ನವದೆಹಲಿ: ರೈತರು ಮತ್ತು ಮೀನುಗಾರರಿಗೆ ಸಮಸ್ಯೆಯಾಗುವ ಯಾವುದೇ ಹಿತಾಸಕ್ತಿಯ ಜೊತೆ ಭಾರತ ಎಂದಿಗೂ ರಾಜಿ ಮಾಡಿಕೊಳ್ಳುವುದಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಸ್ಪಷ್ಟನೆ ನೀಡಿದ್ದಾರೆ.
ಡೊನಾಲ್ಡ್ ಟ್ರಂಪ್ ಭಾರತದ ವಿರುದ್ಧ ಸುಂಕ ಸಮರವನ್ನು ಆರಂಭಿಸಿದ ಮರುದಿನವೇ ಪ್ರಧಾನಿ ನರೇಂದ್ರ ಮೋದಿ ಈ ಹೇಳಿಕೆ ನೀಡುವ ಮೂಲಕ ಅಮೇರಿಕಾಗೆ ಖಡಕ್ ಸಂದೇಶ ರವಾನಿಸಿದ್ದು, ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ತಿರುಗೇಟು ನೀಡಿದ್ದಾರೆ.
ಸರ್ಕಾರದ ಈ ನಿರ್ಧಾರದಿಂದ ದುಬಾರಿ ಬೆಲೆ ತೆರಬೇಕಾಗುತ್ತದೆ ಎನ್ನುವುದು ತಿಳಿದಿದ್ದರೂ ರೈತರಿಗಾಗಿ ನಾನು ಯಾವುದೇ ಕಾರಣಕ್ಕೂ ರಾಜಿಯಾಗುವುದಿಲ್ಲ ಎಂದು ಹೇಳಿದ್ದಾರೆ.
ರೈತರ ಹಿತಾಸಕ್ತಿ ನಮ್ಮ ಪ್ರಮುಖ ಆದ್ಯತೆಯಾಗಿದೆ. ಭಾರತ ತನ್ನ ರೈತರು, ಜಾನುವಾರು ಮಾಲೀಕರು ಮತ್ತು ಮೀನುಗಾರರ ಹಿತಾಸಕ್ತಿಗಳೊಂದಿಗೆ ಎಂದಿಗೂ ರಾಜಿ ಮಾಡಿಕೊಳ್ಳುವುದಿಲ್ಲ. ಸರ್ಕಾರದ ನಿರ್ಧಾರದಿಂದ ಭಾರೀ ಬೆಲೆ ತೆರಬೇಕಾಗುತ್ತದೆ ಎನ್ನುವುದು ನನಗೆ ತಿಳಿದಿದೆ. ಇದಕ್ಕೆ ನಾನು ಸಿದ್ಧನಿದ್ದೇನೆ. ದೇಶದ ರೈತರು, ಮೀನುಗಾರರು ಮತ್ತು ಜಾನುವಾರು ಮಾಲೀಕರ ಹಿತದೃಷ್ಟಿಯಿಂದ ಭಾರತ ಎಲ್ಲದಕ್ಕೂ ಸಿದ್ಧವಾಗಿದೆ ಎಂದು ತಿಳಿಸಿದರು.





