ವಾಷಿಂಗ್ಟನ್: ಅಮೇರಿಕಾದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಕೊನೆಗೂ ನೊಬೆಲ್ ಶಾಂತಿ ಪ್ರಶಸ್ತಿ ಸಿಕ್ಕಿದೆ. 2025ನೇ ಸಾಲಿನ ನೊಬೆಲ್ ಶಾಂತಿ ಪ್ರಶಸ್ತಿ ವಿಜೇತೆ ವೆನಿಜುವೆಲಾದ ವಿರೋಧ ಪಕ್ಷದ ಮಾರಿಯಾ ಕೊರಿನಾ ಮಚಾದೋ ಅವರು ತನಗೆ ಸಿಕ್ಕಿದ್ದ ಪ್ರಶಸ್ತಿಯನ್ನು ಟ್ರಂಪ್‌ಗೆ ನೀಡಿದ್ದಾರೆ.
ಶ್ವೇತಭವನದದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾರಿಯಾ ಕೊರಿನಾ ಮಚಾದೊ ಅವರು ತಮ್ಮ ನೊಬೆಲ್ ಶಾಂತಿ ಪ್ರಶಸ್ತಿಯನ್ನು ಟ್ರಂಪ್ ಅವರಿಗೆ ಹಸ್ತಾಂತರ ಮಾಡಿದರು.
ನೊಬೆಲ್ ಚಿನ್ನದ ಪದಕವು ಈಗ ಟ್ರಂಪ್ ಅವರ ಬಳಿಯೇ ಉಳಿದಿದೆ ಎಂದು ಶ್ವೇತಭವನದ ಅಧಿಕಾರಿಯೊಬ್ಬರು ದೃಢಪಡಿಸಿದ್ದಾರೆ. ಕಾರ್ಯಕ್ರಮದ ಬಳಿಕ ಮಚಾದೊ ಚಿನ್ನದ ಪದಕವನ್ನು ಬಿಟ್ಟು ಹೋಗಿರುವುದಾಗಿ ವರದಿಗಾರರಿಗೆ ತಿಳಿಸಿದ್ದಾರೆ.
ನಮ್ಮ ದೇಶದ ಸ್ವಾತಂತ್ರ್ಯಕ್ಕೆ ಅವರ ವಿಶಿಷ್ಟ ಬದ್ಧತೆಗೆ ಮನ್ನಣೆಯಾಗಿ ಅಮೇರಿಕಾದ ಅಧ್ಯಕ್ಷರಿಗೆ ನೊಬೆಲ್ ಶಾಂತಿ ಪ್ರಶಸ್ತಿಯ ಪದಕವನ್ನು ಪ್ರದಾನ ಮಾಡಿದ್ದೇನೆ ಎಂದು ಮಚಾದೊ ತಿಳಿಸಿದ್ದಾರೆ.
ನಂಜನಗೂಡು: ಮೈಸೂರು ಜಿಲ್ಲೆ ನಂಜನಗೂಡು ತಾಲ್ಲೂಕಿನ ಶ್ರೀಕ್ಷೇತ್ರ ಸುತ್ತೂರಿನಲ್ಲಿ ನಡೆಯುತ್ತಿರುವ ಜಾತ್ರಾ ಮಹೋತ್ಸವ ಮೂರನೇ ದಿನಕ್ಕೆ ಕಾಲಿಟ್ಟಿದೆ. ಮೂರನೇ ದಿನವಾದ…
ಮಂಡ್ಯ: 11 ತಿಂಗಳ ಬಂಡೂರು ಕುರಿಯನ್ನು 1 ಲಕ್ಷದ 35 ಸಾವಿರ ರೂಪಾಯಿ ದಾಖಲೆ ಮೊತ್ತಕ್ಕೆ ಮಂಡ್ಯ ಜಿಲ್ಲೆ ಮಳವಳ್ಳಿ…
ಬೆಂಗಳೂರು: ಮಾಜಿ ಸಚಿವ ಕೆ.ಎನ್.ರಾಜಣ್ಣ ಮನೆಯಲ್ಲಿ ಔತಣಕೂಟದ ವೇಳೆ ನಾವು ರಾಜಕೀಯ ಚರ್ಚೆ ಮಾಡಿಲ್ಲ ಎಂದು ಗೃಹ ಸಚಿವ ಜಿ…
ಮೈಸೂರು: ಮಹಾರಾಷ್ಟ್ರದ ಮುಂಬೈ ಮಹಾನಗರಪಾಲಿಕೆ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಮಹಾಯುತಿಗೆ ಜಯ ದೊರೆತಿರುವ ಹಿನ್ನೆಲೆಯಲ್ಲಿ ಮೈಸೂರು ಮಾಜಿ ಮೇಯರ್ ಶಿವಕುಮಾರ್…
ಬೆಂಗಳೂರು: ಅಕ್ರಮವಾಗಿ ಅಳವಡಿಸಿದ್ದ ಬ್ಯಾನರ್ ತೆರವು ಮಾಡಿದ್ದಕ್ಕೆ ಕಾಂಗ್ರೆಸ್ ಮುಖಂಡ ರಾಜೀವ್ ಗೌಡ, ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆ ಅಮೃತಾಗೌಡ ಅವರನ್ನು…
ಬೆಂಗಳೂರು: ಹಿಂದೂ ಪರ ಕಾರ್ಯಕರ್ತ ಪುನೀತ್ ಕೆರೆಹಳ್ಳಿ ಅವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ನಿನ್ನೆ ರಾತ್ರಿ ಬನ್ನೇರುಘಟ್ಟ ಠಾಣೆಯ ಪೊಲೀಸರು…