ಮುಂಬೈ: ಮುಂಬೈ ಮೂಲದ ಉದ್ಯಮಿಯೊಬ್ಬರಿಗೆ 60 ಕೋಟಿ ರೂಗೂ ಹೆಚ್ಚು ವಂಚನೆ ಮಾಡಿದ ಆರೋಪದ ಮೇಲೆ ನಟಿ ಶಿಲ್ಪಾ ಶೆಟ್ಟಿ ಹಾಗೂ ಪತಿ ರಾಜ್ ಕುಂದ್ರಾ ಹಾಗೂ ಇನ್ನೊಬ್ಬ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲಾಗಿದೆ.
ಈ ವಂಚನೆಯು ದಂಪತಿಗಳು ಕಾರ್ಯನಿರ್ವಹಿಸಿದ ಸಂಸ್ಥೆಯಾದ ಬೆಸ್ಟ್ ಡೀಲ್ ಟಿವಿ ಪ್ರೈವೇಟ್ ಲಿಮಿಟೆಡ್‌ಗೆ ಸಂಬಂಧಿಸಿದ ಒಪ್ಪಂದಕ್ಕೆ ಸಂಬಂಧ ಪಟ್ಟಿದೆ.
ಶಿಲ್ಪಾ ಶೆಟ್ಟಿ ಹಾಗೂ ರಾಜ್ ಕುಂದ್ರಾ ದಂಪತಿಗಳು 2015 ರಿಂದ 2023ರ ನಡುವೆ 60 ಕೋಟಿ ರೂ ವಂಚನೆಗೆ ಸಂಚು ರೂಪಿಸಿದ್ದಾರೆ ಎಂದು ಆರೋಪಿಸಲಾಗಿದೆ.
ಈ ಸಂಬಂಧ ಉದ್ಯಮಿ ದೀಪಕ್ ಕೊಠಾರಿ ಅವರು ಶಿಲ್ಪಾ ಶೆಟ್ಟಿ ಹಾಗೂ ರಾಜ್ ಕುಂದ್ರಾ ವಿರುದ್ಧ ಪ್ರಕರಣ ದಾಖಲು ಮಾಡಿದ್ದಾರೆ. ದೂರುದಾರ ದೀಪಕ್ ಕೊಠಾರಿ, ದಂಪತಿಗಳು ತಮಗೆ 60 ಕೋಟಿ ರೂಗಳಿಗೂ ಹೆಚ್ಚು ವಂಚನೆ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.
ಪ್ರಕರಣದ ಮೊತ್ತ 10 ಕೋಟಿ ರೂಗಳನ್ನು ಮೀರಿದ್ದರಿಂದ ಪ್ರಕರಣವನ್ನು ಹೆಚ್ಚಿನ ತನಿಖೆಗಾಗಿ ಆರ್ಥಿಕ ಅಪರಾಧಗಳ ವಿಭಾಗಕ್ಕೆ ಹಸ್ತಾಂತರಿಸಲಾಗಿದೆ.





