ಚೆನ್ನೈ: ಮೈಸೂರಿನಿಂದ ದರ್ಭಾಂಗ್‌ಗೆ ತೆರಳುತ್ತಿದ್ದ ಭಾಗಮತಿ ಎಕ್ಸ್‌ಪ್ರೆಸ್ ರೈಲು, ಚೆನ್ನೈ ಸಮೀಪದ ಗುಮ್ಮುಡಿಪೂಂಡಿಯ ಬಳಿ ಶುಕ್ರವಾರ ರಾತ್ರಿ ಗೂಡ್ಸ್ ರೈಲಿಗೆ ಡಿಕ್ಕಿ ಹೊಡೆದಿದೆ. ಪರಿಣಾಮ 13ಬೋಗಿಗಳು ಹಳಿತಪ್ಪಿದ್ದು, ಡಿಕ್ಕಿಯ ರಭಸಕ್ಕೆ ಎರಡು ಬೋಗಿಗಳು ಹೊತ್ತಿ ಉರಿದಿವೆ.
ರಾತ್ರಿ ಸು.8:28ರ ವೇಳೆಗೆ ಘಟನೆ ನಡೆದಿದ್ದು, ಕನಿಷ್ಟ 19ಮಂದಿಗೆ ಗಾಯವಾಗಿದೆ. ಅಪಘಾಯಕ್ಕೀಡಾದ ರೈಲು75 ಕಿ.ಮೀ ವೇಗದಲ್ಲಿ ಚಲಿಸುತ್ತಿತ್ತು ಎಂದು ದಕ್ಷಿಣ ರೈಲ್ವೆ ತಿಳಿಸಿದೆ.
ರೈಲು ಪೊನ್ನೇರಿ ನಿಲ್ದಾಣ ದಾಟಿದ್ದ ವೇಳೆಗೆ, ಕವರೈಪೆಟ್ಟೈ ನಿಲ್ದಾಣ ಪ್ರವೇಶಿಸಿಲು ಗ್ರೀನ್ ಸಿಗ್ಲನ್ ನೀಡಲಾಗಿತ್ತು. ಈ ಪ್ರಕಾರ ಮುಖ್ಯ ಮಾರ್ಗಕ್ಕೆ ಹೋಗುವ ಬದಲು, ಲೂಪ ಹಳಿಗೆ ಪ್ರವೇಶಿಸಿ, ಆ ಹಳಿಯಲ್ಲಿ ನಿಂತಿದ್ದ ಗೂಡ್ಸ್ ರೈಲಿಗೆ ಡಿಕ್ಕಿಯಾಗಿದೆ. ಸಿಬ್ಬಂದಿ ಸುರಕ್ಷಿತವಾಗಿದ್ದಾರೆ ಎಂದು ದಕ್ಷಿಣ ರೈಲ್ವೆ ಪ್ರಕಟಣೆಯಲ್ಲಿ ತಿಳಿಸಿದೆ.
ಘಟನೆಯಲ್ಲಿ 19 ಮಂದಿ ಗಾಯಗೊಂಡಿದ್ದಾರೆ. ಈ ಪೈಕಿ 14 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ತಮಿಳುನಾಡು ಸರ್ಕಾರದ ಮೂಲಗಳು ತಿಳಿಸಿವೆ.
ಬೆಂಗಳೂರು : ಹಾಲಿನ ದರ ಏರಿಕೆ ಕುರಿತು ರಾಜ್ಯದಲ್ಲಿ ಚರ್ಚೆ ತೀವ್ರಗೊಂಡಿರುವ ಬೆನ್ನಲ್ಲೇ ಬೆಂಗಳೂರಿನ ಹೋಟೆಲ್‌ಗಳಲ್ಲಿ ಕಾಫಿ, ಟೀ ಸೇರಿದಂತೆ…
ಬೆಂಗಳೂರು : ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ಪಶುವೈದ್ಯಕೀಯ ವೈದ್ಯರ ನೇಮಕಾತಿ ಪರೀಕ್ಷೆಯಲ್ಲಿನ ಅಕ್ರಮಗಳ ತನಿಖೆ ಮತ್ತಷ್ಟು ವಿಸ್ತರಿಸಿದ್ದು, ಪ್ರಶ್ನೆಪತ್ರಿಕೆ…
ಡಾ.ಪ್ರಮೀಳಾದೇವಿ ಬಿ.ಕೆ ಗಾಂಧೀಜಿಯ ನೆರಳಿ ನಂತಿದೂ ಅವರ ಚಿಂತನೆಗಳ, ಪ್ರಯೋಗ ಗಳನ್ನು ತಿದ್ದಿ ತೀಡಿದ ಪತ್ನಿ ಕಸ್ತೂರ ಬಾ. ಬಾಲ್ಯ…
ಬ್ಯಾರಿಸ್ಟರ್ ಎನ್ನಿಸಿಕೊಳ್ಳುವುದು ಸುಲಭವಾಗಿತ್ತು. ಆದರೆ ವಕೀಲಿ ವೃತ್ತಿಯನ್ನು ನಡೆಸುವುದು ಕಷ್ಟವಾಗಿತ್ತು. ನಾನು ಕಾನೂನುಗಳನ್ನೇನೋ ವ್ಯಾಸಂಗ ಮಾಡಿದ್ದೆ. ಅವುಗಳನ್ನು ಕಾರ್ಯ ರೂಪದಲ್ಲಿ…
ಲಕ್ನೋ: ಉತ್ತರ ಪ್ರದೇಶದಲ್ಲಿ ರಕ್ಷಣಾ ಉತ್ಪಾದನೆಗೆ ಹೆಚ್ಚಿನ ಉತ್ತೇಜನ ದೊರೆಯುತ್ತಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.…
ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಕಾಕ್ರೋಚ್ ಜನತಾ ಪಾರ್ಟಿ, ಅಂದರೆ ಸಿಜೆಪಿ ಆಗ್ರಹಿಸಿದೆ. ಸಿಜೆಪಿ…