ದೇಶ- ವಿದೇಶ

ಕೆಮಿಕಲ್‌ ಫ್ಯಾಕ್ಟರಿಯಲ್ಲಿ ಬೆಂಕಿ : 7 ಕಾರ್ಮಿಕರು ಸಜೀವ ದಹನ, ಹಲವರು ಸಿಲುಕಿರುವ ಶಂಕೆ

ಜೈಪುರ : ಕೆಮಿಕಲ್ ಫ್ಯಾಕ್ಟರಿಯೊಂದರಲ್ಲಿ ಸಂಭವಿಸಿದ ಭಾರೀ ಬೆಂಕಿ ಅವಘಡದಿಂದಾಗಿ 7 ಕಾರ್ಮಿಕರು ಸಜೀವ ದಹನಗೊಂಡಿದ್ದು, ಇನ್ನೂ ಹಲವರು ಸಿಲುಕಿರುವ ಶಂಕೆ ವ್ಯಕ್ತವಾಗಿದೆ.

ಜೈಪುರದ ಭಿವಾಡಿಯಲ್ಲಿರುವ ಫ್ಯಾಕ್ಟರಿಯಲ್ಲಿ ಸೋಮವಾರ ಬೆಳಿಗ್ಗೆ 9:30ರ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದ್ದು, ಈ ವೇಳೆ ಕಾರ್ಖಾನೆಯಲ್ಲಿ 20ರಿಂದ 25 ಜನ ಕಾರ್ಮಿಕರಿದ್ದರು. ಏಕಾಏಕಿ ಹೊತ್ತಿಕೊಂಡ ಬೆಂಕಿ ಕೆಲವೇ ನಿಮಿಷಗಳಲ್ಲಿ ಕಾರ್ಖಾನೆಯ ತುಂಬೆಲ್ಲಾ ಆವರಿಸಿಕೊಂಡಿದ್ದು, ಕೆಲವು ಕಾರ್ಮಿಕರು ಹೊರಗೆ ಓಡಿಬಂದು ಪ್ರಾಣವನ್ನು ಉಳಿಸಿಕೊಂಡಿದ್ದಾರೆ ಎಂದು ವರದಿಯಾಗಿದೆ.

ಈ ಪ್ರದೇಶದಲ್ಲಿ ಪೊಲೀಸರು ದಿನನಿತ್ಯ ಗಸ್ತು ತಿರುಗುತ್ತಾರೆ. ಅದರಂತೆ ಇಂದು ಗಸ್ತು ತಿರುಗುವಾಗ ಘಟನೆ ಬೆಳಕಿಗೆ ಬಂದಿದೆ. ಕೂಡಲೇ ಸ್ಥಳಕ್ಕೆ ಪೊಲೀಸರು, ಅಗ್ನಿಶಾಮಕ ಸಿಬ್ಬಂದಿ ಹಾಗೂ ವೈದ್ಯಕೀಯ ತಂಡ ದೌಡಾಯಿಸಿವೆ. ಸುಮಾರು ಒಂದೂವರೆ ಗಂಟೆಗಳ ನಿರಂತರ ಕಾರ್ಯಾಚರಣೆ ಬಳಿಕ ಅಗ್ನಿಶಾಮಕ ಸಿಬ್ಬಂದಿ ಬೆಂಕಿಯನ್ನು ನಿಯಂತ್ರಣಕ್ಕೆ ತರುವಲ್ಲಿ ಯಶಸ್ವಿಯಾಗಿದ್ದೇವೆ ಎಂದು ಜಿಲ್ಲಾಧಿಕಾರ ಸುಮಿತಾ ಮಿಶ್ರಾ ಮಾಹಿತಿ ನೀಡಿದ್ದಾರೆ.

ಘಟನೆಗೆ ಸಂಬಂಧಿಸಿದಂತೆ ಈವರೆಗೂ ಬೆಂಕಿ ಹೊತ್ತಿಕೊಳ್ಳಲು ನಿಖರ ಕಾರಣ ತಿಳಿದುಬಂದಿಲ್ಲ. ಸದ್ಯ ತಿಜಾರಾ ಉಪ ಪೊಲೀಸ್ ವರಿಷ್ಠಾಧಿಕಾರಿ ಶಿವರಾಜ್ ಸಿಂಗ್ ಅವರು ಘಟನಾ ಸ್ಥಳದಲ್ಲಿ ಪ್ರಾಥಮಿಕ ತನಿಖೆ ನಡೆಸುತ್ತಿದ್ದಾರೆ. ಪೊಲೀಸ್ ವರಿಷ್ಠಾಧಿಕಾರಿ ಮತ್ತು ಎಡಿಎಂ ಸೇರಿದಂತೆ ಹಿರಿಯ ಜಿಲ್ಲಾ ಅಧಿಕಾರಿಗಳು ಪರಿಸ್ಥಿತಿಯ ವಿವರವಾದ ಪರಿಶೀಲನೆ ನಡೆಸುತ್ತಿದ್ದಾರೆ. ಬೆಂಕಿಗೆ ನಿಖರ ಕಾರಣ ತಿಳಿಯಲು ಜಿಲ್ಲಾಡಳಿತವು ಮ್ಯಾಜಿಸ್ಟೀರಿಯಲ್ ತನಿಖೆಗೆ ಆದೇಶಿಸಿದೆ.

