ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಸತತ ಮೂರನೇ ಬಾರಿಗೆ ಇಂದು ರಾತ್ರಿ 7 ಗಂಟೆಗೆ (ಜೂ.9) ಪ್ರಧಾನಿಯಾಗಿ ಪ್ರಮಾಣ ಸ್ವೀಕರಿಸಲಿದ್ದಾರೆ. ಮೋದಿ ಅವರ ಜೊತೆಗೆ ಕ್ಯಾಬಿನೆಟ್ ದರ್ಜೆಯ ಸಚಿವರು ಸಹ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.
ಮೋದಿ ಅವರ ಸಂಪುಟದಲ್ಲಿ ಕರ್ನಾಟಕದ ಐವರಿಗೆ ಮಂತ್ರಿ ಭಾಗ್ಯ ದೊರಕುವುದು ಬಹುತೇಕ ಖಚಿತವಾಗಿದೆ. ಧಾರವಾಡ ಲೋಕಸಭಾ ಕ್ಷೇತ್ರದ ಸಂಸದ ಪ್ರಹ್ಲಾದ್ ಜೋಶಿ, ಬೆಂಗಳೂರು ಉತ್ತರ ಕ್ಷೇತ್ರದ ಸಂಸದೆ ಶೋಭಾ ಕರಂದ್ಲಾಜೆ, ಮಂಡ್ಯ ಲೋಕಸಭಾ ಕ್ಷೇತ್ರದ ಸಂಸದ ಎಚ್.ಡಿ ಕುಮಾರಸ್ವಾಮಿ, ತುಮಕೂರ ಕ್ಷೇತ್ರದ ಸಂಸದ ವಿ.ಸೋಮಣ್ಣ ಹಾಗೂ ರಾಜ್ಯಸಭಾ ಸದಸ್ಯರಾದ ನಿರ್ಮಲ ಸೀತಾರಾಮನ್ ಅವರ ಹೆಸರುಗಳು ಸಂಭಾವ್ಯರ ಪಟ್ಟಿಯಲ್ಲಿವೆ.
ಅದರಲ್ಲಿ ಪ್ರಹ್ಲಾದ್ ಜೋಶಿ ಹಾಗೂ ಎಚ್.ಡಿ ಕುಮಾರಸ್ವಾಮಿ ಅವರಿಗೆ ಸಂಪುಟ ದರ್ಜೆಯ ಖಾತೆ ಹಾಗೂ ಶೋಭಾ ಕರಂದ್ಲಾಜೆ ಹಾಗೂ ವಿ.ಸೋಮಣ್ಣಗೆ ರಾಜ್ಯ ಖಾತೆ ಸಿಗಲಿದೆ ಎಂದು ತಿಳಿದು ಬಂದಿದೆ.
ಕೋಟೆ ತಾಲ್ಲೂಕಿನ ಮುಸ್ಲಿಂ ಸಮುದಾಯದ ಪ್ರಥಮ ವೈದ್ಯೆ ಎಂಬ ಹೆಗ್ಗಳಿಕೆ ಹೊಂದಿದ ಜಹಾನ ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕಿನ…
ಅಭಿಮಾನಿಗಳು, ನಿರ್ಮಾಪಕರ ಸಂಘದ ಆಕ್ರೋಶ ಬೆಂಗಳೂರು : ಪದ್ಮಭೂಷಣ ಡಾ.ರಾಜ್‌ಕುಮಾರ್ ಅವರ ಸ್ಮಾರಕದ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ವಿವಾದಾತ್ಮಕ ಹೇಳಿಕೆ…
ಮಡಿಕೇರಿ : ಶಿಕ್ಷಕಿಯೊಬ್ಬರು ಬಂದೂಕಿನಿಂದ ಗುಂಡು ಹೊಡೆದುಕೊಂಡು ಸಾವಿಗೆ ಶರಣಾದ ಘಟನೆ ಕೊಡಗು ಜಿಲ್ಲೆಯ ಮಡಿಕೇರಿ ತಾಲ್ಲೂಕಿನ ಚೇರಂಬಾಣೆಯಲ್ಲಿ ನಡೆದಿದೆ.…
ನವದೆಹಲಿ : ಆಮ್ ಆದ್ಮಿ ಪಕ್ಷದಲ್ಲಿ ಭಾರೀ ರಾಜಕೀಯ ಬೆಳವಣಿಗೆ ನಡೆದಿದ್ದು, ಪಕ್ಷ ತೊರೆದು ಭಾರತೀಯ ಜನತಾ ಪಕ್ಷಕ್ಕೆ (ಬಿಜೆಪಿ)…
ಬೆಂಗಳೂರು : ರಾಜ್ಯದ ಎಲ್ಲಾ ಸರ್ಕಾರಿ, ಅನುದಾನಿತ ಹಾಗೂ ಅನುದಾನ ರಹಿತ ಶಾಲೆಗಳಲ್ಲಿ ಪ್ರತಿದಿನ ದಿನಪತ್ರಿಕೆ ಓದಿಸುವುದನ್ನು ಕಡ್ಡಾಯಗೊಳಿಸಲು ಶಿಕ್ಷಣ…
ನವದೆಹಲಿ : ದೇಶದಾದ್ಯಂತ ನಡೆಯುತ್ತಿರುವ ಜನಗಣತಿ ಕಾರ್ಯವು ಕೇವಲ ಸರ್ಕಾರದ ಕೆಲಸವಲ್ಲ, ಬದಲಾಗಿ ಪ್ರತಿ ನಾಗರಿಕರ ಜವಾಬ್ದಾರಿಯಾಗಿದೆ. ಇದರಲ್ಲಿ ಎಲ್ಲರ…