ದೇಶ- ವಿದೇಶ

ಕೇಂದ್ರದಿಂದ ರಾಜ್ಯಕ್ಕಾಗಿರುವ ಅನ್ಯಾಯ ಒಪ್ಪಿದ ವಿತ್ತ ಸಚಿವೆಗೆ ಧನ್ಯವಾದ: ಡಿಸಿಎಂ

ಬೆಂಗಳೂರು: ಬರ ಪರಿಹಾರ ವಿಚಾರದಲ್ಲಿ ಇಷ್ಟು ದಿನ ರಾಜ್ಯ ಸರ್ಕಾರದ ಮೇಲೆ ಆರೋಪ ಮಾಡುತ್ತಿದ್ದ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಈಗ ರಾಜ್ಯಕ್ಕೆ ಆಗಿರುವ ಅನ್ಯಾಯ ಒಪ್ಪಿಕೊಂಡಿದ್ದಾರೆ, ಅವರಿಗೆ ಧನ್ಯವಾದಗಳು ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ತಿಳಿಸಿದರು.

ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಅಪಾರ್ಟ್‌ ಮೆಂಟ್ ನಿವಾಸಿಗಳ ಭೇಟಿ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿ, ಬರ ಪರಿಹಾರ ವಿಳಂಬಕ್ಕೆ ಚುನಾವಣಾ ಆಯೋಗ ಕಾರಣ ಎಂಬ ವಿತ್ತ ಸಚಿವೆಯ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿ, ಬರ ಪರಿಹಾರಕ್ಕೂ ಚುನಾವಣೆಗೂ ಏನು ಸಂಬಂಧ? ಈ ಹೇಳಿಕೆ ಮೂಲಕ ರಾಜ್ಯಕ್ಕೆ ಬರ ಪರಿಹಾರ ಬರುವುದು ವಿಳಂಬವಾಗಿದ್ದು, ರಾಜ್ಯಕ್ಕೆ ಅನ್ಯಾಯ ಆಗಿದೆ ಎಂದು ಒಪ್ಪಿಕೊಂಡಿದ್ದಾರೆ. ಇಷ್ಟು ದಿನಗಳ ಕಾಲ ರಾಜ್ಯ ಸರ್ಕಾರದ ಮೇಲೆ ಆರೋಪ ಮಾಡುತ್ತಿದ್ದರು ಕಿಡಿಕಾರಿದ್ದಾರೆ.

ರಾಜ್ಯ ಸರ್ಕಾರ ಬರ ಪರಿಹಾರ ಮನವಿ ಕೊಟ್ಟ ಬಳಿಕ ನಾಲ್ಕು ತಿಂಗಳವರೆಗೂ ಯಾವುದೇ ಚುನಾವಣೆ ನೀತಿ ಸಂಹಿತೆ ಹಾಗೂ ಚುನಾವಣಾ ಆಯೋಗದ ನಿರ್ಬಂಧ ಇರಲಿಲ್ಲ. ಈಗ ಚುನಾವಣಾ ಆಯೋಗದ ನೆಪ ಹೇಳುತ್ತಿದ್ದಾರೆ ಎಂದು ಲೇವಡಿ ಮಾಡಿದರು.

ಕೇಂದ್ರ ಸರ್ಕಾರದ ಅಕ್ಷಮ್ಯ ಅಪರಾಧದ ಬಗ್ಗೆ ಜನರಿಗೂ ಅರಿವಾಗಿದೆ. ಈ ಮೂಲಕ ಡಿ.ಕೆ ಸುರೇಶ್‌ ಅವರ ನಮ್ಮ ತೆರಿಗೆ ನಮ್ಮ ಹಕ್ಕು ನಮ್ಮ ಪಾಲಿನ ಹೋರಾಟ ಒಪ್ಪಿಕೊಂಡಿದ್ದಾರೆ. ಅವರಿಗೆ ಧನ್ಯವಾದಗಳು ಎಂದರು.

ಮೇಕುದಾಟು ಯೋಜನೆ ವಿಚಾರವಾಗಿ ಇಲ್ಲಿನ ಜನರ ಕಷ್ಟಕ್ಕೆ ಪರಿಹಾರ ನೀಡಿ ಧೈರ್ಯ ತುಂಬುವವರು ನಾವು. ಬೇರೆ ಅಭ್ಯರ್ಥಿಗಳು ನಮ್ಮಂತೆ ಜನರಿಗೆ ಅಭಯ ನೀಡುವುದಿಲ್ಲ. ಎಚ್‌.ಡಿ ಕುಮಾರಸ್ವಾಮಿ ಅವರಿಗೆ ಈಗ ಮೇಕೆದಾಟು, ಮಹದಾಯಿ ಯೋಜನೆ ನೆನಪಾಗಿದೆ. ನಾನು ಮೇಕೆದಾಟು ಪಾದಯಾತ್ರೆ ಮಾಡುವ ಸಮಯದಲ್ಲಿ, ಕಬಾಬ್‌ ತಿನ್ನೋಕೆ ಪಾದಯಾತ್ರೆ ಮಾಡುತ್ತಿದ್ದಾರೆ ಎಂದಿದ್ದ ಕುಮಾರಸ್ವಾಮಿ ಈಗ ಪಾದಯಾತ್ರೆ ಬಗ್ಗೆ ಮಾತಾನಾಡುತ್ತಿದ್ದಾರೆ. ಮಂಡ್ಯಕ್ಕೆ ಬಂದ ನಂತರ ಅವರಿಗೆ ಬಿಸಿ ತಟ್ಟಿರುವಂತೆ ಕಾಣುತ್ತಿದೆ ಎಂದು ವ್ಯಂಗ್ಯವಾಡಿದರು.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಎಐ ಮನುಷ್ಯನನ್ನು ಆಳಲಾಗದು!

