ಬೆಂಗಳೂರು: ಜಗತ್ತಿನಲ್ಲೇ ಅತೀ ಹೆಚ್ಚು ಜನಸಂಖ್ಯೆ ಹೊಂದಿರುವ ಭಾರತದಲ್ಲಿ ಪ್ರತಿ ಹತ್ತು ವರ್ಷಕ್ಕೊಮ್ಮೆ ನಡೆಯುವ ಜನಗಣತಿಗೆ ಅತ್ಯಂತ ಮಹತ್ವವಿದೆ.
ಕಳೆದ 2021ರಲ್ಲೇ ನಡೆಯಬೇಕಿದ್ದ ಜನಗಣತಿ ಕೋವಿಡ್ ಕಾರಣದಿಂದ ಮೂರುವರೆ ವರ್ಷ ತಡವಾಗಿದೆ. ಇದೀಗ 2024ರ ಸೆಪ್ಟೆಂಬರ್‌ನಲ್ಲಿ ಜನಗಣತಿ ಆರಂಭವಾಗಲಿದೆ.
ಜನಗಣತಿಗೆ 18 ತಿಂಗಳ ಅಗತ್ಯವಿದೆ ಎಂದು ಕೇಂದ್ರ ಸರ್ಕಾರ ಮಾಹಿತಿ ನೀಡಿದ್ದು, ಜನಗಣತಿ ವರದಿಯು 2026ರ ಮಾರ್ಚ್‌ನಲ್ಲಿ ಪ್ರಕಟವಾಗುವ ಸಾಧ್ಯತೆ ಇದೆ ಎಂದು ವರದಿಯಾಗಿದೆ.
ಭಾರತದ ಜನರು ಮತ್ತು ಅವರ ಗುಣಲಕ್ಷಣಗಳ ಕುರಿತು ದತ್ತಾಂಶ ಸಹಿತ ಸಮಗ್ರವಾಗಿ ಲಭ್ಯವಾಗುವ ಏಕೈಕ ಮಾಹಿತಿಯೇ ಈ ಜನಗಣತಿ. ಜನಗಣತಿ ಸಂದರ್ಭದಲ್ಲಿ ಸಂಗ್ರಹಿಸುವ ಪ್ರತಿಯೊಬ್ಬರ ಮಾಹಿತಿಯು ಜನಸಂಖ್ಯೆಯ ಬೆಳವಣಿಗೆ ಮತ್ತು ಅದರ ಲಕ್ಷಣ ಹಾಗೂ ಬೆಳವಣಿಗೆಯ ಅಂದಾಜು ಲೆಕ್ಕಾಚಾರಕ್ಕೆ ನೆರವಾಗಲಿದೆ.
ವ್ಯಾಪಾರ ಕ್ಷೇತ್ರ ಹಾಗೂ ಮಾರುಕಟ್ಟೆಯಲ್ಲಿ ಹೊಸ ಸಾಧ್ಯತೆಯ ಕುರಿತು ಯೋಜನೆ ರೂಪಿಸಲು ಜನಗಣತಿಯ ಮಾಹಿತಿ ಅಗತ್ಯ. ಹಣಕಾಸು ಆಯೋಗವು ಜನಗಣತಿಯ ಮಾಹಿತಿ ಆಧರಿಸಿಯೇ ಸರ್ಕಾರಕ್ಕೆ ಹಣ ಬಿಡುಗಡೆ ಮಾಡುತ್ತದೆ.
ದತ್ತಾಂಶ ಸಂಗ್ರಹದ ಆಧಾರದಲ್ಲಿ ಈ ಬಾರಿ ನಡೆಯಲಿರುವ ಜನಗಣತಿಯು ಈ ಹಿಂದಿನ ಗಣತಿಗಿಂತ ಭಿನ್ನವಾಗಿರಲಿದೆ ಎಂದೇ ಹೇಳಲಾಗುತ್ತಿದೆ.
ಬೆಂಗಳೂರು: ರಾಜ್ಯದಲ್ಲಿ ಸಂಭವಿಸಿದ ಪ್ರಕೃತಿ ವಿಕೋಪದಿಂದ ಹಣ್ಣುಗಳ ರಾಣಿ ಎಂದು ಕರೆಯಿಸಿಕೊಳ್ಳುವ ಮಾವಿಗೆ ಅನೇಕ ರೋಗಗಳು ಕಾಣಿಸಿಕೊಂಡಿದ್ದು, ರೈತರಿಗೆ ಇಳುವರಿ…
ಗುಂಡ್ಲುಪೇಟೆ: ಗಡಿ ಜಿಲ್ಲೆ ಚಾಮರಾಜನಗರದ ಗುಂಡ್ಲುಪೇಟೆ ತಾಲ್ಲೂಕಿನಲ್ಲಿರುವ ರಾಷ್ಟ್ರೀಯ ಉದ್ಯಾನವನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಕುಂದಕೆರೆ ವಲಯದ ಚಿಕ್ಕ…
ಲಕ್ನೋ: ಆಕರ್ಷಣೀಯ ಪ್ರವಾಸಿತಾಣಗಳ ಪಟ್ಟಿಯಲ್ಲಿ ಅಯೋಧ್ಯೆ ರಾಮಮಂದಿರವು ತಾಜ್‌ಮಹಲನ್ನು ಹಿಂದಿಕ್ಕಿ ನಂಬರ್ ಒನ್ ಪಟ್ಟ ಪಡೆದಿದೆ. ಈ ಮೂಲಕ ಈಗ…
ಚಿಕ್ಕಬಳ್ಳಾಪುರ: ನಂದಿಗಿರಿಧಾಮದಲ್ಲಿ ಹೊ ವರ್ಷಾಚರಣೆಗೆ ಬ್ರೇಕ್ ನೀಡಲಾಗಿದ್ದು, ಪ್ರವಾಸಿಗರಿಗೆ ಬಿಗ್ ಶಾಕ್ ಎದುರಾಗಿದೆ. ಪ್ರಕೃತಿ ಮಡಿಲಿನಲ್ಲಿ ಕುಣಿಸು ಕುಪ್ಪಳಿಸಿ ಹೊಸ…
ಮಂಡ್ಯ: ಸಕ್ಕರೆ ನಾಡು ಮಂಡ್ಯದಲ್ಲಿ ನಡೆದ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಯಶಸ್ವಿಯಾಗಿ ಮುಕ್ತಾಯಗೊಂಡಿದೆ. ಕನ್ನಡ ಸಾಹಿತ್ಯ…
ಮಂಡ್ಯ: ಜಿಲ್ಲೆಯ ಕ್ಯಾತನಹಳ್ಳಿಯಲ್ಲಿ ಬರ್ಬರ ಹತ್ಯೆ ಪ್ರಕರಣದ ಪಾತಕಿ ಮೊಹಮ್ಮದ್ ಇಬ್ರಾಹಿಂ ಪೊಲೀಸರ ವಿಚಾರಣೆ ವೇಳೆ ಶಾಕಿಂಗ್ ವಿಚಾರ ಬಾಯ್ಬಿಟ್ಟಿದ್ದಾನೆ.…