ದೇಶ- ವಿದೇಶ

ಕುಲ್ಗಾಮ್‌ನಲ್ಲಿ ಎನ್‌ಕೌಂಟರ್‌: ಐವರು ಯೋಧರಿಗೆ ಗಾಯ, ಇಬ್ಬರು ಉಗ್ರರ ಹತ್ಯೆ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮಾ ಜಿಲ್ಲೆಯಲ್ಲಿ ಭಯೋತ್ಪಾದನೆ ನಿಗ್ರಹ ಕಾರ್ಯಾಚರಣೆಯಲ್ಲಿ ಐವರು ಯೋಧರಿಗೆ ಗಾಯಗಳಾಗಿದ್ದು, ಇಬ್ಬರು ಉಗ್ರರನ್ನು ಹತ್ಯೆ ಮಾಡಲಾಗಿದೆ ಎಂದು ಕುಲ್ಗಾಮ್‌ ಜಿಲ್ಲಾ ಪೊಲೀಸ್‌ ಅಧೀಕ್ಷಕರು ತಿಳಿಸಿದ್ದಾರೆ.

ಇಂದು ಬೆಳಿಗ್ಗೆಯಿಂದಲೇ ದೇವಸಾರ್‌ ಪ್ರದೇಶದಲ್ಲಿ ಭದ್ರತಾ ಪಡೆ ಹಾಗೂ ಉಗ್ರರ ನಡುವೆ ಗುಂಡಿನ ಕಾಳಗ ಪ್ರಾರಂಭವಾಗಿತ್ತು. ಈ ದಾಳಿ ಮಧ್ಯೆ ಎಎಸ್‌ಪಿ ಮಮ್ತಾಜ್‌ ಅಲಿ ಅವರಿಗೆ ಗಾಯವಾಗಿದ್ದು, ಇನ್ನುಳಿದ ಐವರು ಯೋಧರು ಗಾಯಗೊಂಡಿದ್ದಾರೆ. ಇದೇ ಸಂದರ್ಭದಲ್ಲಿ ಇಬ್ಬರು ಉಗ್ರರ ಹತ್ಯೆ ಮಾಡಲಾಗಿದೆ. ಆದರೆ ಆ ಇಬ್ಬರೂ ಉಗ್ರರ ಗುರುತು ಇನ್ನೂ ಪತ್ತೆಯಾಗಿಲ್ಲ ಎಂದು ಹೇಳಿದ್ದಾರೆ.

ಇನ್ನು ಜಮ್ಮು-ಕಾಶ್ಮೀರದಲ್ಲಿ ಉಗ್ರರ ವಿರುದ್ಧ ಪೊಲೀಸರು ಹದ್ದಿನ ಕಣ್ಣಿಟ್ಟಿದ್ದು, ಸೇನೆ ಸತತ ಕಾರ್ಯಾಚರಣೆ ಕೈಗೊಂಡಿದೆ. ಈ ಹಿನ್ನೆಲೆಯಲ್ಲಿ ಬಸ್‌ ನಿಲ್ದಾಣ ಹಾಗೂ ಇನ್ನುಳಿದ ತಗ್ಗು ಪ್ರದೇಶಗಳ ಮೇಲೆ ಪೊಲೀಸರು ಕಟ್ಟೆಚ್ಚರ ವಹಿಸಲಾಗಿದ್ದು, ಉಗ್ರರ ಎಡೆಮುರಿ ಕಟ್ಟಲೇಬೇಕೆಂದು ಶಪಥ ಮಾಡಿದ್ದಾರೆ.

