ದೇಶ- ವಿದೇಶ

ಮಿತ್ರರ ಜೇಬು ತುಂಬಿಸುವುದೇ ʼರಾಷ್ಟ್ರ ನಿರ್ಮಾಣʼ: ರಾಹುಲ್‌ ಗಾಂಧಿ

ನವದೆಹಲಿ: ಮಿತ್ರರ ಜೇಬು ತುಂಬಿಸುವುದೇ ಪ್ರಧಾನಿ ಮೋದಿ ಅವರಿಗೆ ʼರಾಷ್ಟ್ರ ನಿರ್ಮಾಣʼದ ಕೆಲಸ ಎಂದು ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್‌ ಗಾಂಧಿ ಆರೋಪ ಮಾಡಿದ್ದಾರೆ.

ಸಾಮಾಜಿಕ ಮಾಧ್ಯಮ ʼಎಕ್ಸ್‌ʼ ನಲ್ಲಿ ಪೋಸ್ಟ್‌ ಮಾಡಿರುವ ರಾಹುಲ್‌ ಗಾಂಧಿ, “ಅಮೇರಿಕಾ ಪ್ರವಾಸದಲ್ಲಿರುವ ಮೋದಿ, ಉದ್ಯಮಿ ಗೌತಮ್‌ ಅದಾನಿ ಅವರಿಗೆ ಸಂಬಂಧಿಸಿದ ವಿಷಯಗಳ ಬಗ್ಗೆ ಕೇಳಿದ ಪ್ರಶ್ನೆಗೆ, ವಿದೇಶದಲ್ಲಿ ನಿಂತು ವೈಯುಕ್ತಿಕ ವಿಚಾರ ಎನ್ನುತ್ತಾರೆ” ಎಂದು ಆರೋಪಿಸಿದರು.

ದೇಶದಲ್ಲಿ ಪ್ರಶ್ನೆ ಕೇಳಿದರೆ, ಮೌನ ವಹಿಸುತ್ತಾರೆ. ಆದರೆ, ವಿದೇಶದಲ್ಲಿ ಕೇಳಿದರೆ, ವೈಯುಕ್ತಿಕ ವಿಚಾರ ಎಂದು ಹೇಳುವ ಮೂಲಕ ಅದಾನಿ ಅವರ ಭ್ರಷ್ಟಚಾರವನ್ನು ಮುಚ್ಚಿಹಾಕುತ್ತಿದ್ದಾರೆ ಎಂದರು.

ಅಮೇರಿಕಾದ ಶ್ವೇತಭವನದಲ್ಲಿ ಟ್ರಂಪ್‌ ಅವರನ್ನು ಭೇಟಿಯಾಗಿ ಹಲವು ವಿಚಾರಗಳ ಬಗ್ಗೆ ಮಾತುಕತೆ ನಡೆಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಕಾಡಾನೆ ದಾಳಿಗೆ 75 ತೆಂಗಿನ ಮರ ನಾಶ: ಬೆಳೆ ಪರಿಹಾರಕ್ಕೆ ರೈತ ಕುಟುಂಬದ ಮನವಿ

ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪಾಳ್ಯ ಗ್ರಾಮದಲ್ಲಿ ಕಾಡಾನೆಗಳ ನಿರಂತರ ದಾಳಿಯಿಂದ ಕಷ್ಟಪಟ್ಟು ಬೆಳೆದಿದ್ದ ತೆಂಗಿನ ಮರ ಸಂಪೂರ್ಣ ನಾಶವಾಗಿರುವುದರಿಂದ…

4 hours ago

ಅ.29ರಿಂದ ನ.11ರವರೆಗೆ ಹಾಸನಾಂಬಾ ಜಾತ್ರಾ ಮಹೋತ್ಸವ

ಹಾಸನ: ಹಾಸನದ ಅಧಿದೇವತೆ ಹಾಸನಾಂಬ ದೇವಿಯ ಜಾತ್ರಾ ಮಹೋತ್ಸವಕ್ಕೆ ದಿನಾಂಕ ನಿಗದಿಯಾಗಿದೆ. ಈ ಕುರಿತು ಹಾಸನ ಜಿಲ್ಲಾಧಿಕಾರಿ ಕೆ.ಎಸ್.ಲತಾಕುಮಾರಿ ಮಾಹಿತಿ…

5 hours ago

ಕರ್ನಾಟಕಕ್ಕೆ ಮತ್ತೆ ಕಾವೇರಿ ಶಾಕ್ ನೀಡಿದ ಸುಪ್ರೀಂಕೋರ್ಟ್‌

ನವದೆಹಲಿ: ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಂದು ಹಿನ್ನಡೆಯಾಗಿದ್ದು, CWMA ನೀಡಿರುವ ಆದೇಶವನ್ನು ಪಾಲಿಸುವಂತೆ ಸುಪ್ರೀಂಕೋರ್ಟ್‌ ಸೂಚನೆ ನೀಡಿದೆ.…

6 hours ago

ಕೋಟೆ ಟಿಎಪಿಸಿಎಂಎಸ್: ನಾಳೆ ಮೈತ್ರಿ ಪಕ್ಷದ 8 ಸದಸ್ಯರ ರಾಜೀನಾಮೆ ಭವಿಷ್ಯ ನಿರ್ಧಾರ

ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕು ಟಿಎಪಿಸಿಎಂಎಸ್‌ನ ಎಂಟು ಜನ ನಿರ್ದೇಶಕರು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿ ಅಂಗೀಕಾರ ಮಾಡಲು ಮತ್ತು…

6 hours ago

ಓದುಗರ ಪತ್ರ: ಸಿಗಲಿ ನ್ಯಾಯ!

ಸಿಗಲಿ ನ್ಯಾಯ! ಮರುಜೀವ ಬಂದಿದೆ ಹೊಸಬೆಳಕು ಮೂಡಿದೆ ಸುಪ್ರೀಂಕೋರ್ಟಿನ ಸೌಜನ್ಯಾ ಪ್ರಕರಣದ ಮರುತನಿಖೆಯ ಆದೇಶ! ಸಲಾಂ ಸುಪ್ರೀಂಗೆ! ನಡೆಯಲಿ ತನಿಖೆ…

12 hours ago

ಓದುಗರ ಪತ್ರ: ಸರ್ಕಾರಿ ಶಾಲಾ, ಕಾಲೇಜುಗಳೆಂದರೆ ತಾತ್ಸಾರವೇಕೆ?

ಇತ್ತೀಚೆಗೆ ಮೈಸೂರಿನ ಪ್ರತಿಷ್ಠಿತ ಖಾಸಗಿ ಶಿಕ್ಷಣ ಸಂಸ್ಥೆಯೊಂದರಲ್ಲಿ ನಡೆದ ಅಂತರ ಕಾಲೇಜು ಸಾಂಸ್ಕೃತಿಕ ಸ್ಪರ್ಧೆಯಲ್ಲಿ ಭಾಗವಹಿಸಿದ್ದೆ. ನಗರದ ಸರ್ಕಾರಿ ಹಾಗೂ…

12 hours ago