ಚೆನ್ನೈ: ಫೆಂಗಲ್ ಚಂಡಮಾರುತ ಅಪ್ಪಳಿಸಿರುವ ಪರಿಣಾಮ ತಮಿಳುನಾಡಿನಾದ್ಯಂತ ಧಾರಾಕಾರ ಮಳೆಯಾಗುತ್ತಿದ್ದು, ಜನ ಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ.
ತಮಿಳುನಾಡು ಮತ್ತು ಕೇಂದ್ರಾಡಳಿತ ಪ್ರದೇಶ ಪುದುಚೇರಿಯಲ್ಲಿ ದಾಖಲೆಯ ಮಳೆಯಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಪುದುಚೇರಿಯಲ್ಲಿ ಬರೋಬ್ಬರಿ 500 ಮಿ.ಮೀ ಮಳೆಯಾಗಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಪ್ರಸ್ತುತ ಪುದುಚೇರಿ ಬಳಿ ಫೆಂಗಲ್ ಚಂಡಮಾರುತ ಸ್ಥಿರವಾಗಿದ್ದು, ಮುಂದಿನ ಮೂರು ಗಂಟೆಗಳಲ್ಲಿ ಕ್ರಮೇಣ ದುರ್ಬಲಗೊಳ್ಳಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಇನ್ನು ಭಾರೀ ಮಳೆ ಸುರಿಯುತ್ತಿರುವ ಪರಿಣಾಮ ಎಲ್ಲಾ ಅಂಗಡಿಗಳು ಹಾಗೂ ವ್ಯಾಪಾರ ಸಂಸ್ಥೆಗಳನ್ನು ಮುಚ್ಚಲಾಗಿದೆ.
ಜೋರು ಮಳೆಯಿಂದ ಬೆಳೆದು ನಿಂತಿದ್ದ ಕೃಷಿಭೂಮಿಗಳು ಪ್ರವಾಹದ ನೀರಿನಲ್ಲಿ ಮುಳುಗಿ ಅಪಾರ ಪ್ರಮಾಣದ ಬೆಳೆ ನಷ್ಟವಾಗಿದೆ.
ಭಾರೀ ಮಳೆಯಿಂದ ಹಲವು ವಸತಿ ಕಾಲೋನಿಗಳು ಸಂಪೂರ್ಣ ಜಲಾವೃತಗೊಂಡಿದ್ದು, ರಸ್ತೆಗಳಲ್ಲಿ ನಿಲ್ಲಿಸಿದ್ದ ದ್ವಿಚಕ್ರ ವಾಹನಗಳು ಹಾಗೂ ಕಾರುಗಳು ಸಂಪೂರ್ಣ ಮುಳುಗಿ ಹೋಗಿವೆ.
ಇನ್ನು ಪ್ರವಾಹದ ನೀರು ಚೆನ್ನೈನ ಬಹುತೇಕ ಮನೆಗಳಿಗೆ ನುಗ್ಗಿದ್ದು, ತಗ್ಗು ಪ್ರದೇಶಗಳಿಂದ ಜನರನ್ನು ಸುರಕ್ಷಿತ ಸ್ಥಳಕ್ಕೆ ರವಾನೆ ಮಾಡಲಾಗಿದೆ.
ಬೆಳಗಾವಿ: ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಆಕ್ಷೇಪಾರ್ಹ ಹೇಳಿಕೆ ಖಂಡಿಸಿ ಕಾಂಗ್ರೆಸ್…
ಮೈಸೂರು: ಸ್ನೇಹಮಯಿ ಕೃಷ್ಣಗೆ ಫಂಡಿಂಗ್ ಮಾಡುತ್ತಿರುವವರು ಯಾರು ಅನ್ನೋದು ಗೊತ್ತಿದೆ ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಕಿಡಿಕಾರಿದ್ದಾರೆ. ಮುಡಾ ಪ್ರಕರಣಕ್ಕೆ…
ನವದೆಹಲಿ: ಸಂಸತ್ ಭವನದ ಸಂಕೀರ್ಣದಲ್ಲಿ ಬಿಜೆಪಿ ಸಂಸದರು ನನ್ನನ್ನು ತಳ್ಳಿದ್ದಾರೆ ಎಂದು ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ…
ಬೆಳಗಾವಿ: ಕೇಂದ್ರ ಗ್ರಹ ಸಚಿವ ಅಮಿತ್ ಶಾ ಅವರು ಡಾ.ಬಿ.ಆರ್. ಅಂಬೇಡ್ಕರ್ ಕುರಿತು ನೀಡಿರುವ ಹೇಳಿಕೆ ವಿರುದ್ಧ ದೇಶಾದ್ಯಂತ ವ್ಯಾಪಕ…
ಬೆಳಗಾವಿ: ಸಂಸತ್ತಿನಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಕುರಿತು ಕೇಂದ್ರ ಗೃಹ ಸಚಿವ ಅಮಿತ್ ಶಾ ನೀಡಿರುವ ಹೇಳಿಕೆಗೆ ಸಂಬಂಧಿಸಿದಂತೆ ಕರ್ನಾಟಕ…
ಬೆಳಗಾವಿ: ನಕಲಿ ದಾಖಲೆ ಸೃಷ್ಟಿಸಿ ಅಕ್ರಮವಾಗಿ ರಾಜ್ಯದಲ್ಲಿ ನೆಲೆಸಿರುವ ಪಾಕಿಸ್ತಾನ ಹಾಗೂ ಬಾಂಗ್ಲಾದೇಶದ ಪ್ರಜೆಗಳನ್ನು ಬಂಧಿಸಲಾಗಿದೆ ಎಂದು ಗೃಹ ಸಚಿವ…