ದೇಶ- ವಿದೇಶ

ಕೆಮಿಕಲ್‌ ಫ್ಯಾಕ್ಟರಿಯಲ್ಲಿ ಸ್ಫೋಟ: ಮಹಿಳೆಯರು ಸೇರಿ 15 ಕಾರ್ಮಿಕರು ದುರ್ಮರಣ

ನಾಗ್ಪುರ: ಕೆಮಿಕಲ್‌ ಫ್ಯಾಕ್ಟರಿಯಲ್ಲಿ ಸಂಭವಿಸಿದ ಭೀಕರ ಸ್ಫೋಟದಿಂದಾಗಿ ಮಹಿಳೆಯರು ಸೇರಿದಂತೆ 15 ಕಾರ್ಮಿಕರು ಸಾವನ್ನಪ್ಪಿರುವ ಘಟನೆ ಮಹಾರಾಷ್ಟ್ರದ ನಾಗ್ಪರ ಜಿಲ್ಲೆಯಲ್ಲಿ ನಡೆದಿದೆ.

ಜಿಲ್ಲೆಯ ಕಲ್ಮೇಶ್ವರ ತಾಲ್ಲೂಕಿನ ರೌಲ್ತಾಂವ್‌ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಗನ್‌ ಪೌಡರ್‌ ತಯಾರಿಸುವ ಫ್ಯಾಕ್ಟರಿಯಲ್ಲಿ ಈ ದುರಂತ ಸಂಭವಿಸಿದೆ. ಘಟನೆಯಲ್ಲಿ 15 ಜನರು ಸಾವನ್ನಪ್ಪಿದ್ದು, 18 ಜನರು ಗಾಯಗೊಂಡಿದ್ದಾರೆ.

ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಗಣಿಗಾರಿಕೆ, ಮೂಲಸೌಕರ್ಯ ಯೋಜನೆಗಳಿಗೆ ಬಳಸುವ ವಸ್ತುಗಳು, ಗನ್‌ ಪೌಡರ್‌ಗಳನ್ನು ತಯಾರಿಸುವ ಫ್ಯಾಕ್ಟರಿಯಲ್ಲಿ ಈ ಘಟನೆ ನಡೆದಿದೆ.

ಇಂದು ಬೆಳಿಗ್ಗೆ 6.45ರ ಸುಮಾರಿಗೆ ಸ್ಫೋಟ ಸಂಭವಿಸಿದೆ. ಈ ವೇಳೆ ಬೆಳಗಿನ 6 ಗಂಟೆ ಪಾಳಿಗೆ ಕೆಲಸಕ್ಕೆಂದು 35 ಕಾರ್ಮಿಕರು ಬಂದಿದ್ದರು. ಈ ವೇಳೆ ಫ್ಯಾಕ್ಟರಿಯಲ್ಲಿ ಸ್ಫೋಟ ಸಂಭವಿಸಿದ್ದು, 15 ಜನರು ಮೃತಪಟ್ಟಿದ್ದಾರೆ.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಖಮೇನಿ ಹತ್ಯೆ ಖಂಡಿಸಿ ಭಾರತದಲ್ಲೂ ಪ್ರತಿಭಟನೆ

ಜಮ್ಮು-ಕಾಶ್ಮೀರ: ಇಸ್ರೇಲ್‌ ಮತ್ತು ಅಮೇರಿಕಾ ಇರಾನ್‌ ಮೇಲೆ ನಡೆಸಿದ ದಾಳಿಯಲ್ಲಿ ರಾಷ್ಟ್ರದ ಪರಮೋಚ್ಛ ನಾಯಕ ಆಯತೊಲ್ಲಾ ಅಲಿ ಖಮೇನಿ ಸಾವನ್ನಪ್ಪಿದ್ದಾರೆ.…

5 mins ago

ಇರಾನ್-ಇಸ್ರೇಲ್-ಅಮೆರಿಕ ಯುದ್ಧ ನಡುವೆಯೇ ಭಾರತದಲ್ಲಿ ಅಚ್ಚರಿ ಬೆಳವಣಿಗೆ: ಏನದು ಗೊತ್ತಾ.?

