ನವದೆಹಲಿ: ರಾಜ್ಯ ಕಾಂಗ್ರೆಸ್ ಪಕ್ಷದ ಎಲ್ಲ ನಾಯಕರಿಗೂ ಸಿಎಂ ಆಗುವ ಅವಕಾಶವಿದೆ. ಆದರೆ, ಸಿಎಂ ಬಗ್ಗೆ ಹೈಕಮಾಂಡ್ ನಿರ್ಧಾರವೇ ಅಂತಿಮವಾಗಿರುತ್ತದೆ ಎಂದು ಉನ್ನತ ಶಿಕ್ಷಣ ಸಚಿವ ಎಂಸಿ ಸುಧಾಕರ್ ಹೇಳಿದ್ದಾರೆ.
ಇಂದು (ಫೆ.3) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡಿಸಿಎಂ ಡಿಕೆ ಶಿವಕುಮಾರ್ ಸಿಎಂ ಅಗಬೇಕೆಂದು ಮಾಗಡಿ ಶಾಸಕ ಬಾಲಕೃಷ್ಣ ಹೇಳಿದ್ದಾರೆ. ಆದರೆ ಯಾವಾಗ ಆಗಬೇಕು ಎಂದು ತಿಳಿಸಿಲ್ಲ. ಹೋದ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಹೆಚ್ಚು ಸ್ಥಾನ ಗೆದ್ದ ನಂತರ ಸಿದ್ದರಾಮಯ್ಯ ಜೊತೆ ಡಿಕೆ ಶಿವಕುಮಾರ್ ಕೂಡ ಸಿಎಂ ರೇಸ್‌ನಲ್ಲಿ ಇದ್ದರು. ಆದರೆ, ಸಿಎಂ ಬಗ್ಗೆ ಹೈಕಮಾಂಡ್ ತೀರ್ಮಾನವೇ ಅಂತಿಮ, ಇವರ ಹೇಳಿಕೆ ಬಗ್ಗೆ ವಿಶ್ಲೇಷಣೆ ಆಗತ್ಯವಿಲ್ಲ ಎಂದು ಹೇಳಿದರು.
ಸಚಿವರು, ಹೈಕಮಾಂಡ್ ನಾಯಕರನ್ನ ಭೇಟಿ ಮಾಡುವ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಅವರು, ಕೆಲವು ಸಚಿವರು ವೈಯುಕ್ತಿಕ ಕಾರಣಕ್ಕೆ ಬರಬಹುದು. ಇನ್ನು ಕೆಲವರು ರಾಜ್ಯದ ಅಭಿವೃದ್ದಿಗೆ ಸಂಬಂಧಿಸಿದಂತೆ ಅನುದಾನಗಳ ಕುರಿತು ಚರ್ಚಿಸಲು ಬರಬಹುದು ಎಂದು ತಿಳಿಸಿದರು.