ದೇಶ- ವಿದೇಶ

ಕೊನೆಗೂ ಡೊನಾಲ್ಡ್‌ ಟ್ರಂಪ್‌ಗೆ ಸಿಕ್ತು ನೊಬೆಲ್‌ ಶಾಂತಿ ಪ್ರಶಸ್ತಿ

ವಾಷಿಂಗ್ಟನ್:‌ ಅಮೇರಿಕಾದ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಅವರಿಗೆ ಕೊನೆಗೂ ನೊಬೆಲ್‌ ಶಾಂತಿ ಪ್ರಶಸ್ತಿ ಸಿಕ್ಕಿದೆ. 2025ನೇ ಸಾಲಿನ ನೊಬೆಲ್‌ ಶಾಂತಿ ಪ್ರಶಸ್ತಿ ವಿಜೇತೆ ವೆನಿಜುವೆಲಾದ ವಿರೋಧ ಪಕ್ಷದ ಮಾರಿಯಾ ಕೊರಿನಾ ಮಚಾದೋ ಅವರು ತನಗೆ ಸಿಕ್ಕಿದ್ದ ಪ್ರಶಸ್ತಿಯನ್ನು ಟ್ರಂಪ್‌ಗೆ ನೀಡಿದ್ದಾರೆ.

ಶ್ವೇತಭವನದದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾರಿಯಾ ಕೊರಿನಾ ಮಚಾದೊ ಅವರು ತಮ್ಮ ನೊಬೆಲ್‌ ಶಾಂತಿ ಪ್ರಶಸ್ತಿಯನ್ನು ಟ್ರಂಪ್‌ ಅವರಿಗೆ ಹಸ್ತಾಂತರ ಮಾಡಿದರು.

ನೊಬೆಲ್‌ ಚಿನ್ನದ ಪದಕವು ಈಗ ಟ್ರಂಪ್‌ ಅವರ ಬಳಿಯೇ ಉಳಿದಿದೆ ಎಂದು ಶ್ವೇತಭವನದ ಅಧಿಕಾರಿಯೊಬ್ಬರು ದೃಢಪಡಿಸಿದ್ದಾರೆ. ಕಾರ್ಯಕ್ರಮದ ಬಳಿಕ ಮಚಾದೊ ಚಿನ್ನದ ಪದಕವನ್ನು ಬಿಟ್ಟು ಹೋಗಿರುವುದಾಗಿ ವರದಿಗಾರರಿಗೆ ತಿಳಿಸಿದ್ದಾರೆ.

ನಮ್ಮ ದೇಶದ ಸ್ವಾತಂತ್ರ್ಯಕ್ಕೆ ಅವರ ವಿಶಿಷ್ಟ ಬದ್ಧತೆಗೆ ಮನ್ನಣೆಯಾಗಿ ಅಮೇರಿಕಾದ ಅಧ್ಯಕ್ಷರಿಗೆ ನೊಬೆಲ್‌ ಶಾಂತಿ ಪ್ರಶಸ್ತಿಯ ಪದಕವನ್ನು ಪ್ರದಾನ ಮಾಡಿದ್ದೇನೆ ಎಂದು ಮಚಾದೊ ತಿಳಿಸಿದ್ದಾರೆ.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಓದುಗರ ಪತ್ರ: ಕೊನೆಗೊಳ್ಳಲಿ ಸಂಘರ್ಷ!

ಕೊನೆಗೊಳ್ಳಲಿ ಸಂಘರ್ಷ! ಯುದ್ಧವನು ಕೊನೆಗಾಣಿಸಲು ರಾಜತಾಂತ್ರಿಕ ಮಾತುಕತೆಯೇ ಉತ್ತಮವೆಂಬ ಭಾರತದ ನಿಲುವಿಗೆ ಬ್ರಿಕ್ಸ್ ನಾಯಕರು ಒಕ್ಕೊರಲಿನಿಂದ ಒಪ್ಪಿರುವುದು ಸ್ವಾಗತಾರ್ಹ! ಇದಲ್ಲವೇ…