ಮೊನ್ನೆ ತುಮಕೂರು ರಸ್ತೆ ಹಿಡಿದು ಬೆಂಗಳೂರಿನ ಕಡೆ ಬರುತ್ತಿರುವಾಗ, ರಸ್ತೆಯ ಬಲಭಾಗದಲ್ಲಿ ದೊಡ್ಡ ಕಲ್ಲು ಬೆಟ್ಟ ಕಾಣಿಸಿತು. ಕುಂಬಳಕಾಯಿಯನ್ನು ಚಾಕುವಿನಿಂದ…

48 seconds ago

ಭಯಗೊಳಿಸುವ ಸಿನೆಮಾ ಕಥೆ ನಿಜವಾಗುವ ಸಾಧ್ಯತೆ!

ಐಟಿ, ಆರೋಗ್ಯ, ಆಡಳಿತ ಹೀಗೆ ಎಲ್ಲೆಲ್ಲಿ ಎಐ ಬಳಕೆ ಸಾಧ್ಯವೋ ಅಲ್ಲೆಲ್ಲಾ ಪ್ರಾಥಮಿಕ ಹಂತದ ಉದ್ಯೋಗ ಗಳು ಕಡಿತವಾಗಲಿವೆ. ಎಐ…

4 mins ago

‘ಎಐ’ ಅತಿ ಬಳಕೆಯ ವ್ಯಸನದ ಬಗ್ಗೆ ಎಚ್ಚರದಿಂದಿರಿ

‘ಕೃತಕ ಬುದ್ಧಿವಂತಿಕೆ’ಯನ್ನು ನಮ್ಮ ಸಹಾಯಕನಾಗಿ ಬಳಸಿಕೊಳ್ಳಬೇಕೇ ಹೊರತು, ಅದರ ಮೇಲೆ ಅವಲಂಬಿತರಾಗಬಾರದು; ಇಂದು ಶಾಲೆ, ಕಾಲೇಜಿನ ಪ್ರಾಧ್ಯಾಪಕರಿಂದ ‘ಎಲ್ಲರ ಅಸೈನ್‌ಮೆಂಟೂ…

8 mins ago

ಡೂಮರ್ಸ್ ಮತ್ತು ಬೂಮರ್ಸ್

ನಾನು ಎ.ಐ. ಅಥವಾ ಕೃತಕ  ಬುದ್ಧಿಮತ್ತೆಯ ರಂಗಕ್ಕೆ ಪ್ರಪ್ರಥಮವಾಗಿ ಇಳಿದದ್ದು ಸುಮಾರು ೩೫ ವರ್ಷಗಳ ಹಿಂದೆ, ನ್ಯೂಯಾರ್ಕಿನಲ್ಲಿ ಸ್ನಾತಕೋತ್ತರ ವಿದ್ಯಾರ್ಥಿಯಾಗಿದ್ದಾಗ.…

11 mins ago

ಮನುಷ್ಯನ ಬೆನ್ನೇರಿರುವ ಎಐ ಬೇತಾಳ

ಮಾನವ ದುಡಿಮೆಯನ್ನು ಕಡಿಮೆಗೊಳಿಸಿರುವ ಎಐಯನ್ನು ಸಂಪೂರ್ಣವಾಗಿ ಹೀಗಳೆಯುವಂತೆಯೂ ಇಲ್ಲ. ಮನುಷ್ಯ ನಿರ್ಮಿತ ಈ ಕೃತಕ ಬುದ್ಧಿಯ ಬೇತಾಳ ನಮ್ಮದೇ ಕೂಸು!…

15 mins ago

ವಂದೇ ಮಾತರಂ: ದೇಶಪ್ರೇಮ-ಬಹುತ್ವದ ಭಿನ್ನ ವ್ಯಾಖ್ಯಾನ

೧೮೭೫ರಲ್ಲಿ ಬಂಕಿಮಚಂದ್ರ ಚಟ್ಟೋಪಾಧ್ಯಾಯ ರಚಿಸಿದ ‘ವಂದೇ ಮಾತರಂ’ ಸ್ವಾತಂತ್ರ್ಯ ಚಳವಳಿಯ ಭಾಗವಾಗಿತ್ತು. ಧಾರ್ಮಿಕ ಆಕ್ಷೇಪಣೆಗಳಿಂದಾಗಿ ೧೯೩೭ರಲ್ಲಿ ಕಾಂಗ್ರೆಸ್ ಮೊದಲ ಎರಡು…

21 mins ago