Mysore
23
clear sky

Social Media

ಶನಿವಾರ, 27 ಡಿಸೆಂಬರ್ 2025
Light
Dark

ಕಾಂಗ್ರೆಸ್‌ಗೆ ಕುಟುಂಬ ರಾಜಕಾರಣವೇ ಮುಖ್ಯ: ಪ್ರಧಾನಿ ನರೇಂದ್ರ ಮೋದಿ

ನವದೆಹಲಿ: ಸಬ್‌ ಕಾ ಸಾಥ್‌, ಸಬ್‌ ಕಾ ವಿಕಾಸ್‌ ಎಂಬ ತತ್ವವು ಎಲ್ಲರ ಜವಾಬ್ದಾರಿಯಾಗಿದ್ದರೂ, ಕಾಂಗ್ರೆಸ್‌ನಿಂದ ಅದನ್ನು ನಿರೀಕ್ಷಿಸುವುದು ತಪ್ಪು ಎಂದು ರಾಜ್ಯಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ವಾಗ್ದಾಳಿ ನಡೆಸಿದ್ದಾರೆ.

ಇಂದು ರಾಜ್ಯಸಭೆಯಲ್ಲಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ ಅವರು, ಕಾಂಗ್ರೆಸ್‌ ತನ್ನ ನೀತಿಗಳಲ್ಲಿ ಕುಟುಂಬವೇ ಮೊದಲು ಎಂಬುದಕ್ಕೆ ಆದ್ಯತೆ ನೀಡುತ್ತಿದೆ ಎಂದು ಟೀಕಿಸಿದರು.

ಇನ್ನು ಬಿಜೆಪಿಯ ಗಮನ ರಾಷ್ಟ್ರ ಮೊದಲು ಎಂದು ಹೇಳಿದ ಪ್ರಧಾನಿ ಮೋದಿ ಅವರು, ಭಾರತದ ಜನರು ಬಿಜೆಪಿಯ ಅಭಿವೃದ್ಧಿ ಮಾದರಿಗೆ ಬಲವಾದ ಬೆಂಬಲವನ್ನು ನೀಡಿದ್ದಾರೆ. ಆದರೆ ಕಾಂಗ್ರೆಸ್‌ ಸುಳ್ಳು, ವಂಚನೆ, ಭ್ರಷ್ಟಾಚಾರ, ಸ್ವಜನಪಕ್ಷಪಾತದ ಮಿಶ್ರಣವಿರುವ ರಾಜಕೀಯದ ಮಾದರಿಯನ್ನು ಸೃಷ್ಟಿಸಿದೆ. ಕಾಂಗ್ರೆಸ್‌ಗೆ ಕುಟುಂಬ ರಾಜಕಾರಣವೇ ಮುಖ್ಯ. ಅಂಥವರಿಂದ ಸಬ್ಕಾ ವಿಕಾಸ್‌ ಸಾಧ್ಯವಿಲ್ಲ ಎಂದು ಲೇವಡಿ ಮಾಡಿದರು.

ಇನ್ನು ಮುಂದುವರಿದು ಮಾತನಾಡಿದ ಅವರು, ನಮ್ಮ ಸರ್ಕಾರದ ಗಮನ ತುಷ್ಟಿಕರಣಕ್ಕಿಂತ ಸಂತುಷ್ಟಿಕರಣದ ಮೇಲೆ ಇದೆ ಎಂದು ಒತ್ತಿ ಒತ್ತಿ ಹೇಳಿದರು.

ಇನ್ನು ಕಾಂಗ್ರೆಸ್‌ಗೆ ಬಿ.ಆರ್‌.ಅಂಬೇಡ್ಕರ್‌ ಬಗ್ಗೆ ದ್ವೇಷ, ಕೋಪವಿತ್ತು. ಲೋಕಸಭಾ ಚುನಾವಣೆಯಲ್ಲಿ ಅವರನ್ನು ಎರಡು ಬಾರಿ ಸೋಲಿಸಲು ಎಲ್ಲಾ ಪ್ರಯತ್ನಗಳನ್ನು ಮಾಡಿತು ಎಂದು ಪ್ರಧಾನಿ ಮೋದಿ ಆರೋಪಿಸಿದರು.

Tags:
error: Content is protected !!