Mysore
26
scattered clouds

Social Media

ಭಾನುವಾರ, 22 ಡಿಸೆಂಬರ್ 2024
Light
Dark

ಕುವೈತ್‌ನ ವಸತಿಯೊಂದರಲ್ಲಿ ಅಗ್ನಿ ಅವಘಡ: ಭಾರತೀಯರು ಸೇರಿದಂತೆ 40 ಮಂದಿ ಸಜೀವ ದಹನ

ದುಬೈ: ಕುವೈತ್‌ನ ವಸತಿ ಕಟ್ಟಡವೊಂದರಲ್ಲಿ ಅಗ್ನಿ ಅವಘಡ ಸಂಭವಿಸಿ ಭಾರತೀಯರು ಸೇರಿದಂತೆ 41 ಮಂದಿ ಸಜೀವ ದಹನವಾಗಿದ್ದಾರೆ ಎಂದು ವರದಿಯಾಗಿದೆ.

ದಕ್ಷಿಣ ಕುವೈತ್‌ನ ಮಂಗಾಫ್‌ ನಗರದಲ್ಲಿ ಮಲಯಾಳಿಗೆ ಉದ್ಯಮಿಗೆ ಸೇರಿದ್ದ ಕಟ್ಟಡವೊಂದರಲ್ಲಿ ಈ ಘಟನೆ ನಡೆದಿದೆ. ಈ ಕಟ್ಟಡದಲ್ಲಿ ಹೆಚ್ಚಿನವರು ಮಲಯಾಳಿಗಳು ವಾಸಿಸುತ್ತಿದ್ದರು ಎನ್ನಲಾಗಿದೆ. ಮೃತರಲ್ಲಿ ನಾಲ್ವರು ಭಾರತೀಯರು ಇದ್ದಾರೆ ಎಂದು ತಿಳಿದುಬಂದಿದೆ.

ಈ ಕಟ್ಟಡದ ಅಡುಗೆ ಮನೆಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿಯನ್ನು ಕಂಡು ಕೆಲವರು ಅಪಾರ್ಟ್‌ಮೆಂಟ್‌ನಿಂದ ಕೆಳಗೆ ಹಾರಿ ಸಾವನ್ನಪ್ಪಿದ್ದಾರೆ, ಇನ್ನೂ ಕೆಲವರು ಬೆಂಕಿಯಲ್ಲೇ ಬೆಂದು ಹೋಗಿದ್ದಾರೆ. ತಕ್ಷಣ ಗಾಯಳುಗಳನ್ನು ಆಸ್ಪತ್ರೆಗೆ ಸಾಗಿಸಲಾಗಿದೆ. ಮೃತರು ಮತ್ತು ಗಾಯಾಳುಗಳಿಗೆ ನೆರವಾಗಲು ರಾಯಭಾರಿ ಕಚೇರಿ ತುರ್ತು ಸಹಾಯವಾಣಿ ಆರಂಭಿಸಲಾಗಿದೆ.

ಇನ್ನೂ ಘಟನೆ ಸಂಬಂಧ ನೆರವು ಒದಗಿಸಲು ರಾಯಭಾರಿ ಕಚೇರಿಯು ಬದ್ಧವಾಗಿದೆ ಎಂದು ಕುವೈತ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿಯು ಎಕ್ಸ್‌ ನಲ್ಲಿ ಪೋಸ್ಟ್‌ ಮಾಡಿದೆ.

Tags: