ದೇಶ- ವಿದೇಶ

ಬಾಂಗ್ಲಾದೇಶದ ಮಾಜಿ ಪ್ರಧಾನಿ ಶೇಕ್‌ ಹಸೀನಾಗೆ ಗಲ್ಲು ಶಿಕ್ಷೆ ಪ್ರಕಟ

ಢಾಕಾ : ಮಾನವ ಹಕ್ಕು ಉಲ್ಲಂಘನೆ ಪ್ರಕರಣದಲ್ಲಿ ಪದಚ್ಯುತ ಪ್ರಧಾನಿ ಶೇಖ್‌ ಹಸೀನಾ ಅವರನ್ನು ಬಾಂಗ್ಲಾದೇಶದ ಅಂತಾರಾಷ್ಟ್ರೀಯ ಅಪರಾಧ ನ್ಯಾಯಮಂಡಳಿ ದೋಷಿ ಎಂದು ತೀರ್ಪು ನೀಡಿದ್ದು ಅವರಿಗೆ ಗಲ್ಲು ಶಿಕ್ಷೆ ವಿಧಿಸಿ ಆದೇಶ ನೀಡಿದೆ.

ಬಾಂಗ್ಲಾದೇಶದ ಅಂತಾರಾಷ್ಟ್ರೀಯ ಅಪರಾಧ ನ್ಯಾಯಮಂಡಳಿಯ ತ್ರಿಸದಸ್ಯ ನ್ಯಾಯಪೀಠವು ಶೇಖ್‌ ಹಸೀನಾ ಅವರ ಮೇಲಿರುವ ಆರೋಪ ಸಾಬೀತಾಗಿದೆ ಎಂದು ಪ್ರಕಟಿಸಿದ್ದು ಶೇಖ್ ಹಸೀನಾ ಮಾನವ ಹಕ್ಕುಗಳ ಅಪರಾಧ ಎಸಗಿದ್ದಾರೆ. ಇದು ಗರಿಷ್ಠ ಶಿಕ್ಷೆಗೆ ಅರ್ಹವಾಗಿರುವ ಪ್ರಕರಣ ಎಂದು ತೀರ್ಪಿನಲ್ಲಿ ಉಲ್ಲೇಖಿಸಿದೆ.

ಇದನ್ನು ಓದಿ: ಲೈಂಗಿಕ ಕಿರುಕುಳ ಪ್ರಕರಣ : ಸೂಕ್ತ ದಾಖಲೆಗಳೊಂದಿಗೆ ವಿಚಾರಣೆಗೆ ಹಾಜರಾಗುವಂತೆ ನಟಿಗೆ ನೋಟಿಸ್‌