ಆಂದೋಲನ ಡೆಸ್ಕ್

Recent Posts

ತಿರುವಿನಲ್ಲಿ ಉರುಳಿಬಿದ್ದ ಲಾರಿ: ತಪ್ಪಿದ ಭಾರೀ ಅನಾಹುತ

ಕೊಡಗು: ಕೊಡಗು ಜಿಲ್ಲೆ ಶನಿವಾರಸಂತೆ ಬಳಿಯ ಗುಡುಗಳಲೆಯಲ್ಲಿ ಸಿಮೆಂಟ್ ತುಂಬಿದ್ದ ಲಾರಿ ಉರುಳಿಬಿದ್ದಿದೆ. ಶನಿವಾರಸಂತೆ–ಅರಕಲಗೂಡು ರಸ್ತೆಯ ಗುಡುಗಳಲೆ ತಿರುವಿನಲ್ಲಿ ಘಟನೆ…

7 hours ago

ದುಬಾರೆ ಆನೆ ಶಿಬಿರದಲ್ಲಿ19 ವರ್ಷದ ಗಂಡಾನೆ ಸಾವು

ಕುಶಾಲನಗರ: ದುಬಾರೆ ಆನೆ ಶಿಬಿರದಲ್ಲಿದ್ದ ಸುಮಾರು 19 ವರ್ಷ ಪ್ರಾಯದ ಗಂಡಾನೆಯೊಂದು ಐದು ತಿಂಗಳಿಗೂ ಹೆಚ್ಚು ಕಾಲ ನಿರಂತರ ಚಿಕಿತ್ಸೆ…

8 hours ago

ಪ್ರೀತಿಗೆ ನಿರಾಕರಣೆ: ಮೈಸೂರಿನಲ್ಲಿ ಬೆಚ್ಚಿಬೀಳಿಸಿದ ಒನ್‌ ಸೈಡ್‌ ಲವ್‌ ಕೃತ್ಯ

ಮೈಸೂರು: ಪ್ರೀತಿಗೆ ನಿರಾಕರಿಸಿದ ಪರಿಣಾಮ ಯುವಕನೋರ್ವ ಯುವತಿಯನ್ನು ತಬ್ಬಿಕೊಂಡು ಪೆಟ್ರೋಲ್‌ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಮೈಸೂರಿನ ವಿಜಯನಗರದ ಬಳಿ…

10 hours ago

ಮನ್​​ಮುಲ್​ ಹಾಲಿನ ಪುಡಿ ಕಲಬೆರಕೆ ಪ್ರಕರಣ: ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಅಧ್ಯಕ್ಷ ಶಿವಕುಮಾರ್ ಅರೆಸ್ಟ್​!

ಮಂಡ್ಯ: ಮನ್​​ಮುಲ್​ ಹಾಲಿನ ಪುಡಿ ಕಲಬೆರಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಮನ್ ಮುಲ್ ಅಧ್ಯಕ್ಷ ಶಿವಕುಮಾರ್(ಶಿವಪ್ಪ)…

12 hours ago

ಭಾರೀ ಮಳೆಗೆ ರೈತರ ಬೆಳೆ ನಾಶ: ಲಕ್ಷಾಂತರ ರೂ. ನಷ್ಟ, ಮನೆ ಗೋಡೆ ಕುಸಿತ

ಹನೂರು: ಸೋಮವಾರ ತಡರಾತ್ರಿ ಸುರಿದ ಭಾರಿ ಮಳೆಗೆ ಕ್ಷೇತ್ರದ ಹಲವು ಜಮೀನುಗಳಲ್ಲಿ ಬೆಳೆದಿದ್ದ ಬೆಳೆಗಳು ಸಂಪೂರ್ಣ ಜಲಾವೃತಗೊಂಡು ಲಕ್ಷಾಂತರ ರೂಪಾಯಿ…

12 hours ago

ಸ್ಕೂಲ್ ಬಸ್‌ ಹರಿದು ಒಂದೂವರೆ ವರ್ಷದ ಮಗು ಸಾವು

ಮೈಸೂರು: ಜಿಲ್ಲೆಯ ಹುಣಸೂರು ತಾಲೂಕಿನ ನಂಜಾಪುರ ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ರಸ್ತೆ ಬದಿ ನಿಂತಿದ್ದ ಒಂದೂವರೆ ವರ್ಷದ ಪುಟ್ಟ…

13 hours ago