ನವದೆಹಲಿ: ಜಿಲ್ಲೆಯ ಸಮಗ್ರ ಅಭಿವೃದ್ದಿಗಾಗಿ ಬೆಂಗಳೂರಲ್ಲಿ ಕೈಗಾರಿಕೆ ಬೇಡಿಕೆ ಆಧಾರಿತ ಬಹು ಕೌಶಲ್ಯ ಅಭಿವೃದ್ದಿ ಕೇಂದ್ರ ಮಂಜೂರು ಮಾಡುವಂತೆ ಆಹಾರ ಸಚಿವ ಕೆ.ಹೆಚ್.ಮುನಿಯಪ್ಪ ಅವರು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆಗೆ ಮನವಿ ಮಾಡಿದ್ದಾರೆ.
ನವದೆಹಲಿಯಲ್ಲಿ ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ ಖಾತೆ ಸಚಿವೆ ಶೋಭಾ ಕರಂದ್ಲಾಜೆ ಅವರನ್ನು ಭೇಟಿ ಮಾಡಿದ ಮುನಿಯಪ್ಪ ಅವರು ಬೇಡಿಕೆ ಸಲ್ಲಿಸಿದ್ದಾರೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಉದ್ಯಮ ಪೋರ್ಟಲ್‌ನಲ್ಲಿ 45,000 MSME ಘಟಕಗಳು ನೋದಣಿಯಾಗಿದ್ದು, ಅಂದಾಜು ನಾಲ್ಕು ಲಕ್ಷ ಜನರಿಗೆ ಉದ್ಯೋಗವಕಾಶಗಳನ್ನು ಒದಗಿಸುತ್ತಿವೆ ಎಂದು ಕೇಂದ್ರ ಸಚಿವರ ಗಮನಕ್ಕೆ ತಂದರು.
ಬೇಡಿಕೆ ಆಧಾರಿತ ಕೌಶಲ್ಯ ತರಬೇತಿ ಕಾರ್ಯಕ್ರಮಗಳ ಮೂಲಕ ನಾವು ಉದ್ಯಮದ ಅವಶ್ಯಕತೆಗಳು ಮತ್ತು ಲಭ್ಯವಿರುವ ಮಾನವ ಸಂಪನ್ಮೂಲಗಳ ನಡುವಿನ ಅಂತರ ಕಡಿಮೆ ಮಾಡಬಹುದಾಗಿದೆ ಎಂದು ಚರ್ಚಿಸಿದ್ದಾರೆ.
ಈ ನಿಟ್ಟಿನಲ್ಲಿ ದೇವನಹಳ್ಳಿ ತಾಲೂಕಿಗೆ ಬಹು ಕೌಶಲ್ಯ ಅಭಿವೃದ್ದಿ ಕೇಂದ್ರವನ್ನು ಶೀಘ್ರವಾಗಿ ಮಂಜೂರು ಮಾಡುವಂತೆ ವಿನಂತಿಸಿದರು.
ಮಂಗಳೂರು: ಪ್ರಚೋದನಕಾರಿ ಭಾಷಣ ಮಾಡಿ ಕೋಮುದ್ವೇಷಕ್ಕೆ ಕಾರಣರಾದ ಚಕ್ರವರ್ತಿ ಸೂಲಿಬೆಲೆ ವಿರುದ್ಧ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಮಾರ್ಚ್…
ಗುಂಡ್ಲುಪೇಟೆ : ನಡುರಸ್ತೆಯಲ್ಲಿ ಗೂಡ್ಸ್ ವಾಹನ ಹೊತ್ತಿ ಉರಿದ ಘಟನೆ ಗುಂಡ್ಲುಪೇಟೆ ತಾಲೂಕಿನ ಮದ್ದೂರು ಚೆಕ್ ಪೋಸ್ಟ್ ಬಳಿ ಸೋಮವಾರ…
ಮೈಸೂರು : ಇಲ್ಲಿನ ವಿಜಯನಗರದ ನಾಲ್ಕನೇ ಹಂತದಲ್ಲಿ ರಸ್ತೆ ಬದಿ ಕಸ ಸುರಿಯುತ್ತಿರುವುದು ದಿನೇ ದಿನೇ ಹೆಚ್ಚುತ್ತಿದೆ. ಹೀಗಾಗಿ ರಸ್ತೆ…
ಬೆಂಗಳೂರು: ಹಾಸನ ಜಿಲ್ಲೆಯ ಬೇಲೂರು ತಾಲ್ಲೂಕಿನ ಕೋಗೋಡು ಗ್ರಾಮದಲ್ಲಿ ಕಾಡಾನೆ ದಾಳಿಯಿಂದ ಬಲಿಯಾದ ಮಹಿಳೆಯ ಕುಟುಂಬಕ್ಕೆ 20 ಲಕ್ಷ ರೂ.…
ಬೆಂಗಳೂರು: ಒಳ್ಳೆತನದಲ್ಲಿ ಅಪ್ಪು ಸರ್ ಯಾವಾಗಲೂ ಜೀವಂತವಾಗಿರುತ್ತಾರೆ ಎಂದು ನಿರೂಪಕಿ ಅನುಶ್ರೀ, ಪುನೀತ್ ರಾಜ್‌ಕುಮಾರ್ ಅವರ 50ನೇ ಹುಟ್ಟುಹಬ್ಬದ ದಿನದಂದು…
ಗೋಣಿಕೊಪ್ಪಲು : ತೋಟದ ಕೆರೆಯಲ್ಲಿ ಆಕಸ್ಮಿಕವಾಗಿ ಬಿದ್ದ ಬಾಲಕಿಯೊಬ್ಬಳು ಮೇಲಕ್ಕೆ ಬರಲಾಗದೇ ಉಸಿರು ಚೆಲ್ಲಿರುವ ಧಾರುಣ ಘಟನೆ ಇಲ್ಲಿನ ಸಮೀಪದ…