2 hours ago

ಓದುಗರ ಪತ್ರ: ಚುರುಕಾಗಲಿ 6ರ ಪ್ಲಾಟ್ ಫಾರಂ ಟಿಕೆಟ್ ಕೌಂಟರ್

ಮೈಸೂರಿನ ನೈಋತ್ಯ ರೈಲ್ವೆಗೆ ಸೇರಿರುವ ಅಶೋಕ ಪುರಂ ರೈಲು ನಿಲ್ದಾಣದಲ್ಲಿ ಪ್ಲಾಟ್ ಫಾರಂ ೬ರ ಕಡೆ ರೈಲು ಪ್ರಯಾಣಿಕರಿಗೆ ಅನುಕೂಲವಾಗಲೆಂದು…

2 hours ago

ಓದುಗರ ಪತ್ರ: ಲೆಕ್ಕ ಹಾಕಿಕೊಂಡು ಮುಷ್ಕರ ನಡೆಸುವ ಬ್ಯಾಂಕ್ ಯೂನಿಯನ್‌ಗಳ ವಿರುದ್ಧ ಕ್ರಮ ಕೈಗೊಳ್ಳಲಿ

ಸರ್ಕಾರಿ ಸ್ವಾಮ್ಯದ ಬ್ಯಾಂಕ್ ನೌಕರರು ಕಳೆದ ಶುಕ್ರವಾರ ತಮ್ಮ ಬಹುದಿನಗಳ ಬೇಡಿಕೆಯಾದ ವಾರಕ್ಕೆ ಐದು ದಿನಗಳ ಕಾಲ ಮಾತ್ರ ಕೆಲಸ…

2 hours ago

ಬಾಗಿಲುಗಳನ್ನು ತೆರೆದಿಡಿ, ಸಂವಹನವನ್ನು ಪಾರದರ್ಶಕವಾಗಿಡಿ

ಎಸ್.ಎಲ್.ಚನ್ನಬಸವಣ್ಣ , ಉಪನಿರ್ದೇಶಕರು, ಕರ್ನಾಟಕ ಪೊಲೀಸ್ ಅಕಾಡೆಮಿ, ಮೈಸೂರು ಸಾರ್ವಜನಿಕ ಸಂಸ್ಥೆಗಳಿಗೆ ಅತ್ಯಂತ ಮುಖ್ಯವಾದ ಪಾಠ  ಯಾವುದೇ ನಾಗರಿಕನು ತನ್ನ…

2 hours ago

ಗಾಲಿಕುರ್ಚಿಯಲ್ಲಿ ಕುಳಿತೇ ಯಶಸ್ವೀ ಲೇಖಕಿಯಾದ ಹಿಮಾಂಶಿಕಾ

ಪಂಜುಗಂಗೊಳ್ಳಿ ಅವರ ವಾರದ ಅಂಕಣ  ದೈಹಿಕ ನ್ಯೂನತೆ ನಡುವೆ ಆರ್ಥಿಕ ಪ್ರಗತಿಯ ಮೆಟ್ಟಿಲೇರಿದ ಮಹಿಳೆ ಹರ‍್ಯಾಣದ ಅಂಬಾಲಾದ ಹಿಮಾಂಶಿಕಾ ಶರ್ಮಾರಿಗೆ…

2 hours ago

ಇ-ಕೆವೈಸಿಗೆ ಮುಗಿಬಿದ್ದ ಫಲಾನುಭವಿಗಳು

ಕೆ.ಬಿ.ರಮೇಶನಾಯಕ ರಾಜ್ಯ ಸರ್ಕಾರದ ಗಡುವಿನೊಳಗೆ ಪ್ರಕ್ರಿಯೆ ಮುಗಿಸಲು ಇಲಾಖೆ ಕಸರತ್ತು.  ಮೈಸೂರು: ನಕಲಿ ಫಲಾನುಭವಿಗಳನ್ನು ಕೈಬಿಟ್ಟು ಪಾರದರ್ಶಕತೆ ಕಾಯ್ದುಕೊಳ್ಳಲು ಹಾಗೂ…

2 hours ago