ಚೆನ್ನೈ: ರಾಷ್ಟ್ರಪ್ರಶಸ್ತಿ ವಿಜೇತ ಖ್ಯಾತ ತಮಿಳು ನಿರ್ದೇಶಕ, ನಟ ಭಾರತಿರಾಜ ಇಂದು ವಿಧಿವಶರಾಗಿದ್ದಾರೆ. ಅವರಿಗೆ 84 ವರ್ಷ ವಯಸ್ಸಾಗಿತ್ತು.
ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಭಾರತಿರಾಜ ಅವರು ಇಂದು ಕೊನೆಯುಸಿರೆಳೆದಿದ್ದಾರೆ.
ತಮ್ಮ ಚಿತ್ರಗಳ ಮೂಲಕ ಚಿತ್ರರಂಗದ ದಿಕ್ಕನ್ನೇ ಬದಲಿಸಿದ ಈ ಮಹಾನ್ ಚೇತನನ ಅಗಲಿಕೆಗೆ ಇಡೀ ಭಾರತೀಯ ಚಿತ್ರರಂಗ ಕಂಬನಿ ಮಿಡಿದಿದೆ.





