ದೇಶ- ವಿದೇಶ

ಸ್ವಿಸ್‌ ವಿಮಾನದಲ್ಲಿ ಬೆಂಕಿ, 6 ಮಂದಿಗೆ ಗಾಯ ; ತಪ್ಪಿದ ದುರಂತ

ನವದೆಹಲಿ : ಟೇಕಾಫ್ ವೇಳೆ ಎಂಜಿನ್ ವೈಫಲ್ಯದಿಂದ ಸ್ವಿಸ್ ವಿಮಾನದಲ್ಲಿ ಬೆಂಕಿ ಕಾಣಿಸಿಕೊಂಡ ಪರಿಣಾಮ 6 ಮಂದಿ ಗಾಯಗೊಂಡಿರುವ ಘಟನೆ ದೆಹಲಿಯ ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆದಿದೆ.

ದೆಹಲಿಯಿಂದ ಜ್ಯೂರಿಚ್‌ಗೆ ತೆರಳಬೇಕಿದ್ದ ‘ಸ್ವಿಸ್’ ವಿಮಾನಯಾನ ಸಂಸ್ಥೆಯ ಏರ್‌ಬಸ್ ವಿಮಾನ (A330) ಭಾನುವಾರ ಬೆಳಗ್ಗೆ ಟೇಕಾಫ್ ಆಗಲು ರನ್‌ವೇ ಮೇಲೆ ಚಲಿಸುತ್ತಿತ್ತು. ಈ ವೇಳೆ ವಿಮಾನದ ಒಂದು ಎಂಜಿನ್‌ನಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡು ಬೆಂಕಿ ಹೊತ್ತಿಕೊಂಡಿದೆ. ಕೂಡಲೇ ಪೈಲಟ್ ವಿಮಾನವನ್ನು ನಿಲ್ಲಿಸಿ ತುರ್ತು ದ್ವಾರ ತೆರೆದು ಸ್ಲೈಡ್‌ಗಳ ಮೂಲಕ ಪ್ರಯಾಣಿಕರನ್ನು ರನ್‌ವೇಯಲ್ಲಿ ಇಳಿಸಲಾಯಿತು.

ವಿಮಾನದಿಂದ ಇಳಿಯುವಾಗ 6 ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿದೆ. ತಕ್ಷಣವೇ ಗಾಯಾಳುಗಳನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ವಿಮಾನದಲ್ಲಿದ್ದ 228 ಪ್ರಯಾಣಿಕರು ಹಾಗೂ ಸಿಬ್ಬಂದಿಗೆ ಯಾವುದೇ ಅಪಾಯ ಸಂಭವಿಸಿಲ್ಲ ಎಂದು ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ. ಘಟನೆಗೆ ನಿಖರ ಕಾರಣವೇನು ಎಂಬ ಬಗ್ಗೆ ತನಿಖೆ ನಡೆಯುತ್ತಿದೆ.

ಆಂದೋಲನ ಡೆಸ್ಕ್

Recent Posts

ತಂತ್ರಜ್ಞಾನ ಶಸ್ತ್ರಾಸ್ತ್ರೀಕರಣದ ಬಗ್ಗೆ ಕಳವಳಗಳ ವ್ಯಕ್ತಪಡಿಸಿದ ಪ್ರಧಾನಿ ಮೋದಿ

ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…

13 hours ago

ಭಾನುವಾರದ ಹಾಡುಪಾಡು | ಹೊರಗೆ ನಗುವಿನ ಮೇಕಪ್‌, ಒಳಗೆ ಕುದಿಯುವ ಬೇಗುದಿ

ಮೇಘನ ಕೆ.ಆರ್‌ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…

16 hours ago

ಭಾನುವಾರದ ಹಾಡುಪಾಡು | ಮಳೆ ತರುವ ತಾಯಯಿ ಈ ಪುಟ್ಟ ಗೌರಿ

ಡಾ. ಶಿಲಿನಾ ಕೋಟೆ ಎನ್.‌ ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…

16 hours ago

ಗೌರಮ್ಮ ಭೂಮಿಗೆ ಬರುವ ದಿನ

ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…

17 hours ago

ಮಗಳು ಗೌರಿ, ದೇವತೆಯೂ ಗೌರಿ, ಮಳೆಯು ಗೌರಿ, ಬೆಂಕಿಯೂ ಗೌರಿ

ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್‌, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…

17 hours ago

ಗೌರಿ-ಗಣೇಶ ಹಬ್ಬಕ್ಕೆ ಸಕಲ ಸಿದ್ಧತೆ

ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…

17 hours ago