Mysore
18
few clouds

Social Media

ಬುಧವಾರ, 21 ಜನವರಿ 2026
Light
Dark

ಕೆಂಪು ಕೋಟೆ ಬಳಿ ಸ್ಫೋಟ : 9 ಮಂದಿ ಸಾವು, ದೇಶಾದ್ಯಂತ ಹೈ ಅಲರ್ಟ್‌

ಹೊಸದಿಲ್ಲಿ : ದೇಶಾದ್ಯಂತ ಸೋಮಾವರ ಬೆಳ್ಳಂಬೆಳ್ಳಗ್ಗನೆ 2,900 ಕೆಜಿ ಸ್ಫೋಟಗಳ ಪತ್ತೆ ಬೆನ್ನಲ್ಲೇ ದೆಹಲಿಯ ಕೆಂಪು ಕೋಟೆ ಬಳಿ ಕಾರಿನಲ್ಲಿ ಸ್ಫೋಟ ಸಂಭವಿಸಿದೆ. ಹಲವು ದೇಹಗಳು ಛಿದ್ರ ಛಿದ್ರವಾಗಿದೆ. ಪ್ರಸ್ತುತ 9 ಮಂದಿ ಮೃತಪಟ್ಟಿರುವುದಾಗಿ ವರದಿಯಾಗಿದೆ.

ಸ್ಫೋಟದ ನಂತರ, ಕಾರಿಗೆ ಬೆಂಕಿ ಹೊತ್ತಿಕೊಂಡಿದ್ದು, ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಸಂಜೆ 6.55ರ ಸುಮಾರಿಗೆ ಸ್ಫೋಟಕ ಸಂಭವಿಸಿದ್ದು ಏಳೆಂಟು ಮಂದಿ ಗಾಯಗೊಂಡಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ದೆಹಲಿ ಕೆಂಪುಕೋಟೆಯ ಚಾಂದನಿ ಚೌಕ್‌ನ ಲಾಲ್ ಕಿಲಾ ಬಳಿ ಕಾರು ಸ್ಫೋಟಗೊಂಡಿದೆ. ಸ್ಫೋಟಕಕ್ಕೆ ಕಾರಣ ಏನೆಂದು ಪತ್ತೆಯಾಗಿಲ್ಲ. ಸದ್ಯ 7 ಅಗ್ನಿಶಾಮಕ ವಾಹನ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿದ್ದು ಬೆಂಕಿ ನಂದಿಸುವಲ್ಲಿ ನಿರತರಾಗಿದ್ದಾರೆ. ಘಟನೆಯ ಸಮಯದಲ್ಲಿ ದೊಡ್ಡ ಜನಸಮೂಹವೇ ನೆರೆದಿತ್ತು. ಕೆಂಪು ಕೋಟೆ ಪ್ರದೇಶವು ಸಂಜೆಯ ಸಮಯದಲ್ಲಿ ಜನದಟ್ಟಣೆಯಿಂದ ಕೂಡಿರುತ್ತದೆ. ಜನರು ದೃಶ್ಯವೀಕ್ಷಣೆಗೆ ಭೇಟಿ ನೀಡುತ್ತಾರೆ.

ಇದನ್ನೂ ಓದಿ:-ಹಜ್‌ ಒಪ್ಪಂದಕ್ಕೆ ಭಾರತ ಸಹಿ

ಕೆಂಪು ಕೋಟೆ ಮೆಟ್ರೋ ನಿಲ್ದಾಣದ ಗೇಟ್ ಸಂಖ್ಯೆ 1ರ ಬಳಿ ಕಾರಿನಲ್ಲಿ ಸ್ಫೋಟ ಸಂಭವಿಸಿದೆ. ನಂತರ ಮೂರರಿಂದ 6 ಕಾರು, 3 ಆಟೋ ಸೇರಿ ಹಲವು ವಾಹನಗಳು ಬೆಂಕಿಯಿಂದ ಹೊತ್ತಿ ಹುರಿಯುತ್ತಿವೆ. ಬೆಂಕಿ ನಂದಿಸಲು ದೆಹಲಿ ಅಗ್ನಿಶಾಮಕ ಸಿಬ್ಬಂದಿ ಹರಸಾಹಸ ಪಡುತ್ತಿದ್ದಾರೆ.

ಘಟನೆ ನಂತರ ದೆಹಲಿಯಲ್ಲಿ ಹೈಅಲರ್ಟ್ ಘೋಷಣೆ ಮಾಡಲಾಗಿದೆ. ಹಲವು ಪ್ರಮುಖ ರಸ್ತೆಗಳನ್ನು ಬಂದ್ ಮಾಡಲಾಗಿಗದೆ. ಘಟನಾ ಸ್ಥಳಕ್ಕೆ NSG ಮತ್ತು NIA ತಂಡಗಳು ಭೇಟಿ ನೀಡಿದ್ದು ಪರಿಶೀಲನೆ ನಡೆಸುತ್ತಿದ್ದಾರೆ.

Tags:
error: Content is protected !!