ಕಳೆದ ಭಾನುವಾರ ( ಡಿಸೆಂಬರ್ 3 ) ರಾಜಸ್ಥಾನ ವಿಧಾನಸಭಾ ಚುನಾವಣೆಯ ಫಲಿತಾಂಶ ಹೊರಬಿದ್ದಿತ್ತು. ಭಾರತೀಯ ಜನತಾ ಪಾರ್ಟಿ ಸ್ಪಷ್ಟ ಬಹುಮತ ಪಡೆದುಕೊಳ್ಳುವ ಮೂಲಕ ಅಧಿಕಾರದ ಚುಕ್ಕಾಣಿ ಹಿಡಿಯುವ ಅರ್ಹತೆ ಗಿಟ್ಟಿಸಿಕೊಂಡಿತು.
ಕೇವಲ ರಾಜಸ್ಥಾನ ಮಾತ್ರವಲ್ಲದೇ ಛತ್ತೀಸ್ ಘಡ ಹಾಗೂ ಮಧ್ಯ ಪ್ರದೇಶದಲ್ಲೂ ಸಹ ಬಿಜೆಪಿ ಜಯ ಸಾಧಿಸಿತು. ಈ ಬೃಹತ್ ಗೆಲುವಿನ ಬಳಿಕ ಯಾರಿಗೆ ಈ ರಾಜ್ಯಗಳ ಸಿಎಂ ಜವಾಬ್ದಾರಿಯನ್ನು ವಹಿಸಬೇಕು ಎಂಬುದು ಬಿಜೆಪಿ ಹೈಕಮಾಂಡ್ ಮುಂದಿರುವ ಸವಾಲಾಗಿದೆ.
ಈ ವಿಷಯದ ಕುರಿತಾಗಿ ನಾಳೆ ಸಭೆ ನಡೆಯಲಿದ್ದು, ಇಂದು ಸಂಜೆ ವೇಳೆಗೆ ಸಾಮಾಜಿಕ ಜಾಲತಾಣದಲ್ಲಿ ಪತ್ರವೊಂದು ವೈರಲ್ ಆಗಿದೆ. ಬಿಜೆಪಿ ಪಕ್ಷದ ಮಹಾಂತ್ ಬಾಲಕನಾಥ್ ಯೋಗಿ ರಾಜಸ್ಥಾನದ ಮುಖ್ಯಮಂತ್ರಿ ಎಂದು ಬಿಜೆಪಿ ಆಯ್ಕೆ ಮಾಡಿದೆ ಎಂದು ಉಲ್ಲೇಖಿಸಿರುವ ಪತ್ರ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದೆ. ಈ ಪತ್ರ ನೋಡಿದ ಹಲವರು ಯೋಗಿ ಫೋಟೊ ಹಂಚಿಕೊಂಡು ಶುಭವನ್ನೂ ಸಹ ಕೋರಿದ್ದಾರೆ.
ಆದರೆ ಇದರ ಹಿಂದಿನ ಸತ್ಯಾಂಶ ಬೇರೆಯದ್ದೇ ಇದೆ. ಇದೊಂದು ನಕಲಿ ಪತ್ರವಾಗಿದ್ದು, ಕಿಡಿಗೇಡಿಗಳು ಈ ಪತ್ರವನ್ನು ವೈರಲ್ ಮಾಡಿದ್ದಾರೆ. ಹೀಗೆ ಪತ್ರವೊಂದು ವೈರಲ್ ಆಗ್ತಿದೆ ಎಂಬ ವಿಷಯ ತಿಳಿಯುತ್ತಿದ್ದಂತೆ ರಾಜಸ್ಥಾನ ಬಿಜೆಪಿ ಇದು ಸುಳ್ಳು ಎಂಬ ವಿಷಯವನ್ನು ಟ್ವಿಟರ್ ಮೂಲಕ ತಿಳಿಸಿದೆ.
ಲಕ್ಷಾಂತರ ಜನರಿಗೆ ಮೈಂಡ್ ಸೆಟ್ ಕೋಚ್ ಆಗಿ ಮಾರ್ಗದರ್ಶ ಗುಜರಾತಿನ ಅಹ್ಮದ್‌ನಗರದ ೩೮ ವರ್ಷ ಪ್ರಾಯದ ಜೈಕಿಶನ್ ಶರ್ಮಾ ಒಬ್ಬ…
ಲಕ್ಷ್ಮೀಕಾಂತ್ ಕೊಮಾರಪ್ಪ ಸೋಮವಾರಪೇಟೆ: ಹಲವು ಅಡೆತಡೆಗಳ ನಡುವೆಯೂ ೩ ವರ್ಷಗಳ ಬಳಿಕ ಕೊಡಗು- ಹಾಸನ ಜಿಲ್ಲೆಗಳ ಗಡಿಭಾಗದ ಯಸಳೂರು ಸಮೀಪ…
ಮಹಾದೇಶ್ ಎಂ.ಗೌಡ ಹನೂರು: ಚಾಮರಾಜನಗರ ಜಿಲ್ಲೆಯಲ್ಲಿ ಸಫಾರಿ ಎಂದರೆ ನೆನಪಾಗುವುದು ಬಂಡೀಪುರ, ಕೆ.ಗುಡಿ ಮಾತ್ರ. ಇತ್ತೀಚಿನ ದಿನಗಳಲ್ಲಿ ಹನೂರು ತಾಲ್ಲೂಕಿನ…
ರಾಜೇಶ್ ಬೆಂಡರವಾಡಿ ಚಾಮರಾಜೇಶ್ವರ ದೇವಸ್ಥಾನಕ್ಕೆ ಸೇರಿದ ಈ ಕಟ್ಟಡದಲ್ಲಿ ಬೆಳೆದಿದೆ ಅರಳಿಮರ; ಶೀಘ್ರದಲ್ಲಿ ಕಟ್ಟಡ ತೆರವುಗೊಳಿಸಲು ಆಗ್ರಹ ಚಾಮರಾಜನಗರ: ಇಲ್ಲಿನ…
ಚಿರಂಜೀವಿ ಸಿ ಹುಲ್ಲಹಳ್ಳಿ ಮೈಸೂರು: ಶತಮಾನಕ್ಕೂ ಹೆಚ್ಚು ಇತಿಹಾಸ ಹೊಂದಿರುವ ಭವ್ಯ ಪಾರಂಪರಿಕ ಕಟ್ಟಡ, ದೊಡ್ಡ ಬಾಗಿಲು-ಕಿಟಕಿಗಳೊಂದಿಗೆ ಇನ್ನೂ ಗಟ್ಟಿಯಾಗಿ…
ರಾಮನಗರ: ಬೆಂಗಳೂರು ಮತ್ತು ಮೈಸೂರು ನಡುವೆ ನಿತ್ಯ ಸಂಚರಿಸುವ ಒಡೆಯರ್ ಎಕ್ಸ್‌ಪ್ರೆಸ್ ರೈಲಿಗೆ ಈಗ ರಾಮನಗರ ರೈಲ್ವೆ ನಿಲ್ದಾಣದಲ್ಲಿ ನಿಲುಗಡೆ…