ಪ್ರಯಾಗ್ ರಾಜ್: ಇಲ್ಲಿ ನಡೆಯುತ್ತಿರುವ ಮಹಾಕುಂಭಮೇಳದ ಸೆಕ್ಟರ್.5ರಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಕೆಲವೇ ಕ್ಷಣಗಳಲ್ಲಿ 20-25 ಟೆಂಟ್‌ಗಳು ಸುಟ್ಟು ಭಸ್ಮವಾಗಿವೆ.
ಟೆಂಟ್‌ನಲ್ಲಿ ಇರಿಸಲಾಗಿದ್ದ ಸಿಲಿಂಡರ್ ಸ್ಫೋಟಗೊಂಡ ನಂತರ ಬೆಂಕಿ ಕಾಣಿಸಿಕೊಂಡಿದ್ದು, ಬೆಂಕಿಯನ್ನು ನಿಯಂತ್ರಿಸಲು ಆರು ಅಗ್ನಿಶಾಮಕ ವಾಹನಗಳನ್ನು ನಿಯೋಜಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಶಾಸ್ತ್ರಿ ಸೇತುವೆ ಹಾಗೂ ರೈಲ್ವೆ ಸೇತುವೆಯ ನಡುವಿನ ಪ್ರದೇಶದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿಯನ್ನು ನಿಯಂತ್ರಿಸಲು ಪೊಲೀಸರು ಮತ್ತು ಎನ್‌ಡಿಆರ್‌ಎಫ್ ತಂಡಗಳು ಸುತ್ತಮುತ್ತಲಿನ ಪ್ರದೇಶಗಳನ್ನು ಸ್ಥಳಾಂತರ ಮಾಡುತ್ತಿವೆ.
ಇನ್ನು ಟೆಂಟ್‌ನಲ್ಲಿ ಇರಿಸಲಾಗಿದ್ದ ಸಿಲಿಂಡರ್‌ಗಳು ಒಂದೊಂದಾಗಿ ಸ್ಫೋಟಗೊಳ್ಳುತ್ತಿರುವುದರಿಂದ ಬೆಂಕಿ ಹೆಚ್ಚು ತೀವ್ರಗೊಳ್ಳುತ್ತಿದೆ ಎನ್ನಲಾಗಿದೆ.
ಇನ್ನು ಬೆಂಕಿ ಅವಘಡದ ನಂತರ ಇಡೀ ಕುಂಭಮೇಳದಲ್ಲಿ ಅವ್ಯವಸ್ಥೆಯ ಸ್ಥಿತಿ ನಿರ್ಮಾಣವಾಗಿದ್ದು, ಅವಘಡದಲ್ಲಿ ಯಾವುದೇ ಸಾವು-ನೋವುಗಳು ಆಗಿರುವ ಬಗ್ಗೆ ಮಾಹಿತಿ ಲಭ್ಯವಾಗಿಲ್ಲ.