ದುಬೈ: ಕುವೈತ್‌ನ ವಸತಿ ಕಟ್ಟಡವೊಂದರಲ್ಲಿ ಅಗ್ನಿ ಅವಘಡ ಸಂಭವಿಸಿ ಭಾರತೀಯರು ಸೇರಿದಂತೆ 41 ಮಂದಿ ಸಜೀವ ದಹನವಾಗಿದ್ದಾರೆ ಎಂದು ವರದಿಯಾಗಿದೆ.
ದಕ್ಷಿಣ ಕುವೈತ್‌ನ ಮಂಗಾಫ್ ನಗರದಲ್ಲಿ ಮಲಯಾಳಿಗೆ ಉದ್ಯಮಿಗೆ ಸೇರಿದ್ದ ಕಟ್ಟಡವೊಂದರಲ್ಲಿ ಈ ಘಟನೆ ನಡೆದಿದೆ. ಈ ಕಟ್ಟಡದಲ್ಲಿ ಹೆಚ್ಚಿನವರು ಮಲಯಾಳಿಗಳು ವಾಸಿಸುತ್ತಿದ್ದರು ಎನ್ನಲಾಗಿದೆ. ಮೃತರಲ್ಲಿ ನಾಲ್ವರು ಭಾರತೀಯರು ಇದ್ದಾರೆ ಎಂದು ತಿಳಿದುಬಂದಿದೆ.
ಈ ಕಟ್ಟಡದ ಅಡುಗೆ ಮನೆಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿಯನ್ನು ಕಂಡು ಕೆಲವರು ಅಪಾರ್ಟ್‌ಮೆಂಟ್‌ನಿಂದ ಕೆಳಗೆ ಹಾರಿ ಸಾವನ್ನಪ್ಪಿದ್ದಾರೆ, ಇನ್ನೂ ಕೆಲವರು ಬೆಂಕಿಯಲ್ಲೇ ಬೆಂದು ಹೋಗಿದ್ದಾರೆ. ತಕ್ಷಣ ಗಾಯಳುಗಳನ್ನು ಆಸ್ಪತ್ರೆಗೆ ಸಾಗಿಸಲಾಗಿದೆ. ಮೃತರು ಮತ್ತು ಗಾಯಾಳುಗಳಿಗೆ ನೆರವಾಗಲು ರಾಯಭಾರಿ ಕಚೇರಿ ತುರ್ತು ಸಹಾಯವಾಣಿ ಆರಂಭಿಸಲಾಗಿದೆ.
ಇನ್ನೂ ಘಟನೆ ಸಂಬಂಧ ನೆರವು ಒದಗಿಸಲು ರಾಯಭಾರಿ ಕಚೇರಿಯು ಬದ್ಧವಾಗಿದೆ ಎಂದು ಕುವೈತ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿಯು ಎಕ್ಸ್ ನಲ್ಲಿ ಪೋಸ್ಟ್ ಮಾಡಿದೆ.
ಉತ್ತರ ಪ್ರದೇಶ: ಲೋಕಸಭಾ ಚುನಾವಣಾ ಸಂದರ್ಭದಲ್ಲಿ ಶ್ರೀಮಂತರು ಹಾಗೂ ಬಡವರ ನಡುವಿನ ಆರ್ಥಿಕತೆ, ಅಸಮಾನ ಆಸ್ತಿಗೆ ಸಂಬಂಧಿಸಿದಂತೆ ಹೇಳಿಕೆ ನೀಡಿದ್ದ…
ಬೆಂಗಳೂರು: ಪ್ರಸಕ್ತ ವರ್ಷದಲ್ಲಿ ಚಳಿ ತುಂಬಾ ಜಾಸ್ತಿಯಿದ್ದು, ಶೀತಗಾಳಿ ಹೆಚ್ಚಾಗಲು ಕರಾವಳಿ ತೀರ ಪ್ರದೇಶದಲ್ಲಾದ ವಾತಾವರಣ ಬದಲಾವಣೆ ಕಾರಣ ಎಂದು…
ಮಂಡ್ಯ: ಸಕ್ಕರೆ ನಾಡು ಮಂಡ್ಯದಲ್ಲಿ ನಡೆಯುತ್ತಿರುವ 87ನೇ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಮಾಂಸಾಹಾರ ವಿತರಣೆ ಮಾಡಿರುವ ವಿಚಾರ ಭಾರೀ ವಿವಾದಕ್ಕೆ…
ಕುವೈತ್/ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಎರಡು ದಿನಗಳ ಕಾಲ ಕುವೈತ್ ಪ್ರವಾಸದಲ್ಲಿದ್ದು, ಇಲ್ಲಿನ ರಾಜ ಶೇಕ್ ಮಿಶಾಲ್ ಅಲ್…
ಕಲಬುರ್ಗಿ: ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ರಾಜ್ಯ ಸರ್ಕಾರ ಒತ್ತು ನೀಡುತ್ತಿದ್ದು, 371 ಜೆ ಜಾರಿಯಾದ ದಶಮಾನೋತ್ಸವದ ಪ್ರಯುಕ್ತ 371 ಹಾಸಿಗೆಗಳ…
ಬೆಂಗಳೂರು: ವಿಧಾನ ಪರಿಷತ್ ಶಾಸಕ ಸಿ.ಟಿ.ರವಿ ಬಂಧನ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ನೀಡಿರುವ ಹೇಳಿಕೆ ಅಮಿತ್…