ಪ್ರಧಾನಿ ನರೇಂದ್ರ ಮೋದಿ ಅವರು ಸಂತಾಸ ಸೂಚಿಸಿದ್ದು. ರಾಜಸ್ಥಾನದ ಭಿವಾಡಿಯಲ್ಲಿ ಸಂಭವಿಸಿದ ಅಗ್ನಿ ಅವಘಡವೊಂದು ದುರಂತ. ಘಟನೆಯಿಂದ ತೀವ್ರ ದುಃಖಿತನಾಗಿದ್ದೇನೆ. ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ನಾನು ಪ್ರಾರ್ಥಿಸುತ್ತೇನೆ ಎಂದು ತಮ್ಮ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷರಾಗಿ ನಿವೃತ್ತ ನ್ಯಾ.ಪಿ.ಎನ್.ದೇಸಾಯಿ ನೇಮಕ

ಬೆಂಗಳೂರು : ಮುಖ್ಯಮಂತ್ರಿ ಸ್ಥಾನದಿಂದ ನಿರ್ಗಮಿಸುವ ಮೊದಲು ಸಿದ್ದರಾಮಯ್ಯ ಅವರು ನಿವೃತ್ತ ನ್ಯಾಯಮೂರ್ತಿ ಪಿ.ಎನ್.ದೇಸಾಯಿ ಅವರನ್ನು ಕರ್ನಾಟಕ ರಾಜ್ಯ ಮಾನವ…

3 hours ago

ಕಾಂಗ್ರೆಸ್‌ ಶಾಸಕಾಂಗ ಪಕ್ಷದ ನಾಯಕರಾಗಿ ಡಿ.ಕೆ.ಶಿವಕುಮಾರ್‌ ಆಯ್ಕೆ

ಬೆಂಗಳೂರು : ಕಾಂಗ್ರೆಸ್‌ ಶಾಸಕಾಂಗ ಪಕ್ಷದ ನಾಯಕನಾಗಿ ಡಿ.ಕೆ.ಶಿವಕುಮಾರ್‌ ಆಯ್ಕೆ ಆಗಿದ್ದಾರೆ. ಡಿಕೆಶಿ ಅವರ ಹೆಸರನ್ನು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ…

5 hours ago

ಅಂತೂ ಇಂತು ಕುಂತಿ ಮಕ್ಕಳಿಗೆ ರಾಜ್ಯವಿಲ್ಲ ಎಂಬಂತಾಗಿದೆ ದಲಿತರ ಸ್ಥಿತಿ : ಮಾಜಿ ಸಚಿವ ಎನ್.ಮಹೇಶ್‌

ಕೊಳ್ಳೇಗಾಲ : ಅಂತೂ ಇಂತು ಕುಂತಿ ಮಕ್ಕಳಿಗೆ ರಾಜ್ಯವಿಲ್ಲ ಎಂಬಂತಾಗಿದೆ ದಲಿತರ ಸ್ಥಿತಿ ಎಂದು ಮಾಜಿ ಸಚಿವ ಎನ್‌.ಮಹೇಶ್‌ ಮಾರ್ಮಿಕವಾಗಿ…

5 hours ago

ಲೋಕಭವನದ ಗ್ಲಾಸ್‌ಹೌಸ್‌ನಲ್ಲೇ ಡಿಕೆಶಿ ಪ್ರಮಾಣವಚನ ಸ್ವೀಕಾರ ; ಸಾರ್ವಜನಿಕರಿಗಿಲ್ಲ ಪ್ರವೇಶ

ಬೆಂಗಳೂರು : ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿದ ಬೆನ್ನಲ್ಲಿಯೇ ನೂತನ ಮುಖ್ಯಮಂತ್ರಿ ಆಯ್ಕೆ ಮತ್ತು ಪ್ರಮಾಣವಚನ ಸ್ವೀಕಾರಕ್ಕೆ…

6 hours ago

ಪೊನ್ನಾಚಿ | ಚಿರತೆ ದಾಳಿಗೆ ಕುರಿ ಬಲಿ

ಹನೂರು : ಜಮೀನಿನಲ್ಲಿ ಕುರಿ ಮೇಯಿಸುತ್ತಿದ್ದ ಧನಗಾಹಿ ಮೇಲೆ ಚಿರತೆ ದಾಳಿ ನಡೆಸಿದ ವೇಳೆ ಕೂದಲೆಳೆ ಅಂತರದಲ್ಲಿ ಪ್ರಾಣಪಾಯದಿಂದ ಪಾರಾಗಿದ್ದಾರೆ.…

6 hours ago

ಮಣಿಪುರದಲ್ಲಿ ನಿಷೇಧಿತ ಸಂಘಟನೆಗಳಿಗೆ ಸೇರಿದ ಐವರು ಉಗ್ರರ ಬಂಧನ

ಇಂಫಾಲ: ಮಣಿಪುರದ ಇಂಫಾಲ ಪಶ್ಚಿಮ ಮತ್ತು ಪೂರ್ವ ಜಿಲ್ಲೆಗಳಲ್ಲಿ ಎರಡು ನಿಷೇಧಿತ ಸಂಘಟನೆಗಳಿಗೆ ಸೇರಿದ ಐದು ಉಗ್ರರನ್ನು ಭದ್ರತಾ ಪಡೆಗಳು…

8 hours ago