Mysore
18
clear sky

Social Media

ಮಂಗಳವಾರ, 18 ಫೆಬ್ರವರಿ 2025
Light
Dark

ಫೆಬ್ರವರಿ.5ರಂದು ಮಹಾಕುಂಭಮೇಳದಲ್ಲಿ ಪ್ರಧಾನಿ ನರೇಂದ್ರ ಮೋದಿ ಪುಣ್ಯಸ್ನಾನ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರು ದೆಹಲಿ ವಿಧಾನಸಭಾ ಚುನಾವಣೆ ದಿನದಂದೇ ಅಂದರೆ ಫೆಬ್ರವರಿ.5ರಂದು ಪ್ರಯಾಗ್‍ರಾಜ್‍ನ ಕುಂಭಮೇಳಕ್ಕೆ ಭೇಟಿ ನೀಡಿ ಪುಣ್ಯಸ್ನಾನ ಮಾಡಲಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಮಾತ್ರವಲ್ಲದೆ, ರಾಷ್ಟ್ರಪತಿ ದೌಪದಿ ಮುರ್ಮು, ಉಪರಾಷ್ಟ್ರಪತಿ ಜಗದೀಪ್ ಧನ್ವರ್, ಗೃಹ ಸಚಿವ ಅಮಿತ್ ಶಾ ಕೂಡಾ ಪುಣ್ಯ ಸ್ನಾನ ಮಾಡುವ ದಿನಾಂಕ ನಿಗದಿಯಾಗಿದೆ.

ಗೃಹಸಚಿವ ಅಮಿತ್ ಶಾ ಅವರು, ಜನವರಿ.27ರಂದು, ಉಪರಾಷ್ಟ್ರಪತಿ ಜಗದೀಪ್ ಧನ್ವರ್ ಫೆಬ್ರವರಿ.1ರಂದು, ರಾಷ್ಟ್ರಪತಿ ದೌಪದಿ ಮುರ್ಮು ಅವರು, ಫೆಬ್ರವರಿ.10ರಂದು ಗಂಗಾ ನದಿಯಲ್ಲಿ ಪುಣ್ಯಸ್ನಾನ ಮಾಡಲಿದ್ದಾರೆ.

ಕುಂಭಮೇಳಕ್ಕೆ ಗಣ್ಯಾತಿಗಣ್ಯರು ಆಗಮಿಸಲಿರುವ ಹಿನ್ನೆಲೆಯಲ್ಲಿ ಯಾವುದೇ ಅಹಿತರಕ ಘಟನೆ ನಡೆಯದಂತೆ ಭದ್ರತೆ ಒದಗಿಸಲಾಗಿದೆ.

Tags: