ಶ್ರೀನಗರ: ಜಮ್ಮು-ಕಾಶ್ಮೀರದ ಕಿಶ್ತ್ವಾರ್‌ನಲ್ಲಿ ನಡೆದ ಎನ್‌ಕೌಂಟರ್‌ಗೆ ಇಬ್ಬರು ಯೋಧರು ಹುತಾತ್ಮರಾಗಿದ್ದು, ಮತ್ತೆ ಇಬ್ಬರಿಗೆ ಗಂಭೀರ ಗಾಯಗಳಾಗಿದೆ.
ಉಗ್ರರೊಂದಿಗಿನ ಹೋರಾಟದಲ್ಲಿ ಇಬ್ಬರು ಯೋಧರು ಹುತಾತ್ಮರಾಗಿದ್ದು, ಗಂಭೀರ ಗಾಯಗೊಂಡ ಇಬ್ಬರು ಯೋಧರನ್ನು ಶ್ರೀನಗರ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಶ್ರೀನಗರದಲ್ಲಿ ಜಮ್ಮು-ಕಾಶ್ಮೀರದ ಪೊಲೀಸರು ಹಾಗೂ ಸೇನೆ ಕಿಶ್ತ್ವಾರ್ ಜಿಲ್ಲೆಯ ಚಾಟ್ರೂ ಪ್ರದೇಶದಲ್ಲಿ ಜಂಟಿ ಕಾರ್ಯಾಚರಣೆ ನಡೆಸಿತ್ತು.
ದಿನವಿಡೀ ಶೋಧಕಾರ್ಯ ನಡೆಸಿದ ಸೇನೆ ನಿನ್ನೆ ಮಧ್ಯಾಹ್ನದ ವೇಳೆಗೆ ಉಗ್ರರೊಂದಿಗೆ ಕಾದಾಟ ನಡೆಸಿತ್ತು. ಈ ವೇಳೆ ಉಗ್ರರು ಹಾಗೂ ಸೇನೆಯ ಮಧ್ಯೆ ಗುಂಡಿನ ಚಕಮಕಿ ನಡೆಯಿತು.
ಬಳಿಕ ಎನ್‌ಕೌಂಟರ್‌ನಲ್ಲಿ ಇಬ್ಬರು ಯೋಧರು ಹುತಾತ್ಮರಾಗಿದ್ದು, ಮತ್ತಿಬ್ಬರಿಗೆ ಗಂಭೀರ ಗಾಯಗಳಾಗಿದೆ.
ಜಮ್ಮು ಕಾಶ್ಮೀರದಲ್ಲಿ ಈ ವರ್ಷದ ಜೂನ್‌ನಿಂದ ಹಲವು ಉಗ್ರರ ದಾಳಿಯಾಗಿದೆ. ಈ ದಾಳಿಯಲ್ಲಿ ಬಹುತೇಕ ಸೇನಾ ಸಿಬ್ಬಂದಿಗಳು ಸಾವನ್ನಪ್ಪಿರುವುದು ಬಹಳ ಬೇಸರದ ಸಂಗತಿಯಾಗಿದೆ.