ವಾಷಿಂಗ್ಟನ್: ಅಮೇರಿಕಾದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಕೊನೆಗೂ ನೊಬೆಲ್ ಶಾಂತಿ ಪ್ರಶಸ್ತಿ ಸಿಕ್ಕಿದೆ. 2025ನೇ ಸಾಲಿನ ನೊಬೆಲ್ ಶಾಂತಿ ಪ್ರಶಸ್ತಿ ವಿಜೇತೆ ವೆನಿಜುವೆಲಾದ ವಿರೋಧ ಪಕ್ಷದ ಮಾರಿಯಾ ಕೊರಿನಾ ಮಚಾದೋ ಅವರು ತನಗೆ ಸಿಕ್ಕಿದ್ದ ಪ್ರಶಸ್ತಿಯನ್ನು ಟ್ರಂಪ್‌ಗೆ ನೀಡಿದ್ದಾರೆ.
ಶ್ವೇತಭವನದದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾರಿಯಾ ಕೊರಿನಾ ಮಚಾದೊ ಅವರು ತಮ್ಮ ನೊಬೆಲ್ ಶಾಂತಿ ಪ್ರಶಸ್ತಿಯನ್ನು ಟ್ರಂಪ್ ಅವರಿಗೆ ಹಸ್ತಾಂತರ ಮಾಡಿದರು.
ನೊಬೆಲ್ ಚಿನ್ನದ ಪದಕವು ಈಗ ಟ್ರಂಪ್ ಅವರ ಬಳಿಯೇ ಉಳಿದಿದೆ ಎಂದು ಶ್ವೇತಭವನದ ಅಧಿಕಾರಿಯೊಬ್ಬರು ದೃಢಪಡಿಸಿದ್ದಾರೆ. ಕಾರ್ಯಕ್ರಮದ ಬಳಿಕ ಮಚಾದೊ ಚಿನ್ನದ ಪದಕವನ್ನು ಬಿಟ್ಟು ಹೋಗಿರುವುದಾಗಿ ವರದಿಗಾರರಿಗೆ ತಿಳಿಸಿದ್ದಾರೆ.
ನಮ್ಮ ದೇಶದ ಸ್ವಾತಂತ್ರ್ಯಕ್ಕೆ ಅವರ ವಿಶಿಷ್ಟ ಬದ್ಧತೆಗೆ ಮನ್ನಣೆಯಾಗಿ ಅಮೇರಿಕಾದ ಅಧ್ಯಕ್ಷರಿಗೆ ನೊಬೆಲ್ ಶಾಂತಿ ಪ್ರಶಸ್ತಿಯ ಪದಕವನ್ನು ಪ್ರದಾನ ಮಾಡಿದ್ದೇನೆ ಎಂದು ಮಚಾದೊ ತಿಳಿಸಿದ್ದಾರೆ.





