ದೇಶ- ವಿದೇಶ

ನಾಳೆಯಿಂದ 18ನೇ ಲೋಕಸಭೆ ಅಧಿವೇಶನ; ಸ್ಪೀಕರ್‌ ಪಟ್ಟ ಉಳಿಸಿಕೊಳ್ಳಲು ಬಿಜೆಪಿ ಹರಸಾಹಸ

ಹೊಸದಿಲ್ಲಿ: 18ನೇ ಲೋಕಸಭೆಯ ಅಧಿವೇಶನ ನಾಳೆಯಿಂದ (ಜೂನ್‌ 24) ಆರಂಭವಾಗಲಿದ್ದು, ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಸಚಿವರು ಮತ್ತು ಹೊಸ ಸಂಸದರು ಮೊದಲ ಎರಡು ದಿನ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

ನೂತನ ಸಂಸದರಿಗೆ ಪ್ರಮಾಣವಚನ ಬೋಧಿಸಲು ಹಂಗಾಮಿ ಸ್ಪೀಕರ್‌ ಆಗಿ ಮಹತಾಬ್‌ ಭತೃಹರಿ ಅವರನ್ನು ನೇಮಕ ಮಾಡಿರುವುದು ವಿರೋಧ ಪಕ್ಷಗಳ ಟೀಕೆಗೆ ಗುರಿಯಾಗಿದೆ.

ಕಾಂಗ್ರೆಸ್‌ನ ಹಿರಿಯ ಸಂಸದ ಕೆ.ಸುರೇಶ್‌ ಅವರು ಲೋಕಸಭೆಯಲ್ಲಿನ ಅತೀ ಹಿರಿಯ ಸದಸ್ಯರಾಗಿದ್ದರೂ ಜಾತಿ ಕಾರಣಕ್ಕಾಗಿ ಅವರನ್ನು ಕಡೆಗಣಿಸಲಾಗಿದೆ. ಬದಲಾಗಿ ಮಹತಾಬ್‌ ಭತೃಹರಿ ಅವರನ್ನು ಹಂಗಾಮಿ ಸ್ಪೀಕರ್‌ ಆಗಿ ನೇಮಕ ಮಾಡಲಾಗಿದೆ ಎಂದು ಕಾಂಗ್ರೆಸ್‌ ಸೇರಿದಂತೆ ಇಂಡಿಯಾ ಮೈತ್ರಿಕೂಟದ ನಾಯಕರು ಗಂಭೀರ ಆರೋಪ ಮಾಡಿದ್ದಾರೆ.

ಮೊದಲ ಎರಡು ದಿನ ನೂತನ ಸಂಸದರ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯಲಿದ್ದು, ಇದೇ ಜೂನ್ 26ರಂದು ನೂತನ ಲೋಕಸಭಾ ಅಧ್ಯಕ್ಷರ ಆಯ್ಕೆ ನಡೆಯಲಿದೆ.

ಸ್ಪೀಕರ್‌ ಪಟ್ಟವನ್ನು ಬಿಜೆಪಿ ತನ್ನ ಬಳಿಯೇ ಉಳಿಸಿಕೊಳ್ಳಲು ಹರಸಾಹಸ ನಡೆಸಿದ್ದು, ಎನ್‌ಡಿಎ ಮಿತ್ರ ಪಕ್ಷಗಳಾದ ಟಿಡಿಪಿ ಮತ್ತು ಜೆಡಿಎಸ್‌ ಪಕ್ಷಗಳು ನಮಗೆ ಲೋಕಸಭಾ ಅಧ್ಯಕ್ಷ ಸ್ಥಾನ ನೀಡುವಂತೆ ಪಟ್ಟು ಹಿಡಿದಿವೆ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಲೋಕಸಭಾ ಅಧ್ಯಕ್ಷ ಸ್ಥಾನ ಯಾರ ಪಾಲಾಗಲಿದೆ ಎನ್ನುವುದು ಎಲ್ಲರ ಕುತೂಹಲಕ್ಕೆ ಕಾರಣವಾಗಿದೆ.

