ಪಶ್ಚಿಮ ಬಂಗಾಳ: ಇಂದು ಲೋಕಸಭಾ ಚುನಾವಣೆಯ ಕೊನೆಯ ಹಂತದ ಮತದಾನ ನಡೆಯುತ್ತಿದೆ. ದೇಶದ ಒಟ್ಟು 57 ಕ್ಷೇತ್ರಗಳಲ್ಲಿ ಇಂದು ಮತದಾನ ನಡೆಯಲಿದೆ. ಕೊನೆಯ ಹಂತದ ಚುನಾವಣೆಯಲ್ಲಿ ಪ್ರಧಾನಿ ಮೋದಿ, ನಟಿ ಕಂಗನಾ ರಣಾವತ್ ಸೇರಿದಂತೆ 904 ಅಭ್ಯರ್ಥಿಗಳಿಗೆ ಇಂದಿನ ಮತದಾನದ ಮೂಲಕ ಭವಿಷ್ಯ ರೂಪಿತವಾಗಲಿದೆ.
ಇತ್ತ ಮತದಾನ ಮಾಡುವ ವೇಳೆ ಪಶ್ಚಿಮ ಬಂಗಾಳದಲ್ಲಿ ಗಲಾಟೆ ನಡೆದಿದ್ದು, ಇವಿಎಂ, ವಿವಿಪ್ಯಾಟ್‌ಗಳನ್ನು ಚರಂಡಿಗೆ ಬಿಸಾಕಿರುವ ಘಟನೆ ನಡೆದಿದೆ.
ಇಂದು ಬೆಳಿಗ್ಗೆ ಸುಮಾರು 6.40 ಸಮಯದಲ್ಲಿ ಬೇನಿಮಾಧವಪುರ ಎಫ್‌ಪಿ ಶಾಲೆಯ ಬಳಿ ಸೆಕ್ಟರ್ ಆಫೀಸರ್‌ನ ಮೀಸಲು ಇವಿಎಂ ಮತ್ತು ಪೇಪರ್‌ಗಳನ್ನು ಸ್ಥಳೀಯರು ದಾಳಿ ನಡೆಸಿ ಲೂಟಿ ಮಾಡಿದ್ದಾರೆ. ಮತ್ತು ಅದರಲ್ಲಿ ಎರಡು ವಿವಿ ಪ್ಯಾಟ್‌ಗಳನ್ನು ಚರಂಡಿಗೆ ಬಿಸಾಡಿದ್ದಾರೆ. ಇದರ ಬಗ್ಗೆ ಕಾನೂನು ಕ್ರಮ ಕೈಗೊಳ್ಳಲಾಗುವುದು. ಮತ್ತು ಸೆಕ್ಟರ್‌ನ ಎಲ್ಲಾ 6 ಬೂತ್‌ಗಳಿಗೂ ಹೊಸ ಇವಿಎಂ ಹಾಗೂ ವಿವಿ ಪ್ಯಾಟ್‌ಗಳನ್ನು ಒದಗಿಸಲಾಗಿದೆ ಎಂದು ಪಶ್ಚಿಮ ಬಂಗಾಳ ಚುನಾವಣಾ ಆಯೋಗ ಮಾಹಿತಿ ನೀಡಿದೆ.
ಹುಣಸೂರು: ಬೈಕ್‌ಗೆ ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿಯಾದ ಪರಿಣಾಮ ಮಹಿಳೆಯೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಹುಣಸೂರು ತಾಲ್ಲೂಕಿನ ಯಶೋಧರಪುರ ಗೇಟ್ ಬಳಿ…
ಮೈಸೂರು: ರಂಗವಲ್ಲಿ ಸಂಸ್ಥೆಯು ಕನ್ನಡ ಮತ್ತು ಸಂಸ್ಕೃತಿ ನಿರ್ದೇಶನಾಲಯ, ಬೆಂಗಳೂರು ಇವರ ಸಹಯೋಗದೊಂದಿಗೆ ದಿನಾಂಕ: 28.01.2026 ಮತ್ತು 29.01.2026ರ ಸಂಜೆ…
ಚಿಕ್ಕಬಳ್ಳಾಪುರ: ಶಿಡ್ಲಘಟ್ಟದ ಪೌರಾಯುಕ್ತೆ ಅಮೃತಾಗೌಡ ಅವರಿಗೆ ಜೀವ ಬೆದರಿಕೆ ಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಕಾಂಗ್ರೆಸ್ ಮುಖಂಡ ರಾಜೀವ್ ಗೌಡರನ್ನು…
ವಾಷಿಂಗ್ಟನ್: ಅಮೇರಿಕಾದಾದ್ಯಂತ ಬೀಸುತ್ತಿರುವ ಭೀಕರ ಹಿಮಬಿರುಗಾಳಿ ಜನಜೀವನವನ್ನು ಅಸ್ತವ್ಯಸ್ತಗೊಳಿಸಿದೆ. ಹಿಮಪಾತ ಹಾಗೂ ಮೈಕೊರೆಯುವ ಚಳಿಗೆ ಇದುವರೆಗೆ ಸುಮಾರು 25ಕ್ಕೂ ಹೆಚ್ಚು…
ಬೆಂಗಳೂರು: ನಟಿ ಕಾವ್ಯಾಗೌಡ ಹಾಗೂ ಆಕೆಯ ಪತಿ ಸೋಮಶೇಖರ್ ಮೇಲೆ ಪತಿ ಸಂಬಂಧಿಕರೇ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನ ರಾಮಮೂರ್ತಿ…
ಬೆಂಗಳೂರು: ಅರಬ್ಬಿ ಸಮುದ್ರದ ಮೇಲೆ ತೇವಾಂಶ ಭರಿತ ಮೋಡಗಳು ಹಾದು ಹೋಗಿರುವ ಹಿನ್ನೆಲೆಯಲ್ಲಿ ರಾಜ್ಯದ ಹಲವೆಡೆ ಸೋಮವಾರ ಮಳೆಯಾಗಿದೆ. ರಾಜಧಾನಿ…