ಕಳೆದ ವರ್ಷ ವಿದ್ಯಾರ್ಥಿಗಳ ನೇತೃತ್ವದಲ್ಲಿ ದೇಶವ್ಯಾಪಕವಾಗಿ ಭುಗಿಲೆದ್ದ ದಂಗೆಗಳ ಮೇಲಿನ ‘ಮಾರಕ ದಮನ’ಕ್ಕೆ ಹಸೀನಾ ನೇರ ಸೂಚನೆ ನೀಡಿದ್ದಾಗಿ ನ್ಯಾಯಾಲಯವು ಹೇಳಿದೆ. ಶೇಖ್ ಹಸೀನಾ ಅವರ ಈ ನಡೆಯಿಂದ ಬಾಂಗ್ಲಾದೇಶದಲ್ಲಿ ಸಾಕಷ್ಟು ಹಿಂಸಾಚಾರ ನಡೆದಿತ್ತು. ನೂರಾರು ಪ್ರಜೆಗಳು ಸಾವನ್ನಪ್ಪಿದ್ದರು. ಈ ಪ್ರಕರಣದಲ್ಲಿ ಶೇಖ್ ಹಸೀನಾರನ್ನು ಪ್ರಮುಖ ಆರೋಪಿಯಾಗಿಸಲಾಗಿತ್ತು. ಈ ಆದೇಶಗಳನ್ನು ಹೊರಡಿಸುವ ಮೂಲಕ ಶೇಖ್ ಹಸೀನಾ ಮತ್ತು ಪೊಲೀಸ್ ಐಜಿ ಅವರ ನಿಷ್ಕ್ರಿಯತೆಯ ಮೂಲಕ ವಿದ್ಯಾರ್ಥಿಗಳನ್ನು ಹತ್ಯೆ ಮಾಡಲಾಗಿದೆ. ಈ ಹತ್ಯೆಗಳು ಪ್ರಧಾನಿ ಶೇಖ್ ಹಸೀನಾ ಅವರ ಆದೇಶ ಮತ್ತು ಅವರ ಅರಿವುನಲ್ಲೇ ನಡೆದಿದೆ. ಇಂತಹ ಕೃತ್ಯಗಳನ್ನು ಎಸಗುವ ಮೂಲಕ ಮಾನವೀಯತೆಯ ವಿರುದ್ಧ ಅಪರಾಧಗಳನ್ನು ಮಾಡಿದ್ದಾರೆ ಎಂದು ಕೋರ್ಟ್‌ ಹೇಳಿದೆ.

ಇದೀಗ ತಿಂಗಳುಗಳ ಕಾಲ ನಡೆದ ವಿಚಾರಣೆಯಲ್ಲಿ ಉತ್ಪಾದಿಸಲಾದ ಸಾಕ್ಷ್ಯಗಳು, ಭದ್ರತಾ ಸಿಬ್ಬಂದಿಯ ಹೇಳಿಕೆಗಳು ಮತ್ತು ತನಿಖಾ ವರದಿಗಳ ಆಧಾರದಲ್ಲಿ ನ್ಯಾಯಾಲಯವು ಹಸೀನಾ ಅವರ ಪಾತ್ರವನ್ನು ಉಲ್ಲೇಖಿಸಿದೆ. ಪ್ರತಿಭಟನೆಗಳನ್ನು ಕುಂಠಿತಗೊಳಿಸುವ ಹೆಸರಿನಲ್ಲಿ ಭದ್ರತಾ ಪಡೆಗಳು ಅತಿಯಾದ ಬಲಪ್ರಯೋಗಕ್ಕೆ ಮುಂದಾಗಿದ್ದವು ಎಂಬ ವಿಚಾರವನ್ನು ನ್ಯಾಯಾಲಯ ವಿಶೇಷವಾಗಿ ಉಲ್ಲೇಖಿಸಿದೆ.

ಶೇಖ್ ಹಸೀನಾ ಮಾತ್ರವಲ್ಲದೇ ಅವರ ಆಪ್ತರಾಗಿದ್ದ ಮಾಜಿ ಗೃಹ ಸಚಿವ ಅಸಾದುಜ್ಜಮಾನ್ ಖಾನ್ ಕಮಲ್ ಮತ್ತು ಮಾಜಿ ಪೊಲೀಸ್ ಇನ್ಸ್‌ಪೆಕ್ಟರ್ ಜನರಲ್ ಚೌಧರಿ ಅಬ್ದುಲ್ಲಾ ಅಲ್-ಮಾಮುನ್ ಅವರನ್ನೂ ಕೋರ್ಟ್‌ ದೋಷಿ ಎಂದು ಹೇಳಿದೆ.

