Mysore
18
overcast clouds

Social Media

ಭಾನುವಾರ, 25 ಜನವರಿ 2026
Light
Dark

ರಾಜ್ಯದಲ್ಲಿ ರಸಗೊಬ್ಬರ ಕೊರತೆ ವಿಚಾರ: ಲೋಕಸಭೆಯಲ್ಲಿ ಸಂಸದ ಕೆ.ಸುಧಾಕರ್‌ ಪ್ರಸ್ತಾಪ

K Sudhakar

ನವದೆಹಲಿ: ರಾಜ್ಯದಲ್ಲಿ ರಸಗೊಬ್ಬರದ ಕೊರತೆ ಉಂಟಾಗಿದ್ದು, ರೈತರು ಪರದಾಟ ನಡೆಸುತ್ತಿದ್ದಾರೆ ಎಂದು ಲೋಕಸಭೆ ಕಲಾಪದಲ್ಲಿ ಬಿಜೆಪಿ ಸಂಸದ ಡಾ.ಕೆ.ಸುಧಾಕರ್‌ ಪ್ರಸ್ತಾಪ ಮಾಡಿದ್ದಾರೆ.

ಲೋಕಸಭೆಯಲ್ಲಿ ಶೂನ್ಯವೇಳೆಯಲ್ಲಿ ಮಾತನಾಡಿದ ಸಂಸದ ಸುಧಾಕರ್‌ ಅವರು, ಮುಂಗಾರು ಅವಧಿ ಕೃಷಿಗೆ ನಿರ್ಣಾಯಕವಾಗಿದೆ. ಈ ವೇಳೆಯಲ್ಲಿ ಭತ್ತ, ಜೋಳ, ದ್ವಿದಳ ಧಾನ್ಯ, ಸೋಯಾಬಿನ್‌ ಸೇರಿದಂತೆ ವಿವಿಧ ಬೆಳೆಗಳನ್ನು ರೈತರು ಬೆಳೆಯುತ್ತಾರೆ. ಕೇಂದ್ರ ಸರ್ಕಾರವು ಈ ಹಂಗಾಮಿನಲ್ಲಿ 8.13 ಲಕ್ಷ ಟನ್‌ ಯೂರಿಯಾವನ್ನು ರಾಜ್ಯಕ್ಕೆ ಕಳುಹಿಸಿದೆ. ಆದರೆ ಕಾಂಗ್ರೆಸ್‌ ಸರ್ಕಾರದ ಅಸಮರ್ಪಕ ಆಡಳಿತದಿಂದ ರೈತರಿಗೆ ಭಾರೀ ತೊಂದರೆಯಾಗುತ್ತಿದೆ. ಕಾಳಸಂತೆಯಲ್ಲಿ ದುಪ್ಪಟ್ಟು ಬೆಲೆಗೆ ರಸಗೊಬ್ಬರ ಮಾರಾಟ ಮಾಡಲಾಗುತ್ತಿದೆ ಎಂದು ಗಂಭೀರ ಆರೋಪ ಮಾಡಿದರು.

ಇನ್ನು ರಾಜ್ಯದಲ್ಲಿ ದಾಸ್ತಾನು ಇದ್ದರೂ ಯೂರಿಯಾ ಹಾಗೂ ಡಿಎಪಿ ಹಂಚಿಕೆ ಮಾಡಿಲ್ಲ.‌ ಈ ಮೂಲಕ ರೈತರಿಗೆ ಅನ್ಯಾಯ ಮಾಡಲಾಗುತ್ತಿದೆ. ಕೇಂದ್ರ ಸರ್ಕಾರವು ಮಧ್ಯ ಪ್ರವೇಶ ಮಾಡಿ ಸಮರ್ಪಕ ರಸಗೊಬ್ಬರ ಪೂರೈಕೆಗೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಸೂಚಿಸಬೇಕು ಎಂದು ಮನವಿ ಮಾಡಿದರು.

Tags:
error: Content is protected !!