ನವದೆಹಲಿ: ಇರಾನ್-ಇಸ್ರೇಲ್-ಅಮೆರಿಕ ಯುದ್ಧ ನಡುವೆಯೇ ಭಾರತದಲ್ಲಿ ಅಚ್ಚರಿ ಬೆಳವಣಿಗೆಯಲ್ಲಿ ಗ್ಯಾಸ್ ಸಿಲಿಂಡರ್ ದರ ಇಳಿಕೆ ಕಂಡುಬಂದಿದೆ. ತೈಲ ಕಂಪನಿಗಳು ವಾಣಿಜ್ಯ…

23 mins ago

ಯುವಜನತೆಯು ಡ್ರಗ್ಸ್ ಮತ್ತು ಮಾದಕ ವಸ್ತುಗಳಿಗೆ ಬಲಿಯಾಗದಿರಿ: ಜಿಲ್ಲಾಧಿಕಾರಿ ಡಾ.ಕುಮಾರ

ಮಂಡ್ಯ: ಯುವಜನರು ಮಾದಕ ವ್ಯಸನದಿಂದ ದೂರವಿದ್ದರೆ ಆರೋಗ್ಯವಂತ ಸಮಾಜ ನಿರ್ಮಿಸಬಹುದು. ಯುವಜನತೆಯು ಮಾದಕ ವಸ್ತುಗಳಿಗೆ ಬಲಿಯಾಗದೆ ಅದರಿಂದ ದೂರವಿರಬೇಕು ಎಂದು…

1 hour ago

ಹನೂರು| ಶಿರಗೋಡು ಗ್ರಾಮದಲ್ಲಿ ಅದ್ಧೂರಿಯಾಗಿ ಜರುಗಿದ ಶ್ರೀ ಲಕ್ಷ್ಮೀ ವೆಂಕಟೇಶ್ವರ ರಥೋತ್ಸವ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲೂಕಿನ ಶಿರಗೋಡು ಗ್ರಾಮದ ಶ್ರೀ ಲಕ್ಷ್ಮಿ ವೆಂಕಟೇಶ್ವರ ದೇವಾಲಯದಲ್ಲಿ ರಥೋತ್ಸವ ಭಾನುವಾರ ಬೆಳಿಗ್ಗೆ…

3 hours ago

ಇರಾನ್ ಇಸ್ರೇಲ್ ಸಂಘರ್ಷ ತೈಲ ಬೆಲೆ ಚಿನ್ನದ ಬೆಲೆ ಏರಿಕೆ ..?

ಟೆಹರಾನ್‌: ಇರಾನ್ ಮೇಲೆ ಇಸ್ರೇಲ್ ಅಮೆರಿಕ ಜಂಟಿಯಾಗಿ ದಾಳಿ ನಡೆಸಿದ ಪರಿಣಾಮ ಇದೀಗ ಇರಾನ್ ಕೂಡ ಪ್ರತೀಕಾರವಾಗಿ ಇಸ್ರೇಲ್ ಅಮೆರಿಕಾ…

3 hours ago

ಕೊಡಗು| ಬೆಟ್ಟತ್ತೂರು ಬಳಿ ಆನೆ ದಾಳಿಗೆ ವಿದ್ಯಾರ್ಥಿನಿ ಬಲಿ

ಕೊಡಗು: ಆನೆ ದಾಳಿಗೆ ವಿದ್ಯಾರ್ಥಿನಿ ಬಲಿಯಾಗಿರುವ ಘಟನೆ ಕೊಡಗಿನಲ್ಲಿ ನಡೆದಿದೆ. ಮದೆ ಬೆಟ್ಟತ್ತೂರು ಗ್ರಾಮದ ಗಿರೀಶ್‌ ಎಂಬುವವರ ಪುತ್ರಿ ಪೂಜಾ…

3 hours ago