ಬ್ರೆಜಿಲ್: ಇಲ್ಲಿನ ಬೆಲೆಮ್‌ನಲ್ಲಿ ನಡೆಯುತ್ತಿರುವ ಯುಎನ್ ಸಿಒಪಿ 30 ಹವಾಮಾನ ಶೃಂಗಸಭೆಯ ಮುಖ್ಯ ಸ್ಥಳದಲ್ಲಿ ಬೆಂಕಿ ಅವಘಡ ಸಂಭವಿಸಿ 21 ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಬ್ರೆಜಿಲ್‌ನ ಬೆಲೆಮ್‌ನಲ್ಲಿ ನಡೆಯುತ್ತಿರುವ ಯುಎನ್ ಸಿಒಪಿ 30 ಹವಾಮಾನ ಶೃಂಗಸಭೆಯ ಮುಖ್ಯ ಸ್ಥಳದಲ್ಲಿ ಸಂಭವಿಸಿದ ಬೆಂಕಿ ಅವಘಡದಲ್ಲಿ ಕನಿಷ್ಠ 21 ಜನರು ಗಾಯಗೊಂಡಿದ್ದು, ಸಾವಿರಾರು ಜನರು ಸುರಕ್ಷತೆಗಾಗಿ ಓಡಬೇಕಾಯಿತು.
ಇದನ್ನು ಓದಿ: ನಂಜನಗೂಡು| ಎರಡು ಕಾರುಗಳಿಗೆ ಬೆಂಕಿ ಹಚ್ಚಿದ ದುಷ್ಕರ್ಮಿಗಳು
ಬ್ಲೂ ಝೋನ್‌ನಲ್ಲಿ ಬೆಂಕಿ ಕಾಣಸಿಕೊಂಡಿದ್ದು, ಅಲ್ಲಿ ಮುಖ್ಯ ಸಭೆ ಸಭಾಂಗಣ ಸೇರಿದಂತೆ ಎಲ್ಲಾ ಸಭೆಗಳು, ಮಾತುಕತೆಗಳು, ಕಂಟ್ರಿ ಪೆವಿಲಿಯನ್‌ಗಳು, ಮಾಧ್ಯಮ ಕೇಂದ್ರ ಹಾಗೂ ಎಲ್ಲಾ ಉನ್ನತ ಮಟ್ಟದ ಗಣ್ಯರ ಕಚೇರಿಗಳಿವೆ.
ಬೆಂಕಿ ಕಾಣಿಸಿಕೊಂಡ ತಕ್ಷಣ, ಜನರು ಸುರಕ್ಷತೆಗಾಗಿ ಎಲ್ಲಾ ನಿರ್ಗಮನ ದ್ವಾರಗಳಿಂದ ಹೊರಗೆ ಓಡಿಹೋದರು. ಅಧಿಕಾರಿಗಳು ಸಂಪೂರ್ಣ ಸುರಕ್ಷತಾ ಪರಿಶೀಲನೆಗಾಗಿ ಸ್ಥಳವನ್ನು ಮುಚ್ಚಿದರು. ಆರು ಗಂಟೆಗಳಿಗೂ ಹೆಚ್ಚು ಸಮಯದ ನಂತರ ಬೆಂಕಿ ಹೊತ್ತಿಕೊಂಡ ಪ್ರದೇಶ ಹೊರತುಪಡಿಸಿ ಮತ್ತೆ ತೆರೆದರು.





