ಹೊಸದಿಲ್ಲಿ : ಪ್ರಧಾನಿ ನರೇಂದ್ರ ಮೋದಿ ಅವರಿಗೆ ಇಥಿಯೋಪಿಯಾದ ಅತ್ಯುನ್ನತ ಪ್ರಶಸ್ತಿ ‘ದಿ ಗ್ರೇಟ್ ಆನರ್ ನಿಶಾನ್ ಆಫ್ ಇಥಿಯೋಪಿಯಾ’ ಪ್ರಶಸ್ತಿಯ ಗೌರವ ದೊರೆತಿದೆ.
ಇಥಿಯೋಪಿಯಾದ ಪ್ರಧಾನಿ ಅಬಿಯ್ ಅಹ್ಮದ್ ಅಲಿ ಪ್ರಶಸ್ತಿ ಪ್ರದಾನ ಮಾಡಿದರು. ಮಂಗಳವಾರ ಇಥಿಯೋಪಿಯಾ ರಾಜದಾನಿ ಅಡಿಸ್ ಅಬಬಾದ ಅಂತರರಾಷ್ಟ್ರೀಯ ಕನ್ವೆನ್ಷನ್ ಕೇಂದ್ರದಲ್ಲಿ ಆಯೋಜಿಸಲಾದ ವಿಶೇಷ ಸಮಾರಂಭದಲ್ಲಿ ಪ್ರಧಾನಿ ಮೋದಿ ಅವರಿಗೆ ಈ ಪ್ರಶಸ್ತಿಯನ್ನು ಪ್ರದಾನ ಮಾಡಲಾಯಿತು.
ಇದನ್ನೂ ಓದಿ :-ಧರ್ಮಸ್ಥಳ ಪ್ರಕರಣ : ಚಿನ್ನಯ್ಯಗೆ ಕೊನೆಗೂ ಬಿಡುಗಡೆ ಭಾಗ್ಯ
ಭಾರತ-ಇಥಿಯೋಪಿಯಾ ಪಾಲುದಾರಿಕೆಯನ್ನು ಬಲಪಡಿಸುವಲ್ಲಿ ಅವರ ಅಸಾಧಾರಣ ಕೊಡುಗೆ ಮತ್ತು ಜಾಗತಿಕ ರಾಜಕಾರಣಿಯಾಗಿ ಅವರ ದೂರದೃಷ್ಟಿಯ ನಾಯಕತ್ವಕ್ಕಾಗಿ ಪ್ರಧಾನಿ ಮೋದಿ ಅವರಿಗೆ ಈ ಪ್ರಶಸ್ತಿಯನ್ನು ಪ್ರದಾನ ಮಾಡಲಾಗಿದೆ ಎಂದು ವಿದೇಶಾಂಗ ಸಚಿವಾಲಯ ಹೇಳಿಕೆಯಲ್ಲಿ ತಿಳಿಸಿದೆ. ಈ ಪ್ರಶಸ್ತಿಯನ್ನು ಪಡೆದ ಬೇರೆ ದೇಶದ ಮೊದಲ ನಾಯಕ ಪ್ರಧಾನಿ ಮೋದಿ ಎಂದು ವರದಿ ತಿಳಿಸಿದೆ.
ಇಥಿಯೋಪಿಯಾದ ಅತ್ಯುನ್ನತ ‘ನಿಶಾನ್ ಆಫ್ ಇಥಿಯೋಪಿಯಾ’ ಪ್ರಶಸ್ತಿ ಲಭಿಸಿದ್ದು, ಇದನ್ನು ನಾನು 140 ಕೋಟಿ ಭಾರತೀಯರಿಗೆ ಅರ್ಪಿಸುತ್ತೇನೆ ಎಂದು ಮೋದಿ, ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.





