ದೇಶ- ವಿದೇಶ

ತಮಿಳುನಾಡು: ನಕಲಿ ಮದ್ಯ ಸೇವಿಸಿ ಮೃತಪಟ್ಟವರ ಸಂಖ್ಯೆ 29ಕ್ಕೆ ಏರಿಕೆ

ಚೆನ್ನೈ: ತಮಿಳುನಾಡಿನ ಕಲ್ಲಕುರಿಚಿ ಜಿಲ್ಲೆಯಲ್ಲಿ ನಕಲಿ ಮದ್ಯ ಸೇವಿಸಿ ಮೃತಪಟ್ಟವರ ಸಂಖ್ಯೆ 29ಕ್ಕೆ ಏರಿಕೆಯಾಗಿದೆ. ಘಟನೆಯಲ್ಲಿ 60ಕ್ಕೂ ಹೆಚ್ಚು ಮಂದಿ ಅಸ್ವಸ್ಥಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

ಸಾವಿನ ಸಂಖ್ಯೆ ಏರಿಕೆಯಾಗುವ ಸಂಭವ ಇದೆ ಎಂದು ಅಧಿಕಾರಿಗಳು ಕಳವಳ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಖಾಸಗಿ ಸುದ್ದಿಸಂಸ್ಥೆ ‘ಎಎನ್‌ಐ’ ವರದಿ ಮಾಡಿದೆ.

ಘಟನೆಗೆ ಸಂಬಂಧಿಸಿದಂತೆ ಕೆ.ಕಣ್ಣಾಕುಟ್ಟಿ (49) ಎಂಬವರನ್ನು ಬಂಧಿಸಲಾಗಿದ್ದು, 200 ಲೀಟರ್ ನಕಲಿ ಮದ್ಯ ವಶಪಡಿಸಿಕೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ನಕಲಿ ಮದ್ಯ ದುರಂತಕ್ಕೆ ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಸಂತಾಪ ಸೂಚಿಸಿದ್ದು, ಪ್ರಕರಣವನ್ನು ಸಿಬಿ-ಸಿಐಡಿ ತನಿಖೆಗೆ ಆದೇಶಿಸಿದ್ದಾರೆ.

‘ಕಲ್ಲಕುರಿಚಿ ದುರಂತ ಆಘಾತವನ್ನು ಉಂಟು ಮಾಡಿದೆ. ಆರೋಪಿಯನ್ನು ಬಂಧಿಸಲಾಗಿದೆ. ತಪ್ಪಿತಸ್ಥ ಅಧಿಕಾರಿಗಳ ವಿರುದ್ಧವೂ ಕ್ರಮ ಕೈಗೊಳ್ಳಲಾಗುವುದು’ ಎಂದು ಅವರು ಹೇಳಿದ್ದಾರೆ.

ತಮಿಳುನಾಡು ರಾಜ್ಯಪಾಲ ಆರ್‌.ವಿ.ರವಿ ಸಹ ದುರಂತಕ್ಕೆ ಸಂತಾಪ ಸೂಚಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಪಟ್ಟಂತೆ ಒಂಭತ್ತು ಪೊಲೀಸ್ ಸಿಬ್ಬಂದಿಯನ್ನು ಅಮಾನತುಗೊಳಿಸಲಾಗಿದೆ.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಅಬ್ದುಲ್‌ ಜಬ್ಬಾರ್‌ ರಾಜೀನಾಮೆ ಅಂಗೀಕರಿಸಿದ ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು: ಕೆಪಿಸಿಸಿ ಅಲ್ಪಸಂಖ್ಯಾತ ವಿಭಾಗದ ಅಧ್ಯಕ್ಷ ಸ್ಥಾನಕ್ಕೆ ಅಬ್ದುಲ್ ಜಬ್ಬಾರ್ ಅವರು ನೀಡಿರುವ ರಾಜೀನಾಮೆಯನ್ನು ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಡಿಸಿಎಂ…

18 mins ago

ಹಾಸನ: ಕಾಡಾನೆ ದಾಳಿಗೆ ಮತ್ತೋರ್ವ ರೈತ ಬಲಿ

ಹಾಸನ: ಕಾಡಾನೆ ದಾಳಿಗೆ ಮತ್ತೋರ್ವ ರೈತ ಬಲಿಯಾಗಿರುವ ಧಾರುಣ ಘಟನೆ ಹಾಸನದಲ್ಲಿ ನಡೆದಿದೆ. ಹಾಸನ ಜಿಲ್ಲೆಯ ಬೇಲೂರು ತಾಲ್ಲೂಕಿನ ಕಣಗುಪ್ಪೆ…

33 mins ago

ಏಪ್ರಿಲ್.‌15ರವರೆಗೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಏಪ್ರಿಲ್.‌15ರವರೆಗೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ…

46 mins ago

ಗಾಯಕಿ ಆಶಾ ಭೋಸ್ಲೆ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂತಾಪ

ಮುಂಬೈ: ಭಾರತೀಯ ಚಿತ್ರರಂಗದ ಖ್ಯಾತ ಗಾಯಕಿ ಆಶಾ ಭೋಸ್ಲೆ ವಿಧಿವಶರಾಗಿದ್ದಾರೆ. ಹಿರಿಯ ಗಾಯಕಿ ಅಗಲಿಕೆಗೆ ಪ್ರಧಾನಿ ನರೇಂದ್ರ ಮೋದಿ ಕಂಬನಿ…

52 mins ago

ಹೆಬ್ಜುಲ್ಲಾ ಭದ್ರಕೋಟೆ ಟಾರ್ಗೆಟ್‌ ಮಾಡಿ ಇಸ್ರೇಲ್‌ ದಾಳಿ: 11 ಮಂದಿ ಸಾವು

ಬೈರುತ್‌: ಅಮೇರಿಕಾ-ಇರಾನ್‌ ಮಾತುಕತೆ ವಿಫಲವಾದ ಕೆಲವೇ ಗಂಟೆಗಳ ನಂತರ ಹೆಬ್ಜುಲ್ಲಾ ಭದ್ರಕೋಟೆಯನ್ನು ಗುರಿಯಾಗಿಸಿಕೊಂಡು ಇಸ್ರೇಲ್‌ ನಡೆಸಿದ ದಾಳಿಯಲ್ಲಿ 11 ಮಂದಿ…

1 hour ago

ಶಕ್ತಿ ಯೋಜನೆ ಟಿಕೆಟ್ ದುರ್ಬಳಕೆ : ಬಿಎಂಟಿಸಿ ಐವರು ಕಂಡಕ್ಟರ್‌ ಅಮಾನತು

ಬೆಂಗಳೂರು : ಶಕ್ತಿ ಯೋಜನೆಯ ಮಹಿಳಾ ಟಿಕೆಟ್‌ಗಳನ್ನು ಪುರುಷ ಪ್ರಯಾಣಿಕರಿಗೂ ನೀಡಿ ಹಣ ಸಂಗ್ರಹಿಸಿ, ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಗೆ…

2 hours ago