ದೇಶ- ವಿದೇಶ

ಪೂರ್ಣ ಸಿದ್ಧವಾಗದ ಎಕ್ಸ್‌ಪ್ರೇಸ್‌ ವೇ : ಟೋಲ್‌ ಕಡಿತ

ಹೊಸದಿಲ್ಲಿ : ರಾಷ್ಟ್ರೀಯ ಹೆದ್ದಾರಿಗಳಲ್ಲಿ ಸಂಚರಿಸುವ ಸಾರ್ವಜನಿಕರಿಗೆ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯವು ಮಹತ್ವದ ಸುದ್ದಿಯೊಂದನ್ನು ನೀಡಿದೆ. ಪೂರ್ಣ ಪ್ರಮಾಣದಲ್ಲಿ ಸಿದ್ಧವಾಗದ ಅಥವಾ ಭಾಗಶಃ ಕಾರ್ಯನಿರ್ವಹಿಸುತ್ತಿರುವ ಎಕ್ಸ್‌ಪ್ರೆಸ್‌ವೇಗಳಲ್ಲಿ ಸಂಚರಿಸುವಾಗ ವಾಹನ ಸವಾರರು ಹೆಚ್ಚಿನ ಟೋಲ್ ನೀಡಬೇಕಿಲ್ಲ. ಈ ಕುರಿತಂತೆ ‘ರಾಷ್ಟ್ರೀಯ ಹೆದ್ದಾರಿ ಶುಲ್ಕ ನಿಯಮಗಳು, 2008’ ಕ್ಕೆ ಮಹತ್ವದ ತಿದ್ದುಪಡಿಯನ್ನು ತರಲಾಗಿದ್ದು, ಹೊಸ ನಿಯಮಗಳು ಫೆ.15ರಿಂದ ಜಾರಿಯಾಗಲಿವೆ.

ಸಾಮಾನ್ಯವಾಗಿ ಎಕ್ಸ್‌ಪ್ರೆಸ್‌ವೇಗಳು ಪ್ರವೇಶ-ನಿಯಂತ್ರಿತ, ವೇಗದ ಮತ್ತು ತಡೆರಹಿತ ಪ್ರಯಾಣದ ಅನುಭವವನ್ನು ನೀಡುವುದರಿಂದ, ಇವುಗಳ ಟೋಲ್ ದರವು ಸಾಮಾನ್ಯ ರಾಷ್ಟ್ರೀಯ ಹೆದ್ದಾರಿಗಳಿಗಿಂತ ಶೇ.25ರಷ್ಟು ಹೆಚ್ಚಾಗಿರುತ್ತದೆ. ಈ ಹಿಂದೆ, ಎಕ್ಸ್‌ಪ್ರೆಸ್‌ವೇ ಕೆಲಸ ಸಂಪೂರ್ಣವಾಗಿ ಮುಗಿಯದಿದ್ದರೂ, ಸಿದ್ಧವಾದ ಭಾಗಕ್ಕೆ ಇದೇ ಹೆಚ್ಚಿನ ದರವನ್ನು ವಿಧಿಸಲಾಗುತ್ತಿತ್ತು. ಆದರೆ ಹೊಸ ತಿದ್ದುಪಡಿಯ ಪ್ರಕಾರ, ಎಕ್ಸ್‌ಪ್ರೆಸ್‌ವೇ ಒಂದು ತುದಿಯಿಂದ ಇನ್ನೊಂದು ತುದಿಯವರೆಗೆ ಸಂಪೂರ್ಣವಾಗಿ ಸಂಚಾರಕ್ಕೆ ಮುಕ್ತವಾಗದಿದ್ದರೆ, ಅಲ್ಲಿ ಎಕ್ಸ್‌ಪ್ರೆಸ್‌ವೇ ದರವನ್ನು ವಿಧಿಸುವಂತಿಲ್ಲ. ಬದಲಾಗಿ, ಸಾಮಾನ್ಯ ರಾಷ್ಟ್ರೀಯ ಹೆದ್ದಾರಿಗೆ ಅನ್ವಯವಾಗುವ ಕಡಿಮೆ ದರದ ಟೋಲ್ ಅನ್ನು ಮಾತ್ರ ಪೂರ್ಣಗೊಂಡ ಉದ್ದಕ್ಕೆ ವಿಧಿಸಲಾಗುತ್ತದೆ.

