ಮಧ್ಯಪ್ರದೇಶ: ನಿನ್ನೆ (ಮೇ.7) ದೇಶಾದ್ಯಂತ ನಡೆದ ಮೂರನೇ ಹಂತದ ಚುನಾವಣೆಯಲ್ಲಿ ಒಟ್ಟು 92ಕ್ಷೇತ್ರಗಳಿಗೆ ಮತದಾನ ನಡೆದಿದೆ. ಇನ್ನು ಮಧ್ಯಪ್ರದೇಶದಲ್ಲಿ ಮತದಾನ ನಡೆದ ಬಳಿಕ ಮತಗಟ್ಟೆಗಳು ಹಾಗೂ ಸಿಬ್ಬಂದಿಗಳನ್ನೊಳಗೊಂಡ ಬಸ್ ಬೆಂಕಿಗಾಹುತಿಯಾಗಿರುವ ಘಟನೆ ನಡೆದಿದೆ.
ಮಧ್ಯಪ್ರದೇಶದ ಬೇತುಲ್ ಜಿಲ್ಲೆಯ ಗೋಲಾ ಗ್ರಾಮದಿಂದ ಮತಯಂತ್ರ ಸಾಗಿಸುತ್ತಿದ್ದ ವಾಹನಕ್ಕೆ ಮಂಗಳವಾರ ತಡರಾತ್ರಿ 11 ಗಂಟೆ ವೇಳೆಗೆ ಬೆಂಕಿ ಕಾಣಿಸಿಕೊಂಡಿದೆ. ಪರಿಣಾಮ ಕೆಲವು ಇವಿಎಂ ಯಂತ್ರಗಳಿಗೆ ಹಾನಿಯಾಗಿದೆ ಎಂದು ಜಿಲ್ಲಾಧಿಕಾರಿ ನರೇಂದ್ರ ಸೂರ್ಯವಂಶಿ ಹೇಳಿದ್ದಾರೆ.
ಬೂತ್ ಸಂಖ್ಯೆ 275, 276, 277, 278, 279, 280 ಸೇರಿದಂತೆ ನಾಲ್ಕು ಮತಗಟ್ಟೆಗಳ ಇವಿಎಂಗೆ ಹಾನಿಯಾಗಿದೆ. ಎರಡು ಇವಿಎಂ ಗಳು ಸುರಕ್ಷಿತವಾಗಿದೆ. ಹಾನಿಯಾಗಿರುವ ಇವಿಎಂಗಳ ಬ್ಯಾಲೆಟ್ ಯೂನಿಟ್‌ಗೆ ಹೆಚ್ಚಿನ ಹಾನಿಯಾಗಿದೆ. ಹಾಗೂ ಬಸ್ ಸಂಪೂರ್ಣವಾಗಿ ಸುಟ್ಟು ಭಸ್ಮವಾಗಿದೆ.
ಬೇತುಲ್ ಲೋಕಸಭಾ ಕ್ಷೇತ್ರದಲ್ಲಿ ಶೇ.72.65 ರಷ್ಟು ಮತದಾನವಾಗಿದೆ. ಹಾನಿಗೊಳಗಾದ ಮತೆಗಟ್ಟೆಗಳ ಮರು ಮತದಾನಕ್ಕೆ ಸಂಬಂಧಿಸಿದಂತೆ ಚುನಾವಣಾ ಆಯೋಗ ಕ್ರಮ ಕೈಗೊಳ್ಳಲಿದೆ ಎಂದು ಜಿಲ್ಲಾಧಿಕಾರಿ ಮಾಹಿತಿ ನೀಡಿದ್ದಾರೆ.
ಕಾಡಾನೆಗಳ ಹಾವಳಿಯಿಂದಾಗಿ ಕಾಡಂಚಿನ ಜನರಿಗೆ ತೊಂದರೆಯಾಗುತ್ತಿದೆ. ಆದ್ದರಿಂದ ಆನೆಗಳನ್ನು ಕೊಲ್ಲಲು ಅನುಮತಿ ನೀಡಬೇಕು ಎಂದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ…
ರಾಜ್ಯಸಭೆಯ ಕಲಾಪದ ವೇಳೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಮಾತನಾಡುವ ಭರದಲ್ಲಿ ಕೆಲವರು ಅಂಬೇಡ್ಕರ್ ಎನ್ನುವುದನ್ನು ಈಗ ಫ್ಯಾಷನ್…
ದಾ.ರಾ. ಮಹೇಶ್ ವೀರನಹೊಸಹಳ್ಳಿ: ತಾಲ್ಲೂಕಿನ ಬನ್ನಿಕುಪ್ಪೆಯ ರಾಷ್ಟ್ರೀಯ ಹೆದ್ದಾರಿಯಲ್ಲಿ ನಿತ್ಯ ಅವರೆಕಾಯಿ ಮಾರಾಟದಿಂದಾಗಿ ಟ್ರಾಫಿಕ್ ಜಾಮ್ ಆಗುತ್ತಿದ್ದು, ವಾಹನಗಳ ಸಂಚಾರಕ್ಕೆ…
ಮಂಡ್ಯ: ಸಕ್ಕರೆ ನಗರಿ ಮಂಡ್ಯದಲ್ಲಿ ಡಿ.20,21 ಮತ್ತು 22ರಂದು ಮೂರು ದಿನಗಳ ಕಾಲ ಜರುಗಲಿರುವ ಕನ್ನಡ ನುಡಿ ಜಾತ್ರೆ…
ಬೆಳಗಾವಿ: ರಾಜ್ಯದಲ್ಲಿ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ 59,772 ಶಿಕ್ಷಕರ ಹುದ್ದೆಗಳು ಖಾಲಿ ಇವೆ ಎಂದು ಶಾಲಾ ಶಿಕ್ಷಣ ಮತ್ತು…
ಬೆಂಗಳೂರು: ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ಪಡೆದಿರುವ ನಟ ದರ್ಶನ್ ಮೈಸೂರಿಗೆ ನಾಲ್ಕು ವಾರಗಳ ಕಾಲ ತೆರಳಲು ಅನುಮತಿ…