ನವದೆಹಲಿ: ಸಬ್ ಕಾ ಸಾಥ್, ಸಬ್ ಕಾ ವಿಕಾಸ್ ಎಂಬ ತತ್ವವು ಎಲ್ಲರ ಜವಾಬ್ದಾರಿಯಾಗಿದ್ದರೂ, ಕಾಂಗ್ರೆಸ್‌ನಿಂದ ಅದನ್ನು ನಿರೀಕ್ಷಿಸುವುದು ತಪ್ಪು ಎಂದು ರಾಜ್ಯಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ವಾಗ್ದಾಳಿ ನಡೆಸಿದ್ದಾರೆ.
ಇಂದು ರಾಜ್ಯಸಭೆಯಲ್ಲಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ ಅವರು, ಕಾಂಗ್ರೆಸ್ ತನ್ನ ನೀತಿಗಳಲ್ಲಿ ಕುಟುಂಬವೇ ಮೊದಲು ಎಂಬುದಕ್ಕೆ ಆದ್ಯತೆ ನೀಡುತ್ತಿದೆ ಎಂದು ಟೀಕಿಸಿದರು.
ಇನ್ನು ಬಿಜೆಪಿಯ ಗಮನ ರಾಷ್ಟ್ರ ಮೊದಲು ಎಂದು ಹೇಳಿದ ಪ್ರಧಾನಿ ಮೋದಿ ಅವರು, ಭಾರತದ ಜನರು ಬಿಜೆಪಿಯ ಅಭಿವೃದ್ಧಿ ಮಾದರಿಗೆ ಬಲವಾದ ಬೆಂಬಲವನ್ನು ನೀಡಿದ್ದಾರೆ. ಆದರೆ ಕಾಂಗ್ರೆಸ್ ಸುಳ್ಳು, ವಂಚನೆ, ಭ್ರಷ್ಟಾಚಾರ, ಸ್ವಜನಪಕ್ಷಪಾತದ ಮಿಶ್ರಣವಿರುವ ರಾಜಕೀಯದ ಮಾದರಿಯನ್ನು ಸೃಷ್ಟಿಸಿದೆ. ಕಾಂಗ್ರೆಸ್‌ಗೆ ಕುಟುಂಬ ರಾಜಕಾರಣವೇ ಮುಖ್ಯ. ಅಂಥವರಿಂದ ಸಬ್ಕಾ ವಿಕಾಸ್ ಸಾಧ್ಯವಿಲ್ಲ ಎಂದು ಲೇವಡಿ ಮಾಡಿದರು.
ಇನ್ನು ಮುಂದುವರಿದು ಮಾತನಾಡಿದ ಅವರು, ನಮ್ಮ ಸರ್ಕಾರದ ಗಮನ ತುಷ್ಟಿಕರಣಕ್ಕಿಂತ ಸಂತುಷ್ಟಿಕರಣದ ಮೇಲೆ ಇದೆ ಎಂದು ಒತ್ತಿ ಒತ್ತಿ ಹೇಳಿದರು.
ಇನ್ನು ಕಾಂಗ್ರೆಸ್‌ಗೆ ಬಿ.ಆರ್.ಅಂಬೇಡ್ಕರ್ ಬಗ್ಗೆ ದ್ವೇಷ, ಕೋಪವಿತ್ತು. ಲೋಕಸಭಾ ಚುನಾವಣೆಯಲ್ಲಿ ಅವರನ್ನು ಎರಡು ಬಾರಿ ಸೋಲಿಸಲು ಎಲ್ಲಾ ಪ್ರಯತ್ನಗಳನ್ನು ಮಾಡಿತು ಎಂದು ಪ್ರಧಾನಿ ಮೋದಿ ಆರೋಪಿಸಿದರು.
ಬೆಂಗಳೂರು: ಅರಬ್ಬಿ ಸಮುದ್ರದ ಮೇಲೆ ತೇವಾಂಶ ಭರಿತ ಮೋಡಗಳು ಹಾದು ಹೋಗಿರುವ ಹಿನ್ನೆಲೆಯಲ್ಲಿ ರಾಜ್ಯದ ಹಲವೆಡೆ ಸೋಮವಾರ ಮಳೆಯಾಗಿದೆ. ರಾಜಧಾನಿ…
ದಾವಣಗೆರೆ: 2028ಕ್ಕೆ ಎಚ್.ಡಿ.ಕುಮಾರಸ್ವಾಮಿ ಸಿಎಂ ಎಂಬ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವ ಜಮೀರ್ ಅಹಮ್ಮದ್ ಖಾನ್ ವ್ಯಂಗ್ಯವಾಡಿದ್ದಾರೆ. ಈ ಕುರಿತು…
ಗದಗ: ಲಕ್ಕುಂಡಿಯಲ್ಲಿ ಮನೆ ಪಾಯ ಅಗೆಯುವ ವೇಳೆ ಚಿನ್ನದ ನಿಧಿ ಪತ್ತೆಹಚ್ಚಿ ಪ್ರಾಮಾಣಿಕವಾಗಿ ಸರ್ಕಾರಕ್ಕೆ ಒಪ್ಪಿಸಿದ ಪ್ರಜ್ವಲ್ ರಿತ್ತಿ ಕುಟುಂಬಕ್ಕೆ…
ಉಡುಪಿ: ಅರಬ್ಬಿ ಸಮುದ್ರದಲ್ಲಿ ಟೂರಿಸ್ಟ್ ಬೋಟ್ ಮುಳುಗಿ ಇಬ್ಬರು ಪ್ರವಾಸಿಗರು ಸಾವನ್ನಪ್ಪಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು…
ಬೆಂಗಳೂರು: ಬ್ಯಾಂಕಿಂಗ್ ಕ್ಷೇತ್ರದ ನೌಕರರಿಗೆ ವಾರಕ್ಕೆ ಐದು ದಿನ ಮಾತ್ರ ಕೆಲಸದ ದಿನವಾಗಿಸಬೇಕೆಂಬುದು ಸೇರಿದಂತೆ ತಮ್ಮ ವಿವಿಧ ಬೇಡಿಕೆಗಳ ಈಡೇರಿಕೆಗೆ…
ಉಡುಪಿ: ಇಲ್ಲಿನ ಮಲ್ಪೆ ಕೋಡಿಬೆಂಗ್ರೆ ಬೀಷಚ್ ಸಮೀಪ ಪ್ರವಾಸಿ ದೋಣಿ ಮುಗುಚಿದ ಪರಿಣಾಮ ತೀವ್ರ ಅಸ್ವಸ್ಥಗೊಂಡಿದ್ದ ಮೈಸೂರಿನ ಇಬ್ಬರು ಮೃತಪಟ್ಟಿರುವ…