ಈ ಹೊಸ ತಿದ್ದುಪಡಿಯು ಶಾಶ್ವತವಲ್ಲ, ಸಚಿವಾಲಯದ ಮಾಹಿತಿ ಪ್ರಕಾರ, ಈ ವಿನಾಯಿತಿಯು ತಿದ್ದುಪಡಿ ಜಾರಿಗೆ ಬಂದ ದಿನಾಂಕದಿಂದ ಒಂದು ವರ್ಷದವರೆಗೆ ಮಾತ್ರ ಅಥವಾ ಆ ಎಕ್ಸ್‌ಪ್ರೆಸ್‌ವೇ ಸಂಪೂರ್ಣವಾಗಿ ಕಾರ್ಯಾರಂಭ ಮಾಡುವವರೆಗೆ (ಯಾವುದು ಮೊದಲೋ ಅಲ್ಲಿಯವರೆಗೆ) ಜಾರಿಯಲ್ಲಿರುತ್ತದೆ. ಒಮ್ಮೆ ಎಕ್ಸ್‌ಪ್ರೆಸ್‌ವೇ ಸಂಪೂರ್ಣವಾಗಿ ಸಿದ್ಧವಾದರೆ, ಮತ್ತೆ ಮೂಲ ಎಕ್ಸ್‌ಪ್ರೆಸ್‌ವೇ ದರಗಳೇ ಅನ್ವಯವಾಗುತ್ತವೆ. ಒಟ್ಟಾರೆಯಾಗಿ, ಮೂಲಸೌಕರ್ಯ ಅಭಿವೃದ್ಧಿ ಹಂತದಲ್ಲಿರುವಾಗ ಜನಸಾಮಾನ್ಯರ ಜೇಬಿಗೆ ಹೊರೆಯಾಗದಂತೆ ಕೇಂದ್ರ ಸರ್ಕಾರ ಈ ದಿಟ್ಟ ಕ್ರಮ ಕೈಗೊಂಡಿದೆ. ಇದು ಫೆ.15ರಿಂದ ರಸ್ತೆಗಿಳಿಯುವ ಲಕ್ಷಾಂತರ ವಾಹನ ಸವಾರರಿಗೆ ಲಾಭ ತರಲಿದೆ.

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ನಾನು ಜೆಡಿಎಸ್‌ಗೆ ಹೋಗ್ತೀನಿ ಅನ್ನೋದು ಊಹಾಪೋಹ: ಸಚಿವ ಜಮೀರ್‌ ಅಹಮ್ಮದ್‌ ಖಾನ್‌

ಬೆಂಗಳೂರು: ಜೆಡಿಎಸ್ ಪಕ್ಷವನ್ನು ಬಿಟ್ಟುಬಂದಿರುವ ನಾನು ಮತ್ತೆ ಆ ಪಕ್ಷಕ್ಕೆ ಹೋಗುವ ಚಿಂತನೆ ಮಾಡಿಲ್ಲ. ಇಂತಹ ವಿಚಾರಗಳು ಊಹಾಪೋಹ ಹಾಗೂ…

17 seconds ago

ಕಾವೇರಿ ನದಿಯಲ್ಲಿ ಮುಳುಗಿ ಇಬ್ಬರು ವಿದ್ಯಾರ್ಥಿಗಳು ಸಾವು: ಮತ್ತೋರ್ವ ವಿದ್ಯಾರ್ಥಿ ಸ್ಥಿತಿ ಗಂಭೀರ

