ಪ್ರಯಾಗ್‌ರಾಜ್: ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಮಹಾಕುಂಭಮೇಳದಲ್ಲಿ ಅಗ್ನಿ ದುರಂತ ಸಂಭವಿಸಿದ್ದು, ಎರಡು ಕಾರು ಸೇರಿದಂತೆ 18 ಕ್ಯಾಂಪ್‌ಗಳು ಸುಟ್ಟು ಕರಕಲಾಗಿವೆ.
ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ಗಂಗಾ, ಯಮುನಾ ಹಾಗೂ ಸರಸ್ವತಿ ನದಿಯ ಸಂಗಮದಲ್ಲಿ ನಡೆಯುತ್ತಿರುವ ಮಹಾಕುಂಭಮೇಳದಲ್ಲಿ ಈ ಅಗ್ನಿ ಅವಘಡ ಸಂಭವಿಸಿದೆ.
ಅಗ್ನಿ ಅವಘಡ ಸಂಭವಿಸುತ್ತಿದ್ದಂತೆ ಕಾರ್ಯ ಪ್ರವೃತ್ತರಾದ ಅಗ್ನಿಶಾಮಕ ಸಿಬ್ಬಂದಿ ಕಾರಿನೊಳಗೆ ಇದ್ದವರನ್ನು ಹೊರ ಕರೆತಂದು ಹೆಚ್ಚಿನ ಅನಾಹುತ ಆಗುವುದನ್ನು ತಪ್ಪಿಸಿದ್ದಾರೆ.
ಗುಡಿಸಲೊಂದರ ಮೇಲ್ಛಾವಣಿಗೆ ಹಾಕಿದ್ದ ಹುಲ್ಲಿಗೆ ಬೆಂಕಿ ತಗುಲಿದ ಪರಿಣಾಮ ಸೆಕ್ಟರ್ 19ರಲ್ಲಿ 18 ಗುಡಿಸಲುಗಳು ಸುಟ್ಟು ಭಸ್ಮವಾಗಿವೆ.
ಘಟನೆಯಲ್ಲಿ ಯಾವುದೇ ಸಾವು, ನೋವು ಸಂಭವಿಸಿಲ್ಲ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.