ದೇಶ- ವಿದೇಶ

23 ವರ್ಷದ ಹಳೆಯ ಮಾನನಷ್ಟ ಪ್ರಕರಣ: ಮೇಧಾ ಪಾಟ್ಕರ್‌ಗೆ 5 ತಿಂಗಳು ಜೈಲು

ನವದೆಹಲಿ: 23 ವರ್ಷದ ಹಳೆಯ ಮಾನನಷ್ಟ ಮೊಕದ್ದಮೆ ಪ್ರಕರಣಕ್ಕೆ ಸಂಬಂಧಿಸಿದಂತೆ ನರ್ಮದಾ ಬಚಾವೋ ಆಂದೋಲನದ ಪ್ರಮುಖ ಹೋರಾಟಗಾರ್ತಿ ಮೇಧಾ ಪಾಟ್ಕರ್‌ ಅವರಿಗೆ ದೆಹಲಿ ನ್ಯಾಯಾಲಯ ಐದು ತಿಂಗಳ ಸೆರೆವಾಸ ಶಿಕ್ಷೆ ವಿಧಿಸಿ ಆದೇಶಿಸಿದೆ.

ಈಗಿನ ದೆಹಲಿ ಲೆಫ್ಟಿನೆಂಟ್‌ ಗವರ್ನರ್‌ ವಿ.ಕೆ ಸಕ್ಸೆನಾ ಅವರು 23 ವರ್ಷಗಳ ಹಿಂದೆ ಮೇಧಾ ಅವರ ವಿರುದ್ಧ ಮಾನನಷ್ಟ ಪ್ರಕರಣ ದಾಖಲಿಸಿದ್ದರು.

ಇದನ್ನು ಪರಿಶಿಲೀಸಿದ ನ್ಯಾಯಾಲಯ ಮೇಧಾ ಅವರಿಗೆ ಐದು ತಿಂಗಳು ಸಜೆ ಹಾಗೂ ಹತ್ತು ಲಕ್ಷ ಪರಿಹಾರ ನೀಡುವಂತೆ ತೀರ್ಪು ನೀಡಿದೆ. ಜತೆಗೆ ಇದೇ ವೇಳೆ ಈ ಆದೇಶವನ್ನು 30 ದಿನಗಳ ಕಾಲ ಅಮಾನತ್ತಿನಲ್ಲಿರಿಸಿದ್ದು, ತೀರ್ಪು ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.

ಮೇಧಾ ಅವರ ಆರೋಗ್ಯ ಮತ್ತು ವಯಸ್ಸಿನ ಸ್ಥಿತಿಗತಿ ಅರಿತು ಒಂದು ಅಥವಾ ಎರಡು ವರ್ಷಗಳ ದೀರ್ಘಾವಧಿಯ ಶಿಕ್ಷೆಯನ್ನು ವಿಧಿಸುತ್ತಿಲ್ಲ ಎಂದು ನ್ಯಾಯಾಲಯ ಹೇಳಿರುವುದಾಗಿ ಬಾರ್‌ ಅಂಡ್‌ ಬೆಂಚ್‌ ವರದಿ ಮಾಡಿದೆ.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಗರ್ಭಕಂಠದ ಕ್ಯಾನ್ಸರ್‌ ತಡೆಗಟ್ಟುವ ರಾಷ್ಟ್ರವ್ಯಾಪಿ ಲಸಿಕೆ ಕಾರ್ಯಕ್ರಮಕ್ಕೆ ಪ್ರಧಾನಿ ಮೋದಿ ಚಾಲನೆ

ನವದೆಹಲಿ: ಗರ್ಭಕಂಠದ ಕ್ಯಾನ್ಸರ್ ತಡೆಗಟ್ಟುವ ರಾಷ್ಟ್ರ ವ್ಯಾಪಿ ಲಸಿಕೆ ಕಾರ್ಯಕ್ರಮಕ್ಕೆ ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಿದ್ದಾರೆ. ರಾಜಸ್ಥಾನದ ಅಜ್ಮಿರ್‍ನಲ್ಲಿ…

