ನವದೆಹಲಿ: ಸುಪ್ರೀಂಕೋರ್ಟ್ಗೆ ಐವರು ನ್ಯಾಯಮೂರ್ತಿಗಳನ್ನು ನೇಮಕ ಮಾಡಲಾಗಿದೆ.
ನ್ಯಾಯಮೂರ್ತಿಗಳಾಗಿ ನ್ಯಾ.ವೆಂಕಿಟ ಸುಬ್ರಮಣಿ ಮೋಹನ, ನ್ಯಾ.ಚಂದ್ರಶೇಖರ್ (ಬಾಂಬೆ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ), ನ್ಯಾ.ಶೀಲ್ ನಾಗು, (ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ) ನ್ಯಾ.ಸಂಜೀವ್ ಸಚ್ದೇವಾ (ಮಧ್ಯಪ್ರದೇಶ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ) ಮತ್ತು ನ್ಯಾ.ಅರುಣ್ ಪಲ್ಲಿ (ಜಮ್ಮು ಮತ್ತು ಕಾಶ್ಮೀರ ಹಾಗೂ ಲಡಾಖ್ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ) ಅವರನ್ನು ನೇಮಕ ಮಾಡಲಾಗಿದೆ.
ಈ ನೇಮಕಾತಿಗೆ ಸಂಬಂಧಿಸಿದ ಕೇಂದ್ರ ಕಾನೂನು ಸಚಿವಾಲಯ ಅಧಿಸೂಚನೆಗಳನ್ನು ಹೊರಡಿಸಿದೆ.
ಈ ಹೊಸ ನೇಮಕಾತಿಗಳೊಂದಿಗೆ ದೇಶದ ಅತ್ಯುನ್ನತ ನ್ಯಾಯಾಂಗ ಸಂಸ್ಥೆಯಾದ ಸುಪ್ರೀಂಕೋರ್ಟ್ನ ನ್ಯಾಯಮೂರ್ತಿಗಳ ಸಂಖ್ಯೆಯಲ್ಲಿ ಹೆಚ್ಚಳವಾಗಿದ್ದು, ಬಾಕಿ ಇರುವ ಪ್ರಕರಣಗಳ ತ್ವರಿತ ವಿಲೇವಾರಿಗೆ ಸಹಕಾರಿಯಾಗುವ ನಿರೀಕ್ಷೆಯಿದೆ ಎಂದು ಕೇಂದ್ರ ಕಾನೂನು ಸಚಿವಾಲಯ ತಿಳಿಸಿದೆ.
ಆರ್.ಎಲ್.ಮಂಜುನಾಥ್ ದಸರಾ ನೋಡಲು ಬಂದವರ ಪಾಡು ಅಯೋಮಯ; ತಾತ್ಕಾಲಿಕ ಶೆಲ್ಟರ್ ಅಳವಡಿಸಲು ಆಗ್ರಹ ಮೈಸೂರು: ಸಾಂಸ್ಕೃತಿಕ ನಗರಿಯಲ್ಲಿ ದಸರಾ ಮಹೋತ್ಸವದ…
ಮಂಜು ಕೋಟೆ ವರದರಾಜಸ್ವಾಮಿ, ಚಾಮುಂಡೇಶ್ವರಿ ದೇವಸ್ಥಾನಗಳಲ್ಲಿ ವಿವಿಧ ಕಾರ್ಯಕ್ರಮಗಳು; ಪ್ರತಿನಿತ್ಯ ನೂರಾರು ಮಂದಿ ಭಾಗಿ ಎಚ್.ಡಿ.ಕೋಟೆ: ನವರಾತ್ರಿ ಉತ್ಸವ ಮತ್ತು…
ಯಳಂದೂರು: ತಾಲ್ಲೂಕಿನ ಬಿಳಿಗಿರಿರಂಗನ ಬೆಟ್ಟದ ದೇವಸ್ಥಾನದ ತೇರು ಪಕ್ಕದಲ್ಲಿರುವ ಸಂತೋಷ್ ಎಂಬುವವರಿಗೆ ಸೇರಿದ ಅಂಗಡಿಯ ಮೇಲೆ ಕಾಡಾನೆಯೊಂದು ದಾಳಿ ನಡೆಸಿ…
ನಂಜನಗೂಡು: ತಾಲ್ಲೂಕಿನ ಹಂಚೀಪುರ ಗ್ರಾಮದಲ್ಲಿ ರೈತನ ಸಾವಿಗೆ ಕಾರಣವಾಗಿದ್ದ ಆನೆಯನ್ನು ಅರಣ್ಯ ಇಲಾಖೆ ಇಂದು ಸೆರೆ ಹಿಡಿದಿದೆ. ಸಾಕಾನೆಗಳ ನೆರವಿನಿಂದ…
ಬೆಂಗಳೂರು: ಕರ್ನಾಟಕದ ನೂತನ ರಾಜ್ಯಪಾಲರಾಗಿ ಡಾ.ಸುಧಾ ಯಾದವ್ ಶುಕ್ರವಾರ ಬೆಳಗ್ಗೆ ಪ್ರಮಾಣ ವಚನ ಸ್ವೀಕರಿಸಿದರು. ಲೋಕಭವನದ ಗಾಜಿನ ಮನೆಯಲ್ಲಿ ನಡೆದ…