ವಿಧಿಸಲು ಅವಕಾಶವಿದೆ

ಕೆಲಸದಿಂದ ವಜಾ : ಮುಷ್ಕರದಲ್ಲಿ ಪಾಲ್ಗೊಂಡ ಅಥವಾ ಕೆಲಸಕ್ಕೆ ಅಡ್ಡಿಪಡಿಸಿದ ನೌಕರರನ್ನು ಯಾವುದೇ ಮುನ್ಸೂಚನೆ ಇಲ್ಲದೆ ಕೆಲಸದಿಂದ ವಜಾ ಮಾಡುವ ಅಧಿಕಾರ ಸರ್ಕಾರಕ್ಕಿದೆ

ಅವಧಿ : ಒಮ್ಮೆ ಜಾರಿಯಾದ ಈ ಕಾನೂನು ಗರಿಷ್ಠ 6 ತಿಂಗಳವರೆಗೆ ಚಾಲ್ತಿಯಲ್ಲಿರುತ್ತದೆ

ಅಗತ್ಯ ವಸ್ತುಗಳ ಕಾಯ್ದೆ-1955 (Essential Commodities Act) ಎಂದರೇನು?

ಇದು ಅಗತ್ಯ ವಸ್ತುಗಳ ಉತ್ಪಾದನೆ, ಪೂರೈಕೆ ಮತ್ತು ವಿತರಣೆಯನ್ನು ನಿಯಂತ್ರಿಸಲು ಸರ್ಕಾರಕ್ಕೆ ನೀಡಲಾದ ಶಕ್ತಿಯಾಗಿದೆ. ಕಾಳಸಂತೆ ತಡೆಯುವುದು ಮತ್ತು ಅಕ್ರಮ ದಾಸ್ತಾನು ಮಾಡುವುದನ್ನು ತಡೆಯುವುದು ಇದರ ಮುಖ್ಯ ಉದ್ದೇಶವಾಗಿದೆ.

ಈ ಕಾಯ್ದೆಯ ವ್ಯಾಪ್ತಿಗೆ ಔಷಧಗಳು, ರಸಗೊಬ್ಬರ, ಪೆಟ್ರೋಲಿಯಂ ಉತ್ಪನ್ನಗಳು ಮತ್ತು ಕೃಷಿ ಬೀಜಗಳು ಬರುತ್ತವೆ. ಯುದ್ಧ ಅಥವಾ ನೈಸರ್ಗಿಕ ವಿಕೋಪದಂತಹ ಅಸಾಮಾನ್ಯ ಸಂದರ್ಭಗಳಲ್ಲಿ ಜನರಿಗೆ ವಸ್ತುಗಳ ಕೊರತೆಯಾಗದಂತೆ ಸರ್ಕಾರ ಇದನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುತ್ತದೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಮಂಡ್ಯ ಕೋರ್ಟ್‌ಗೆ ಮತ್ತೆ ಬಾಂಬ್ ಬೆದರಿಕೆ : ಸ್ಥಳಕ್ಕೆ ಪೊಲೀಸ್-ಬಾಂಬ್ ಸ್ಕ್ವಾಡ್ ದೌಡು

ಮಂಡ್ಯ : ಮಂಡ್ಯ ಜಿಲ್ಲಾ ನ್ಯಾಯಾಲಯಕ್ಕೆ ಮತ್ತೊಮ್ಮೆ ಬಾಂಬ್ ಬೆದರಿಕೆ ಬಂದಿದ್ದು, ಇ-ಮೇಲ್ ಮೂಲಕ “ಕೋರ್ಟ್‌ನಲ್ಲಿ ಬಾಂಬ್ ಇಟ್ಟಿದ್ದೇವೆ” ಎಂದು…

4 mins ago

ಯುದ್ಧ ನಿಲ್ಲಿಸಲು 3 ಷರತ್ತು ಮುಂದಿಟ್ಟ ಇರಾನ್‌!

ಹೊಸದಿಲ್ಲಿ : ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಬೆನ್ನಲ್ಲೇ ಅಮೆರಿಕಾ ಹಾಗೂ ಇಸ್ರೇಲ್ ಜೊತೆ ನಡೆಯುತ್ತಿರುವ ಸಂಘರ್ಷವನ್ನು ಅಂತ್ಯಗೊಳಿಸಲು…

14 mins ago

ಅಮೆರಿಕ ತೈಲ ಟ್ಯಾಂಕರ್ ಮೇಲೆ ಇರಾನ್ ಡ್ರೋನ್ ದಾಳಿ, ಭಾರತೀಯ ನಾವಿಕ ಸಾವು

ಹೊಸದಿಲ್ಲಿ : ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಯುದ್ಧ ಪರಿಸ್ಥಿತಿ ದಿನದಿಂದ ದಿನಕ್ಕೆ ಮತ್ತಷ್ಟು ಉದ್ವಿಗ್ನವಾಗುತ್ತಿದೆ. ಇರಾನ್ ಹಾಗೂ ಅಮೆರಿಕ-ಇಸ್ರೇಲ್ ನಡುವಿನ ಸಂಘರ್ಷದ…

34 mins ago

ವಿಶ್ವಕಪ್‌ ಗೆದ್ದ ಬಳಿಕ ರೈಲು ಹತ್ತಿ ಬಂದ ಶಿವಂ ದುಬೆ!

ಮುಂಬೈ : ಭಾರತ ತಂಡ ಟಿ20 ವಿಶ್ವಕಪ್ 2026ರಲ್ಲಿ ನ್ಯೂಜಿಲೆಂಡ್‌ನ್ನು 96 ರನ್‌ಗಳಿಂದ ಮಣಿಸಿ ಐತಿಹಾಸಿಕ ಗೆಲುವು ಸಾಧಿಸಿದೆ. ಫೈನಲ್‌ನಲ್ಲಿ…

48 mins ago

ಫಾರುಕ್ ಹತ್ಯೆ ಯತ್ನ : ಆರೋಪಿ ಕಮಲ್‌ ಸಿಂಗ್‌ ಹೇಳಿದ್ದೇನು?

ಜಮ್ಮು : ರಾಷ್ಟ್ರೀಯ ಸಮ್ಮೇಳನ ಅಧ್ಯಕ್ಷ ಹಾಗೂ ಮಾಜಿ ಮುಖ್ಯಮಂತ್ರಿ ಡಾ. ಫಾರುಕ್ ಅಬ್ದುಲ್ಲಾ ಅವರ ಮೇಲೆ ಬುಧವಾರ ಸಂಜೆ…

1 hour ago

ಅಡುಗೆ ಅನಿಲ ಕೊರತೆ ; ಸಂಸದರು ಬಾಯಿ ಬಿಡಬೇಕು ; ಡಿ.ಕೆ.ಶಿವಕುಮಾರ್‌

ಬೆಂಗಳೂರು : ಬೇರೆ ವಿಚಾರಗಳಲ್ಲಿ ಮಾತನಾಡುವ ಸಂಸದರು ಅಡುಗೆ ಅನಿಲ ಕೊರತೆ ವಿಚಾರವಾಗಿ ಸಂಸತ್ತಿನಲ್ಲಿ ಮಾತನಾಡಬೇಕು. ರಾಜ್ಯಕ್ಕೆ ನ್ಯಾಯ ಒದಗಿಸಿಕೊಡಬೇಕು…

2 hours ago