ಹೊಸದಿಲ್ಲಿ : ಐತಿಹಾಸಿಕ ಕೆಂಪುಕೋಟೆ ಬಳಿ ಸ್ಫೋಟಗೊಂಡ ಹಿನ್ನೆಲೆಯಲ್ಲಿ ಮೂರು ದಿನಗಳ ಕಾಲ ಸಾರ್ವಜನಿಕರ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ.
ಮುನ್ನೆಚ್ಚರಿಕೆ ಕ್ರಮವಾಗಿ ಯಾವುದೇ ರೀತಿಯ ಅಹಿತಕರ ಘಟನೆ ನಡೆಯದಂತೆ ಸಾರ್ವಜನಿಕರ ಪ್ರವೇಶಕ್ಕೆ ದೆಹಲಿ ಆಯುಕ್ತರು ನಿರ್ಬಂಧ ವಿಧಿಸಿ ಆದೇಶ ಹೊರಡಿಸಿದ್ದಾರೆ.
ಪ್ರತಿದಿನ ಕೆಂಪುಕೋಟೆ ವೀಕ್ಷಣೆ ಮಾಡಲು ಸಾವಿರಾರು ಮಂದಿ ಆಗಮಿಸುತ್ತಾರೆ. ಅದರಲ್ಲೂ ವಾರದ ಕೊನೆಯ ದಿನವಾದ ಶನಿವಾರ, ಭಾನುವಾರ ಭಾರೀ ಸಂಖ್ಯೆಯಲ್ಲಿ ಬರುತ್ತಾರೆ.
ಇದನ್ನೂ ಓದಿ:-ರಸ್ತೆ ಬದಿಯಲ್ಲಿ ಮೃತದೇಹ ಪತ್ತೆ ; ಕೊಲೆ ಶಂಕೆ
ಸೋಮವಾರ ಸಂಜೆ ಕೆಂಪುಕೋಟೆ ಸಮೀಪದ ಮೆಟ್ರೋ ರೈಲ್ವೆ ನಿಲ್ದಾಣದ ಬಳಿ ಹುಂಡೈ ಕಾರು ಸ್ಪೋಟಗೊಂಡು 9 ಮಂದಿ ಸಾವನ್ನಪ್ಪಿ ಹಲವಾರು ಮಂದಿ ಗಾಯಗೊಂಡಿದ್ದರು. ಹೀಗಾಗಿ ಕೆಂಪುಕೋಟೆ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ.
ಹಾಸನ: ಇಡೀ ದೇಶವೇ ಅಲ್ಲೋಲ, ಕಲ್ಲೋಲ ಆಗುವ ಸುದ್ದಿ ಕೊಡುತ್ತೇನೆ ಎಂಬ ಮಾತನ್ನು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಪುನರುಚ್ಛರಿಸಿದ್ದಾರೆ. ಈ…
ಇಸ್ಲಾಮಾಬಾದ್: ಉಗ್ರ ಮಸೂದ್ ಅಜರ್ ಸುಳಿವು ಕೊಟ್ಟವರಿಗೆ 24 ಲಕ್ಷ ರೂ ಬಹುಮಾನ ನೀಡುವುದಾಗಿ ಪಾಕಿಸ್ತಾನ ಘೋಷಣೆ ಮಾಡಿದೆ. ದೇಶದ…
ಬೆಂಗಳೂರು: ಮುಂಗಾರು ಮಳೆಯ ಅಬ್ಬರ ಕಾಣಬೇಕಿದ್ದ ಸೆಪ್ಟೆಂಬರ್ ತಿಂಗಳಲ್ಲೇ ಕರ್ನಾಟಕದಲ್ಲಿ ಬಿರು ಬೇಸಿಗೆಯ ವಾತಾವರಣ ನಿರ್ಮಾಣವಾಗಿದೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ…
ಮಂಡ್ಯ: ಮೈಸೂರು ದಸರಾಗಿಂತಲೂ ಪುರಾತನವಾದ ಶ್ರೀರಂಗಪಟ್ಟಣ ದಸರಾವನ್ನು ಈ ಬಾರಿ ಬರಗಾಲದ ಹಿನ್ನೆಲೆಯಲ್ಲಿ ಅದ್ದೂರಿತನದ ಬದಲು ಸಾಂಪ್ರದಾಯಿಕವಾಗಿ ಆಚರಿಸಲು ತೀರ್ಮಾನಿಸಲಾಗಿದೆ…
ಹನೂರು: ತಾಲೂಕಿನ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸಂದನಪಾಳ್ಯ ಗ್ರಾಮದ ಸೆಂಟ್ ಆಂಥೋನಿ ಶಾಲೆಯಲ್ಲಿ ಕಳೆದ ಆರು ತಿಂಗಳಿನಿಂದ ಕುಡಿಯುವ…
ಮಂಡ್ಯ: ಬೈಕ್‌ಗೆ ಹಾಲಿನ ಟ್ಯಾಂಕರ್ ಡಿಕ್ಕಿ ಹೊಡೆದ ಪರಿಣಾಮ ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ದಾರುಣ ಘಟನೆ ಮಂಡ್ಯ…