K Sudhakar
ನವದೆಹಲಿ: ರಾಜ್ಯದಲ್ಲಿ ರಸಗೊಬ್ಬರದ ಕೊರತೆ ಉಂಟಾಗಿದ್ದು, ರೈತರು ಪರದಾಟ ನಡೆಸುತ್ತಿದ್ದಾರೆ ಎಂದು ಲೋಕಸಭೆ ಕಲಾಪದಲ್ಲಿ ಬಿಜೆಪಿ ಸಂಸದ ಡಾ.ಕೆ.ಸುಧಾಕರ್ ಪ್ರಸ್ತಾಪ ಮಾಡಿದ್ದಾರೆ.
ಲೋಕಸಭೆಯಲ್ಲಿ ಶೂನ್ಯವೇಳೆಯಲ್ಲಿ ಮಾತನಾಡಿದ ಸಂಸದ ಸುಧಾಕರ್ ಅವರು, ಮುಂಗಾರು ಅವಧಿ ಕೃಷಿಗೆ ನಿರ್ಣಾಯಕವಾಗಿದೆ. ಈ ವೇಳೆಯಲ್ಲಿ ಭತ್ತ, ಜೋಳ, ದ್ವಿದಳ ಧಾನ್ಯ, ಸೋಯಾಬಿನ್ ಸೇರಿದಂತೆ ವಿವಿಧ ಬೆಳೆಗಳನ್ನು ರೈತರು ಬೆಳೆಯುತ್ತಾರೆ. ಕೇಂದ್ರ ಸರ್ಕಾರವು ಈ ಹಂಗಾಮಿನಲ್ಲಿ 8.13 ಲಕ್ಷ ಟನ್ ಯೂರಿಯಾವನ್ನು ರಾಜ್ಯಕ್ಕೆ ಕಳುಹಿಸಿದೆ. ಆದರೆ ಕಾಂಗ್ರೆಸ್ ಸರ್ಕಾರದ ಅಸಮರ್ಪಕ ಆಡಳಿತದಿಂದ ರೈತರಿಗೆ ಭಾರೀ ತೊಂದರೆಯಾಗುತ್ತಿದೆ. ಕಾಳಸಂತೆಯಲ್ಲಿ ದುಪ್ಪಟ್ಟು ಬೆಲೆಗೆ ರಸಗೊಬ್ಬರ ಮಾರಾಟ ಮಾಡಲಾಗುತ್ತಿದೆ ಎಂದು ಗಂಭೀರ ಆರೋಪ ಮಾಡಿದರು.
ಇನ್ನು ರಾಜ್ಯದಲ್ಲಿ ದಾಸ್ತಾನು ಇದ್ದರೂ ಯೂರಿಯಾ ಹಾಗೂ ಡಿಎಪಿ ಹಂಚಿಕೆ ಮಾಡಿಲ್ಲ. ಈ ಮೂಲಕ ರೈತರಿಗೆ ಅನ್ಯಾಯ ಮಾಡಲಾಗುತ್ತಿದೆ. ಕೇಂದ್ರ ಸರ್ಕಾರವು ಮಧ್ಯ ಪ್ರವೇಶ ಮಾಡಿ ಸಮರ್ಪಕ ರಸಗೊಬ್ಬರ ಪೂರೈಕೆಗೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಸೂಚಿಸಬೇಕು ಎಂದು ಮನವಿ ಮಾಡಿದರು.
ಚಾಮರಾಜನಗರ : ಆರು ತಿಂಗಳ ಹೆಣ್ಣು ಮಗುವನ್ನು ಮಾರಾಟ ಮಾಡಿರುವ ಪ್ರಕರಣ ನಗರದಲ್ಲಿ ನಡೆದಿದ್ದು, ಈ ಸಂಬಂಧ ಪೋಷಕರು ಸೇರಿದಂತೆ…
ಹನೂರು : ಜಮೀನಿನಲ್ಲಿ ಹುರುಳಿ ಫಸಲನ್ನು ಹಸು ಮೇಯ್ದಿದ್ದದನ್ನು ಪ್ರಶ್ನೆಸಿದ್ದಕ್ಕೆ ವೃದ್ಧೆಯನ್ನು ಮರಕ್ಕೆ ಕಟ್ಟಿಹಾಕಿ ಹಲ್ಲೆ ನಡೆಸಿರುವ ಅಮಾನವೀಯ ಘಟನೆ…
ಹಾಸನ : ಮುಂದಿನ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಿಗೆ ಸಿದ್ಧತೆ ನಡೆಸುವ ಸಂದೇಶವನ್ನು ರಾಜ್ಯದ ಜನರಿಗೆ ತಲುಪಿಸುವ ಗುರಿಯೊಂದಿಗೆ ನಗರದಲ್ಲಿ ಆಯೋಜಿಸಿದ್ದ…
ಮಳವಳ್ಳಿ : ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಹತ್ತುಕ್ಕೂ ಹೆಚ್ಚು ಮಂದಿ ತೀವ್ರವಾಗಿ ಗಾಯಗೊಂಡಿರುವ ಘಟನೆ ಹೊಸಹಳ್ಳಿ…
ನಂಜನಗೂಡು : ಶ್ರೀಕಂಠೇಶ್ವರ ದೇವಾಲಯದ ಆವರಣದಲ್ಲಿನ ಅನಧಿಕೃತ ಅಂಗಡಿಗಳನ್ನು ಇಂದು(ಜ.24) ಮತ್ತೋಮ್ಮೆ ತೆರವು ಗೊಳಿಸಲಾಯಿತು. ದೇವಾಲಯದ ನೂತನ ಕಾರ್ಯನಿರ್ವಾಹಕ ಅಧಿಕಾರ…
ಮುಂಬೈ : ಸೌದಿ ಅರೇಬಿಯಾದಿಂದ ಅಂತರರಾಷ್ಟ್ರೀಯ ಕೊರಿಯರ್ ಟರ್ಮಿನಲ್‌ನಲ್ಲಿ ಸಾಗಿಸುತ್ತಿದ್ದ ಗ್ರೈಂಡರ್‌ನಲ್ಲಿ ಬಚ್ಚಿಟ್ಟಿದ್ದ 2.89 ಕೋಟಿ ರೂ.ಮೌಲ್ಯದ ಚಿನ್ನವನ್ನು ಕಂದಾಯ…