Mysore
19
scattered clouds

Social Media

ಸೋಮವಾರ, 23 ಡಿಸೆಂಬರ್ 2024
Light
Dark

ಬಾಲಿವುಡ್‌ ಖ್ಯಾತ ನಿರ್ದೇಶಕ ಶ್ಯಾಮ್‌ ಬೆನಗಲ್‌ ವಿಧಿವಶ

ಮುಂಬೈ: ಬಾಲಿವುಡ್‌ನ ಖ್ಯಾತ ನಿರ್ದೇಶಕ ಶ್ಯಾಮ್‌ ಬೆನಗಲ್‌ ಅವರಿಂದು ವಿಧಿವಶರಾಗಿದ್ದಾರೆ. ಅವರಿಗೆ 90 ವರ್ಷ ವಯಸ್ಸಾಗಿತ್ತು.

ಕಳೆದ ಕೆಲ ತಿಂಗಳುಗಳಿಂದ ಬೆನಗಲ್‌ ಅವರು ಮೂತ್ರಪಿಂಡ ಸಂಬಂಧಿತ ಸಮಸ್ಯೆಗಳಿಂದ ಬಳಲುತ್ತಿದ್ದರು.

ಈ ಹಿನ್ನೆಲೆಯಲ್ಲಿ ಅವರನ್ನು ಮುಂಬೈನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಬೆನಗಲ್‌ ವಿಧಿವಶರಾಗಿದ್ದಾರೆ.

ಶ್ಯಾಮ್‌ ಬೆನಗಲ್‌ ಅವರು ಡಿಸೆಂಬರ್.‌14ರಂದು ತಮ್ಮ 90ನೇ ಹುಟ್ಟುಹಬ್ಬವನ್ನು ಸ್ನೇಹಿತರು ಹಾಗೂ ಕುಟುಂಬದೊಂದಿಗೆ ಆಚರಣೆ ಮಾಡಿಕೊಂಡಿದ್ದರು.

ಬೆನಗಲ್‌ ಅವರಿಗೆ ಭಾರತ ಸರ್ಕಾರವು 1976ರಲ್ಲಿ ಪದ್ಮಶ್ರೀ ಮತ್ತು 1991 ರಲ್ಲಿ ಪದ್ಮಭೂಷಣ ಪ್ರಶಸ್ತಿ ನೀಡಿ ಗೌರವಿಸಿತು. ಅವರ ಯಶಸ್ವಿ ಚಿತ್ರಗಳಲ್ಲಿ ಮಂಥನ್‌, ಜುಬೇದಾ ಮತ್ತು ಸರ್ದಾರಿ ಬೇಗಂ ಸೇರಿವೆ.

 

 

Tags: