ಪ್ರಯಾಗ್‌ರಾಜ್: ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಮಹಾಕುಂಭಮೇಳದಲ್ಲಿ ಅಗ್ನಿ ದುರಂತ ಸಂಭವಿಸಿದ್ದು, ಎರಡು ಕಾರು ಸೇರಿದಂತೆ 18 ಕ್ಯಾಂಪ್‌ಗಳು ಸುಟ್ಟು ಕರಕಲಾಗಿವೆ.
ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ಗಂಗಾ, ಯಮುನಾ ಹಾಗೂ ಸರಸ್ವತಿ ನದಿಯ ಸಂಗಮದಲ್ಲಿ ನಡೆಯುತ್ತಿರುವ ಮಹಾಕುಂಭಮೇಳದಲ್ಲಿ ಈ ಅಗ್ನಿ ಅವಘಡ ಸಂಭವಿಸಿದೆ.
ಅಗ್ನಿ ಅವಘಡ ಸಂಭವಿಸುತ್ತಿದ್ದಂತೆ ಕಾರ್ಯ ಪ್ರವೃತ್ತರಾದ ಅಗ್ನಿಶಾಮಕ ಸಿಬ್ಬಂದಿ ಕಾರಿನೊಳಗೆ ಇದ್ದವರನ್ನು ಹೊರ ಕರೆತಂದು ಹೆಚ್ಚಿನ ಅನಾಹುತ ಆಗುವುದನ್ನು ತಪ್ಪಿಸಿದ್ದಾರೆ.
ಗುಡಿಸಲೊಂದರ ಮೇಲ್ಛಾವಣಿಗೆ ಹಾಕಿದ್ದ ಹುಲ್ಲಿಗೆ ಬೆಂಕಿ ತಗುಲಿದ ಪರಿಣಾಮ ಸೆಕ್ಟರ್ 19ರಲ್ಲಿ 18 ಗುಡಿಸಲುಗಳು ಸುಟ್ಟು ಭಸ್ಮವಾಗಿವೆ.
ಘಟನೆಯಲ್ಲಿ ಯಾವುದೇ ಸಾವು, ನೋವು ಸಂಭವಿಸಿಲ್ಲ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಬೆಂಗಳೂರು: ಸರ್ವಜ್ಞ ನಗರದಲ್ಲಿ ನಿರ್ಮಾಣಗೊಳ್ಳುತ್ತಿರುವ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ಕಾಮಗಾರಿಯನ್ನು ಕ್ಷೇತ್ರದ ಶಾಸಕರಾದ ಇಂಧನ ಸಚಿವ ಕೆ.ಜೆ.ಜಾರ್ಜ್ ಅವರು ಪರಿಶೀಲನೆ ನಡೆಸಿದರು.…
ಬೆಂಗಳೂರು: ರಾಜ್ಯದಲ್ಲಿ ಹೊಸದಾಗಿ ಸ್ಥಾಪನೆಯಾಗಿರುವ 7 ವಿಶ್ವವಿದ್ಯಾಲಯಗಳನ್ನು ಮುಚ್ಚುವುದಾಗಿ ನಾವು ಎಲ್ಲಿಯೂ ಹೇಳಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾಸಭೆಯಲ್ಲಿ…
ಬೆಂಗಳೂರು: ವೈದ್ಯಕೀಯ ಶಿಕ್ಷಣ ಮತ್ತು ತರಬೇತಿ ಪಡೆದು ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳಲ್ಲಿ ಕರ್ತವ್ಯ ನಿರ್ವಹಿಸಿತ್ತಿರುವ ತಜ್ಞ ವೈದ್ಯರ ನಿವೃತ್ತಿ ವಯಸ್ಸನ್ನು…
ಬೆಂಗಳೂರು: ಕುದುರೆಮುಖ ಕಬ್ಬಿಣದ ಅದಿರು ಕಂಪನಿ ಲಿಮಿಟೆಡ್ (ಕೆ.ಐ.ಎ.ಸಿ.ಎಲ್) ನಿಬಂಧನೆಗಳನ್ನು ಸಂಪೂರ್ಣವಾಗಿ ಅನುಪಾಲನೆ ಮಾಡಿದಲ್ಲಿ ಸಂಡೂರು, ದೇವದರಿಯಲ್ಲಿ ಗಣಿಗಾರಿಕೆಗೆ ಅನುಮತಿ…
ಪುನೀತ್ ರಾಜಕುಮಾರ್‌ಗೆ 50ನೇ ವರ್ಷದ ಹುಟ್ಟು ಹಬ್ಬ ಹಿನ್ನಲೆ, ಪವರ್‌ಸ್ಟಾರ್ ಎಂಬ ಬಿರುದು ನೀಡಿದ ಮೊದಲ ಸಿನಿಮಾ ʼಅಪ್ಪುʼ ರೀ-ರೀಲಿಸ್…
ಬೆಂಗಳೂರು: ಅಂಗನವಾಡಿ ಕಾರ್ಯಕರ್ತೆಯರ ಬಗ್ಗೆ ಕಾಳಜಿ ಇದ್ದು, ಚುನಾವಣಾ ಪ್ರಣಾಳಿಕೆಯಲ್ಲಿ ಕೊಟ್ಟ ಮಾತಿನಂತೆ ಗೌರವ ಧನ ಹೆಚ್ಚಿಸುವ ಮೂಲಕ ನಮ್ಮ…