ತಿರುವನಂತಪುರಂ: ಕೇರಳದ ತ್ರಿಶೂರ್ ಪುರಂ ಉತ್ಸವಕ್ಕೆ ಸಿಡಿಮದ್ದು ತಯಾರಿಸುತ್ತಿದ್ದ ಕಾರ್ಖಾನೆಯಲ್ಲಿ ಭಾರೀ ಸ್ಫೋಟ ಸಂಭವಿಸಿದ್ದು, ಕನಿಷ್ಠ 13 ಮಂದಿ ಸಾವನ್ನಪ್ಪಿದ್ದಾರೆ.
ಘಟನೆಯಲ್ಲಿ ಹಲವರು ಗಾಯಗೊಂಡಿದ್ದು, ಅವರಲ್ಲಿ ಐವರ ಸ್ಥಿತಿ ಗಂಭೀರವಾಗಿದೆ. ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆಯಿದೆ.
ಸೋಮವಾರದಿಂದ ಶುರುವಾಗಿರುವ ತ್ರಿಶೂರ್ ಪುರಂ ಉತ್ಸವದ ಭಾಗವಾಗಿ ಪಟಾಕಿಗಳನ್ನು ತಯಾರಿಸಲಾಗುತ್ತಿತ್ತು. ಈ ಶೆಡ್‌ನಲ್ಲಿ ಸ್ಫೋಟ ಸಂಭವಿಸಿ ಅನಾಹುತ ನಡೆದಿದೆ.
ಪಟಾಕಿ ಕಾರ್ಖಾನೆ ದುರಂತದಲ್ಲಿ ಮೃತಪಟ್ಟವರಿಗೆ ಪ್ರಧಾನಿ ನರೇಂದ್ರ ಮೋದಿ ಕಚೇರಿ ಸಂತಾಪ ಸೂಚಿಸಿ ಎಕ್ಸ್‌ನಲ್ಲಿ ಪೋಸ್ಟ್ ಹಂಚಿಕೊಂಡಿದೆ. ಕಾರ್ಖಾನೆಯಲ್ಲಿ ಸಂಭವಿಸಿದ ಅಪಘಾತದಿಂದ ಜೀವಹಾನಿ ಸಂಭವಿಸಿದ ಬಗ್ಗೆ ಕೇಳಿ ಅತೀವ ದುಃಖವಾಗಿದೆ. ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರಿಗೆ ನನ್ನ ಆಳವಾದ ಸಂತಾಪಗಳು. ಗಾಯಾಳುಗಳು ಆದಷ್ಟು ಬೇಗ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಪ್ರಧಾನಿ ಕಚೇರಿ ಎಕ್ಸ್‌ನಲ್ಲಿ ಹಂಚಿಕೊಂಡಿದೆ.
ಸಂತೋಷ ಕೌಲಗಿ ಒಬ್ಬ ವ್ಯಕ್ತಿಯ ಜೀವನದಲ್ಲಿ ಅವನ ತಂದೆಯ ಪಾತ್ರ ಬಹಳ ದೊಡ್ಡದು. ಒಬ್ಬ ಆದರ್ಶ ಮನೋಭಾವದ, ಮಕ್ಕಳನ್ನು ಸಮಾನವಾಗಿ…
ನಾನು ಇಂಗ್ಲೆಂಡಿಗೆ ಹೋದ ಎರಡನೆಯ ವರ್ಷದ ಕೊನೆಯಲ್ಲಿ ನನಗೆ ಇಬ್ಬರು ಥಿಯಾಸಫಿಸ್ಟರ ಪರಿಚಯವಾಯಿತು. ಅವರಿಬ್ಬರೂ ಅಣ್ಣ ತಮ್ಮಂದಿರು ಮತ್ತು ಅವಿವಾಹಿತರು.…
ಹಳೆಯ ನೆನಪು, ಹೊಸ ತಂತ್ರಜ್ಞಾನ ೧೯೭೦-೮೦ರ ದಶಕದ ರೂಪದಲ್ಲಿ ಹೊಸ ತಲೆಮಾರು -ಡಾ.ಎಂ.ಲೋಕೇಶ ಒಮ್ಮೆ ಯೋಚಿಸಿ ನೋಡಿ... ಇಂದು ತೆಗೆದ…
ಜಾತಿ ಯಾವುದು?" - ಒಂದು ಪ್ರಶ್ನೆಯ ಹಿಂದೆ ಅಡಗಿರುವ ಮನಸ್ಥಿತಿ ಟಿ.ಕೆ.ಹರೀಶ್ ನೀವು ಯಾವ ಜಾತಿ?... ಪರಿಚಯವಾದ ಕೆಲವೇ ಕ್ಷಣಗಳಲ್ಲಿ…
ಸೆಪ್ಟೆಂಬರ್ ೪, ೫, ೬ ರಂದು ಅಮೆರಿಕಾದ ಫಿಲಡೆಲಿಯಾದಲ್ಲಿ ನಡೆದ ‘ಅಕ್ಕ’ ಸಮ್ಮೇಳನದಲ್ಲೂ ಕನ್ನಡಿಗರ ಹೆಮ್ಮೆ ನಂದಿನಿ ಅಂಗಡಿ ಇದ್ದದ್ದು…