Mysore
27
overcast clouds

Social Media

ಶನಿವಾರ, 01 ಆಗಸ್ಟ್ 2026
Light
Dark

ಸ್ಫೋಟ | ಕೆಂಪುಕೋಟೆಗೆ ಸಾರ್ವಜನಿಕ ಪ್ರವೇಶ ನಿರ್ಬಂಧ

ಹೊಸದಿಲ್ಲಿ : ಐತಿಹಾಸಿಕ ಕೆಂಪುಕೋಟೆ ಬಳಿ ಸ್ಫೋಟಗೊಂಡ ಹಿನ್ನೆಲೆಯಲ್ಲಿ ಮೂರು ದಿನಗಳ ಕಾಲ ಸಾರ್ವಜನಿಕರ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ.

ಮುನ್ನೆಚ್ಚರಿಕೆ ಕ್ರಮವಾಗಿ ಯಾವುದೇ ರೀತಿಯ ಅಹಿತಕರ ಘಟನೆ ನಡೆಯದಂತೆ ಸಾರ್ವಜನಿಕರ ಪ್ರವೇಶಕ್ಕೆ ದೆಹಲಿ ಆಯುಕ್ತರು ನಿರ್ಬಂಧ ವಿಧಿಸಿ ಆದೇಶ ಹೊರಡಿಸಿದ್ದಾರೆ.

ಪ್ರತಿದಿನ ಕೆಂಪುಕೋಟೆ ವೀಕ್ಷಣೆ ಮಾಡಲು ಸಾವಿರಾರು ಮಂದಿ ಆಗಮಿಸುತ್ತಾರೆ. ಅದರಲ್ಲೂ ವಾರದ ಕೊನೆಯ ದಿನವಾದ ಶನಿವಾರ, ಭಾನುವಾರ ಭಾರೀ ಸಂಖ್ಯೆಯಲ್ಲಿ ಬರುತ್ತಾರೆ.

ಇದನ್ನೂ ಓದಿ:-ರಸ್ತೆ ಬದಿಯಲ್ಲಿ ಮೃತದೇಹ ಪತ್ತೆ ; ಕೊಲೆ ಶಂಕೆ

ಸೋಮವಾರ ಸಂಜೆ ಕೆಂಪುಕೋಟೆ ಸಮೀಪದ ಮೆಟ್ರೋ ರೈಲ್ವೆ ನಿಲ್ದಾಣದ ಬಳಿ ಹುಂಡೈ ಕಾರು ಸ್ಪೋಟಗೊಂಡು 9 ಮಂದಿ ಸಾವನ್ನಪ್ಪಿ ಹಲವಾರು ಮಂದಿ ಗಾಯಗೊಂಡಿದ್ದರು. ಹೀಗಾಗಿ ಕೆಂಪುಕೋಟೆ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ.

Tags:
error: Content is protected !!