ಮುಂಬೈ: ಮಹಾರಾಷ್ಟ್ರ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಮಹಾಯುತಿಯ ನಾಯಕ ದೇವೇಂದ್ರ ಫಡ್ನವೀಸ್ ಗುರುವಾರ ಅಧಿಕಾರಿ ವಹಿಸಿಕೊಂಡರು.
ಮುಂಬೈನ ಆಜಾದ್ ಮೈದಾನದಲ್ಲಿ ರಾಜ್ಯದ ರಾಜ್ಯಾಪಾಲ ಸಿ.ಪಿ. ರಾಧಾಕೃಷ್ಣನ್ ಪ್ರತಿಜ್ಞಾವಿಧಿ ಭೋದಿಸಿದರು. ದೇವರ ಹೆಸರಿನಲ್ಲಿ ʼಮಹಾʼ ಮುಖ್ಯಮಂತ್ರಿಯಾಗಿ ದೇವೇಂದ್ರ ಫಡ್ನವೀಸ್ ಪ್ರಮಾಣ ವಚನ ಸ್ವೀಕರಿಸಿದರು.ಉಪಮುಖ್ಯಮಂತ್ರಿಗಳಾಗಿ ಏಕನಾಥ್ ಶಿಂಧೆ ಮತ್ತು ಅಜಿತ್ ಪವಾರ್ ಪ್ರಮಾಣ ವಚನ ಸ್ವೀಕರಿಸಿದರು.
ಮೋದಿ ಸೇರಿದಂತೆ ಗಣ್ಯರ ಭಾಗಿ
ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹಸಚಿವ ಅಮಿತ್ ಶಾ, ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಆಂಧ್ರ ಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು, ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಭಾಗವಹಿಸಿದ್ದರು.
ಹಾಗೆಯೇ ಭಾರತದ ಕ್ರಿಕೆಟ್ ಆಟಗಾರ ಸಚಿನ್ ತೆಂಡೂಲ್ಕರ್ ಹಾಗೂ ಬಾಲಿವುಡ್ ಸ್ಟಾರ್‌ಗಳಾದ ಶಾರುಖ್ ಖಾನ್, ಸಲ್ಮಾನ್ ಖಾನ್, ರಣವೀರ್ ಸಿಂಗ್, ವಿದ್ಯಾ ಬಾಲನ್ ಸೇರಿದಂತೆ ಇನ್ನಿತರರು ಪಾಳ್ಗೊಂಡಿದ್ದರು.