ದೇಶ- ವಿದೇಶ

ಫಡ್ನವೀಸ್ ʻಮಹಾʼ ಸಿಎಂ: ಮೋದಿ,ಶಾ ಸೇರಿದಂತೆ ಗಣ್ಯರ ಭಾಗಿ

ಮುಂಬೈ: ಮಹಾರಾಷ್ಟ್ರ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಮಹಾಯುತಿಯ ನಾಯಕ ದೇವೇಂದ್ರ ಫಡ್ನವೀಸ್ ಗುರುವಾರ ಅಧಿಕಾರಿ ವಹಿಸಿಕೊಂಡರು.

ಮುಂಬೈನ ಆಜಾದ್‌ ಮೈದಾನದಲ್ಲಿ ರಾಜ್ಯದ ರಾಜ್ಯಾಪಾಲ ಸಿ.ಪಿ. ರಾಧಾಕೃಷ್ಣನ್‌ ಪ್ರತಿಜ್ಞಾವಿಧಿ ಭೋದಿಸಿದರು. ದೇವರ ಹೆಸರಿನಲ್ಲಿ ʼಮಹಾʼ ಮುಖ್ಯಮಂತ್ರಿಯಾಗಿ ದೇವೇಂದ್ರ ಫಡ್ನವೀಸ್‌ ಪ್ರಮಾಣ ವಚನ ಸ್ವೀಕರಿಸಿದರು.ಉಪಮುಖ್ಯಮಂತ್ರಿಗಳಾಗಿ ಏಕನಾಥ್‌ ಶಿಂಧೆ ಮತ್ತು ಅಜಿತ್‌ ಪವಾರ್‌ ಪ್ರಮಾಣ ವಚನ ಸ್ವೀಕರಿಸಿದರು.

ಮೋದಿ ಸೇರಿದಂತೆ ಗಣ್ಯರ ಭಾಗಿ
ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹಸಚಿವ ಅಮಿತ್‌ ಶಾ, ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ, ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌, ಆಂಧ್ರ ಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು, ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್‌ ಭಾಗವಹಿಸಿದ್ದರು.

ಹಾಗೆಯೇ ಭಾರತದ ಕ್ರಿಕೆಟ್‌ ಆಟಗಾರ ಸಚಿನ್‌ ತೆಂಡೂಲ್ಕರ್ ಹಾಗೂ ಬಾಲಿವುಡ್‌ ಸ್ಟಾರ್‌ಗಳಾದ ಶಾರುಖ್‌ ಖಾನ್‌, ಸಲ್ಮಾನ್‌ ಖಾನ್‌, ರಣವೀರ್‌ ಸಿಂಗ್‌, ವಿದ್ಯಾ ಬಾಲನ್‌ ಸೇರಿದಂತೆ ಇನ್ನಿತರರು ಪಾಳ್ಗೊಂಡಿದ್ದರು.

 

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಇರಾನ್‌ನಲ್ಲಿ ಕಾಣೆಯಾಗಿದ್ದ US ವಾಯುಪಡೆಯ ಮತ್ತೋರ್ವ ಪೈಲಟ್‌ ರಕ್ಷಣೆ

ವಾಷಿಂಗ್ಟನ್:‌ ಮಧ್ಯಪ್ರಾಚ್ಯದಲ್ಲಿನ ಯುದ್ಧದ ಭೀಕರತೆ 37ನೇ ದಿನವೂ ಮುಂದುವರಿದಿದೆ. ಯುದ್ಧದ ಮಧ್ಯೆಯೂ ಅಮೇರಿಕಾ ಸೇನೆಯಿಂದ ಸುದ್ದಿಯೊಂದು ಹೊರಬಿದ್ದಿದ್ದು, ಇರಾನ್‌ನಲ್ಲಿ ಕಾಣೆಯಾಗಿದ್ದ…

15 mins ago

ಎಚ್‌ಎಸ್‌ಆರ್‌ಪಿ ಅಳವಡಿಕೆ ಕಡ್ಡಾಯ: ಸಾರಿಗೆ ಇಲಾಖೆ ಸ್ಪಷ್ಟನೆ

ಬೆಂಗಳೂರು: ಹಳೆಯ ವಾಹನಗಳಿಗೆ ಎಚ್‌ಎಸ್‌ಆರ್‌ಪಿ ಕಡ್ಡಾಯವಾಗಿ ಅಳವಡಿಸಬೇಕು ಎಂಬ ನಿಯಮದಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಸಾರಿಗೆ ಇಲಾಖೆ ಸ್ಪಷ್ಟನೆ…

60 mins ago

ಗ್ಯಾರಂಟಿ ಬಿಟ್ಟರೆ ಬೇರೆ ಬಂಡವಾಳ ಇವರಿಗಿಲ್ಲ: ರಾಜ್ಯ ಸರ್ಕಾರದ ವಿರುದ್ಧ ಎಚ್‌ಡಿಕೆ ಕಿಡಿ

ದಾವಣಗೆರೆ: ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಇರುವ ಏಕೈಕ ಬಂಡವಾಳ ಎಂದರೆ ಐದು ಗ್ಯಾರಂಟಿಗಳು ಮಾತ್ರ. ಅವುಗಳನ್ನು ಕೂಡ ಮನಸ್ಸು ಇಚ್ಛೆ,…

1 hour ago

ಅಹಿಂದ ಹತ್ತಿಕ್ಕಲು ಸಿದ್ದರಾಮಯ್ಯ ಯತ್ನ: ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಆರೋಪ

ದಾವಣಗೆರೆ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ರಾಜಕೀಯ ಸ್ವಾರ್ಥಕ್ಕಾಗಿ ಮತ್ತು ಕುರ್ಚಿ ಉಳಿಸಿಕೊಳ್ಳಲು ತಮ್ಮನ್ನು ಬೆಳೆಸಿದ್ದ ಅಹಿಂದ ವರ್ಗವನ್ನೇ ಹತ್ತಿಕ್ಕಲು…

1 hour ago

ಹಲವು ಜಿಲ್ಲೆಗಳಲ್ಲಿ ಇಂದು ಕೂಡ ಮಳೆಯ ಆರ್ಭಟ: ಹವಾಮಾನ ಇಲಾಖೆ ಸೂಚನೆ

ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದು ಸಂಜೆಯ ವೇಳೆಗೆ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಭಾರೀ…

2 hours ago

ಮೈಸೂರು: ಹಸಿರು ಕ್ರಾಂತಿ ಹರಿಕಾರ ಬಾಬುಜಗಜೀವನ್ ರಾಮ್ 119ನೇ ಜಯಂತಿ ಆಚರಣೆ

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಇಂದು ಹಸಿರು ಕ್ರಾಂತಿ ಹರಿಕಾರ ಬಾಬು ಜಗಜೀವನ್‌ ರಾಮ್‌ ಅವರ 119ನೇ ಜಯಂತಿಯನ್ನು ಆಚರಣೆ…

2 hours ago