ಟಿ.ನರಸೀಪುರ: ಕಾವೇರಿ ನದಿಯಲ್ಲಿ ಮುಳುಗಿ ಇಬ್ಬರು ವಿದ್ಯಾರ್ಥಿಗಳು ಸಾವನ್ನಪ್ಪಿದ್ದು, ಮತ್ತೋರ್ವ ವಿದ್ಯಾರ್ಥಿ ಸ್ಥಿತಿ ಗಂಭೀರವಾಗಿರುವ ಘಟನೆ ಮೈಸೂರು ಜಿಲ್ಲೆ ತಲಕಾಡಿನ…

22 mins ago

ಹನೂರು: ಕೆಸರಿನಲ್ಲಿ ಸಿಲುಕಿಕೊಂಡು ನಿತ್ರಾಣಗೊಂಡಿದ್ದ ಆನೆಗೆ ಮುಂದುವರೆದ ಚಿಕಿತ್ಸೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ನೀರು ಕುಡಿಯಲು ಬಂದು ಕೆಸರಿನಲ್ಲಿ ಸಿಲುಕಿಕೊಂಡಿದ್ದ ಆನೆಯನ್ನು ರಕ್ಷಣೆ ಮಾಡಿ…

30 mins ago

ರಾಜ್ಯಾದ್ಯಂತ ಇನ್ನೊಂದು ವಾರ ಹೆಚ್ಚಾಗಲಿದೆ ರಣ ಬಿಸಿಲು

ಬೆಂಗಳೂರು: ರಾಜ್ಯಾದ್ಯಂತ ಇನ್ನೊಂದು ವಾರ ಬಿಸಿಲಿ ಝಳ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕರುನಾಡು ಬಿಸಿಲ ಧಗೆಗೆ ಬಳಲಿ…

39 mins ago

ರಾಜ್ಯದಲ್ಲಿ 400 ಕ್ಕೂ ಹೈಟೆಕ್ ಹಾರ್ವೆಸ್ಟ್ ಹಬ್ ಯಂತ್ರಗಳನ್ನು ರೈತರಿಗೆ ನೀಡಲಾಗಿದೆ: ಸಚಿವ ಎನ್.ಚಲುವರಾಯಸ್ವಾಮಿ

ಮಂಡ್ಯ: ರೈತರ ಅಭಿವೃದ್ಧಿಗಾಗಿ ಮಂಡ್ಯ ಜಿಲ್ಲೆಗೆ ಕೃಷಿ ವಿಶ್ವವಿದ್ಯಾನಿಲಯ ತರಲಾಗಿದೆ. ಜಿಲ್ಲೆಯ ರೈತರು ಕೃಷಿ ವಿಶ್ವವಿದ್ಯಾನಿಲಯದ ಸದುಪಯೋಗವನ್ನು ಪಡೆದುಕೊಳ್ಳಬೇಕು ಎಂದು…

58 mins ago

ಮಂಡ್ಯ ಜಿಲ್ಲೆಗೆ ಕೃಷಿ ವಿ.ವಿ ; ರೈತರ ಸದುಪಯೋಗಕ್ಕೆ ಸಚಿವರ ಕರೆ

ಮಂಡ್ಯ : ರೈತರ ಅಭಿವೃದ್ಧಿಗಾಗಿ ಜಿಲ್ಲೆಗೆ ಕೃಷಿ ವಿಶ್ವವಿದ್ಯಾನಿಲಯ ತರಲಾಗಿದೆ. ಜಿಲ್ಲೆಯ ರೈತರು ಕೃಷಿ ವಿಶ್ವವಿದ್ಯಾನಿಲಯದ ಸದುಪಯೋಗವನ್ನು ಪಡೆದುಕೊಳ್ಳಬೇಕು ಎಂದು…

1 hour ago