ಇನ್ನೂ ಈ ಬಾರಿ ಲೋಕಸಭೆಯಲ್ಲಿ ವಿರೋಧ ಪಕ್ಷಗಳ ಸಂಖ್ಯೆ ಹೆಚ್ಚಿರುವ ಹಿನ್ನೆಲೆಯಲ್ಲಿ ಉಪ ಸಭಾಧ್ಯಕ್ಷ ಸ್ಥಾನವನ್ನು ವಿರೋಧ ಪಕ್ಷಗಳ ಮೈತ್ರಿಕೂಟಕ್ಕೆ ಬಿಟ್ಟು ಕೊಡುವಂತೆ ಕಾಂಗ್ರೆಸ್‌ ಸೇರಿದಂತೆ ಪ್ರತಿಪಕ್ಷಗಳು ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿವೆ.

andolana

Recent Posts

ವೇಶ್ಯಾವಾಟಿಕೆ ನಡೆಸುತ್ತಿದ್ದ ಮಹಿಳೆಯ ಬಂಧನ: ಇಬ್ಬರ ರಕ್ಷಣೆ

ಕುಶಾಲನಗರ: ಮುಳ್ಳುಸೋಗೆಯಲ್ಲಿ ವೇಶ್ಯಾವಾಟಿಕೆ ಪ್ರಕರಣ ಬೇಧಿಸಿದ ಪೊಲೀಸರು ಓರ್ವ ಮಹಿಳೆಯನ್ನು ಬಂಧಿಸಿದ್ದಾರೆ. ಸೆಲೆಕ್ಟ್ ಸಾಮಿಲ್ ಬಳಿಯ ಮನೆಯೊಂದನ್ನು ಬಾಡಿಗೆ ಪಡೆದ…

3 hours ago

ಎಲ್ಲೆಂದರಲ್ಲಿ ಹಳೇ ವಾಹನ ನಿಲ್ಲಿಸಿದ್ರೆ ಕಠಿಣ ಕ್ರಮ: ಡಿಸಿಎಂ ಡಿ.ಕೆ.ಶಿವಕುಮಾರ್‌ ಎಚ್ಚರಿಕೆ

ಬೆಂಗಳೂರು: ಎಲ್ಲೆಂದರಲ್ಲಿ ಹಳೆಯ ವಾಹನಗಳನ್ನು ನಿಲ್ಲಿಸಿದರೆ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ತಿಳಿಸಿದರು. ಈ ಕುರಿತು ಮಾಧ್ಯಮಗಳೊಂದಿಗೆ…

3 hours ago

ಪ್ರೀಮಿಯಂ ಪೆಟ್ರೋಲ್‌ ದರ 2 ರೂ ಏರಿಕೆ

ನವದೆಹಲಿ: ಇರಾನ್‌ ಯುದ್ಧದ ಬಿಸಿ ಸವಾರರಿಗೆ ತಟ್ಟಿದೆ. ತೈಲ ಕಂಪನಿಗಳು ಪ್ರೀಮಿಯಂ ಪೆಟ್ರೋಲ್‌ ದರವನ್ನು 2 ರೂಗೆ ಏರಿಕೆ ಮಾಡಿದೆ.…

4 hours ago

ವಿದ್ಯುತ್‌ ಕಂಬಕ್ಕೆ ಡಿಕ್ಕಿ ಹೊಡೆದ ಬೈಕ್:‌ ಸವಾರ ಸಾವು

ಸುಂಟಿಕೊಪ್ಪ: ಮಾದಾಪುರ ರಾಜ್ಯ ಹೆದ್ದಾರಿ ಬದಿಯಲ್ಲಿದ್ದ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಸವಾರ ಸಾವಿಗೀಡಾಗಿ ಹಿಂಬದಿ ಸವಾರ…

4 hours ago

ಚಿಕ್ಕಮಗಳೂರು| ಹೊತ್ತಿ ಉರಿಯುತ್ತಿರುವ ಶೋಲಾರಣ್ಯ: ಅಪರೂಪದ ಸಸ್ಯ ಸಂಪತ್ತು ನಾಶ

ಚಿಕ್ಕಮಗಳೂರು: ಬಿಸಿಲ ಬೇಗೆಗೆ ಅಪರೂಪದ ಶೋಲಾ ಹುಲ್ಲುಗಾವಲು ಹೊತ್ತಿ ಉರಿಯುತ್ತಿದೆ. ಕುದುರೆಮುಖ ರಾಷ್ಟ್ರೀಯ ಉದ್ಯಾನವನದ ವ್ಯಾಪ್ತಿಯಲ್ಲಿ ಬರುವ ಶೃಂಗೇರಿಯ ಕೆರೆಕಟ್ಟೆ…

4 hours ago

ಇರಾನ್‌ ಮೇಲೆ ಅಮೇರಿಕಾ-ಇಸ್ರೇಲ್‌ ವೈಮಾನಿಕ ದಾಳಿ: ಇರಾನ್‌ ಗುಪ್ತಚರ ಸಚಿವ ಸಾವು

ಟೆಹರಾನ್:‌ ಇರಾನ್‌ ಮೇಲೆ ಅಮೇರಿಕಾ ಹಾಗೂ ಇಸ್ರೇಲ್‌ ಜಂಟಿ ದಾಳಿ ಮುಂದುವರಿಸಿದ್ದು, ಇರಾನ್‌ ಗುಪ್ತಚರ ಸಚಿವ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.…

5 hours ago