5 mins ago

ಮಾರ್ಚ್.‌3ರಂದು ರಕ್ತಚಂದ್ರಗ್ರಹಣ: ನಾನಾ ದೇವಾಲಯಗಳಲ್ಲಿ ದರ್ಶನ ಸಮಯ ಬದಲಾವಣೆ

ಮೈಸೂರು: ಮಾರ್ಚ್.‌3ರಂದು ರಕ್ತಚಂದ್ರಗ್ರಹಣದ ಹಿನ್ನೆಲೆಯಲ್ಲಿ ಮೈಸೂರು ಚಾಮುಂಡೇಶ್ವರಿ ದೇವಾಲಯ ಸೇರಿದಂತೆ ರಾಜ್ಯದ ಹಲವು ದೇವಾಲಯಗಳಲ್ಲಿ ಭಕ್ತರ ದರ್ಶನದ ಸಮಯವನ್ನು ಬದಲಾವಣೆ…

28 mins ago

ಹಿಂದೂ ಯುವಕನ ಮೇಲೆ ಹಲ್ಲೆ ಪ್ರಕರಣ: ಕೈ ಶಾಸಕ ಮಂಥರ್‌ ಗೌಡ ಖಂಡನೆ

ಕೊಡಗು: ಅನ್ಯಕೋಮಿನ ಯುವಕರು ಹಿಂದೂ ಕಾರ್ಯಕರ್ತನ ಮೇಲೆ ಹಲ್ಲೆ ನಡೆಸಿದ ಪ್ರಕರಣವನ್ನು ಕಾಂಗ್ರೆಸ್‌ ಶಾಸಕ ಮಂಥರ್‌ ಗೌಡ ಖಂಡಿಸಿದ್ದಾರೆ. ಈ…

1 hour ago

ಚಂದ್ರಗ್ರಹಣದ ವೇಳೆ ಧರ್ಮಸ್ಥಳ ಮಂಜುನಾಥಸ್ವಾಮಿ ದೇವಸ್ಥಾನದಲ್ಲಿ ದರ್ಶನ ಸಮಯ ಬದಲಾವಣೆ

ಮಂಗಳೂರು: ಮಾರ್ಚ್.‌3ರಂದು ಈ ವರ್ಷದ ಮೊದಲ ಚಂದ್ರಗ್ರಹಣ ಸಂಭವಿಸಲಿದೆ. ರಕ್ತ ಚಂದ್ರಗ್ರಹಣದ ಹಿನ್ನೆಲೆಯಲ್ಲಿ ರಾಜ್ಯದ ಹಲವು ದೇವಾಲಯಗಳ ದರ್ಶನ ಸಮಯ…

3 hours ago

ಎರಡು ಕ್ಷೇತ್ರದ ಉಪಚುನಾವಣೆ: ಸಿಎಂ, ಡಿಸಿಎಂ ಮಹತ್ವದ ಸಭೆ

ಬೆಂಗಳೂರು: ಕಾಂಗ್ರೆಸ್‌ ಶಾಸಕರ ನಿಧನದ ಕಾರಣ ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ಕ್ಷೇತ್ರದ ಉಪಚುನಾವಣೆಗೆ ಶೀಘ್ರದಲ್ಲೇ ದಿನಾಂಕ ಘೋಷಣೆ ಆಗಲಿದೆ.…

3 hours ago

ಶಾಸಕರ ಡಿನ್ನರ್‌ ಮೀಟಿಂಗ್‌: ಮಾಜಿ ಸಂಸದ ಡಿ.ಕೆ.ಸುರೇಶ್‌ ಹೇಳಿದ್ದಿಷ್ಟು.!

ಬೆಂಗಳೂರು: ಡಿಸಿಎಂ ಡಿ.ಕೆ.ಶಿವಕುಮಾರ್‌ ಬಣದ ಕೆಲ ಶಾಸಕರು ಖಾಸಗಿ ಹೋಟೆಲ್‌ನಲ್ಲಿ ಡಿನ್ನರ್‌ ಮೀಟಿಂಗ್‌ ನಡೆಸಿದ್ದಾರೆ ಎಂಬ ಸುದ್ದಿ ಹಿನ್ನೆಲೆಯಲ್ಲಿ ಈ…

3 hours ago