ನಾಗ್ಪುರ: ಕೆಮಿಕಲ್ ಫ್ಯಾಕ್ಟರಿಯಲ್ಲಿ ಸಂಭವಿಸಿದ ಭೀಕರ ಸ್ಫೋಟದಿಂದಾಗಿ ಮಹಿಳೆಯರು ಸೇರಿದಂತೆ 15 ಕಾರ್ಮಿಕರು ಸಾವನ್ನಪ್ಪಿರುವ ಘಟನೆ ಮಹಾರಾಷ್ಟ್ರದ ನಾಗ್ಪರ ಜಿಲ್ಲೆಯಲ್ಲಿ ನಡೆದಿದೆ.
ಜಿಲ್ಲೆಯ ಕಲ್ಮೇಶ್ವರ ತಾಲ್ಲೂಕಿನ ರೌಲ್ತಾಂವ್ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಗನ್ ಪೌಡರ್ ತಯಾರಿಸುವ ಫ್ಯಾಕ್ಟರಿಯಲ್ಲಿ ಈ ದುರಂತ ಸಂಭವಿಸಿದೆ. ಘಟನೆಯಲ್ಲಿ 15 ಜನರು ಸಾವನ್ನಪ್ಪಿದ್ದು, 18 ಜನರು ಗಾಯಗೊಂಡಿದ್ದಾರೆ.
ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಗಣಿಗಾರಿಕೆ, ಮೂಲಸೌಕರ್ಯ ಯೋಜನೆಗಳಿಗೆ ಬಳಸುವ ವಸ್ತುಗಳು, ಗನ್ ಪೌಡರ್‌ಗಳನ್ನು ತಯಾರಿಸುವ ಫ್ಯಾಕ್ಟರಿಯಲ್ಲಿ ಈ ಘಟನೆ ನಡೆದಿದೆ.
ಇಂದು ಬೆಳಿಗ್ಗೆ 6.45ರ ಸುಮಾರಿಗೆ ಸ್ಫೋಟ ಸಂಭವಿಸಿದೆ. ಈ ವೇಳೆ ಬೆಳಗಿನ 6 ಗಂಟೆ ಪಾಳಿಗೆ ಕೆಲಸಕ್ಕೆಂದು 35 ಕಾರ್ಮಿಕರು ಬಂದಿದ್ದರು. ಈ ವೇಳೆ ಫ್ಯಾಕ್ಟರಿಯಲ್ಲಿ ಸ್ಫೋಟ ಸಂಭವಿಸಿದ್ದು, 15 ಜನರು ಮೃತಪಟ್ಟಿದ್ದಾರೆ.