ಆಂದೋಲನ ಡೆಸ್ಕ್

Recent Posts

ಸಂಧಾನ ಯಶಸ್ವಿ : ಮುಷ್ಕರ ಹಿಂಪಡೆದ ವೈದ್ಯರು

 ಬೆಂಗಳೂರು: ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ರಾಜ್ಯ ಸರ್ಕಾರಿ ವೈದ್ಯಾಧಿಕಾರಿಗಳ ಸಂಘ ನಾಳೆಯಿಂದ  (ಮಾರ್ಚ್ 11) ಕರೆ ನೀಡಿದ್ದ ಅನಿರ್ದಿಷ್ಟಾವಧಿ ಮುಷ್ಕರವನ್ನು…

7 mins ago

ಪರಿಷತ್‌ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟ : ಜೆಡಿಎಸ್‌ಗೆ 1 ಸೀಟು

ಬೆಂಗಳೂರು : ಕರ್ನಾಟಕ ವಿಧಾನಪರಿಷತ್‌ನ ನಾಲ್ಕು ಕ್ಷೇತ್ರಗಳ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಮೈತ್ರಿ ಪಕ್ಷ ಜೆಡಿಎಸ್‌ಗೆ ಒಂದು…

2 hours ago

ಎಲ್‌ಪಿಜಿ ಸಿಲಿಂಡರ್‌ ವ್ಯತ್ಯಯ, ಬೆಲೆ ಏರಿಕೆ : ಬಾಯಿ ಬಿಡದ ಬಿಜೆಪಿ ; ಡಿ.ಕೆ.ಶಿವಕುಮಾರ್‌ ಆರೋಪ

ಬೆಂಗಳೂರು : ಅಂತರರಾಷ್ಟ್ರೀಯ ಮಹಿಳಾ ದಿನದಂದೆ ಗ್ಯಾಸ್ ಸಿಲಿಂಡರ್ ಬೆಲೆಯನ್ನ ಕೇಂದ್ರ ಸರ್ಕಾರ 60 ರೂಪಾಯಿ ಏರಿಕೆ ಮಾಡಿದೆ. ಜೊತೆಗೆ…

2 hours ago

ಹುಲಿ ದಾಳಿಗೆ ಹಸು ಬಲಿ ; ರೈತ ಪಾರು

ಗುಂಡ್ಲುಪೇಟೆ : ಜಮೀನಿನಲ್ಲಿ ಮೇಯುತ್ತಿದ್ದ ಹಸುವಿನ ಮೇಲೆ ಹುಲಿಯೊಂದು ದಾಳಿ ನಡೆಸಿದೆ. ಈ ವೇಳೆ ರೈತ ತನ್ನ ಹಸು ರಕ್ಷಿಸಲು…

2 hours ago

ಎಲ್‌ಪಿಜಿ ಕೊರತೆ | ಕೇಂದ್ರದಿಂದ 1955ರ ಕಾಯ್ದೆ ಜಾರಿ ; ಏನಿದು ಅಗತ್ಯ ಸರಕು ಕಾಯ್ದೆ?

ಹೊಸದಿಲ್ಲಿ : ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ಇಂಧನ ಪೂರೈಕೆಯ ಮೇಲೆ ಹೆಚ್ಚುತ್ತಿರುವ ಒತ್ತಡದ ನಡುವೆ, ದೇಶೀಯ ಇಂಧನ ಮಾರುಕಟ್ಟೆಯನ್ನು…

3 hours ago

ನ್ಯಾಯಾಂಗ ಭ್ರಷ್ಟಾಚಾರ ಕುರಿತ ಅಧ್ಯಾಯ ವಿವಾದ ; ಸಾರ್ವಜನಿಕ ಕ್ಷಮೆ ಯಾಚಿಸಿದ ಎನ್‌ಸಿಇಆರ್‌ಟಿ

ಹೊಸದಿಲ್ಲಿ : ರಾಷ್ಟ್ರೀಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಪರಿಷತ್ (ಎನ್‌ಸಿಇಆರ್‌ಟಿ) ಇತ್ತೀಚೆಗೆ ಪ್ರಕಟಿಸಿದ್ದ 8ನೇ ತರಗತಿಯ ಸಮಾಜ ವಿಜ್ಞಾನ…

3 hours ago